ಪಿಓಪಿ ಗಣೇಶ ವಿಗ್ರಹಗಳ ತಡೆಗೆ ಕಟ್ಟುನಿಟ್ಟಿನ ಕ್ರಮ: ಜಿಲ್ಲಾಧಿಕಾರಿ ದಿವ್ಯ ಪ್ರಭು
ಧಾರವಾಡ, 2 ಆಗಸ್ಟ್ (ಹಿ.ಸ.): ಆ್ಯಂಕರ್:ಪ್ಲಾಸ್ಟರ್ ಆಫ್ ಪ್ಯಾರಿಸ್ (ಪಿಓಪಿ) ಗಣೇಶ ವಿಗ್ರಹಗಳ ತಡೆಗಟ್ಟಲು ಧಾರವಾಡ ಜಿಲ್ಲೆಯಲ್ಲಿ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಅಧಿಕಾರಿಗಳಿಗೆ ಸೂಚನೆ ನೀಡಿದರು. ಪಿಓಪಿ ವಿಗ್ರಹಗಳ ಸಾಗಣೆ, ದಾಸ್ತಾನು ಮತ್ತು ಮಾರಾಟ ಪತ್ತೆಯಾದರೆ, ದಂಡ ವಿ
Meeting


ಧಾರವಾಡ, 2 ಆಗಸ್ಟ್ (ಹಿ.ಸ.):

ಆ್ಯಂಕರ್:ಪ್ಲಾಸ್ಟರ್ ಆಫ್ ಪ್ಯಾರಿಸ್ (ಪಿಓಪಿ) ಗಣೇಶ ವಿಗ್ರಹಗಳ ತಡೆಗಟ್ಟಲು ಧಾರವಾಡ ಜಿಲ್ಲೆಯಲ್ಲಿ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಅಧಿಕಾರಿಗಳಿಗೆ ಸೂಚನೆ ನೀಡಿದರು. ಪಿಓಪಿ ವಿಗ್ರಹಗಳ ಸಾಗಣೆ, ದಾಸ್ತಾನು ಮತ್ತು ಮಾರಾಟ ಪತ್ತೆಯಾದರೆ, ದಂಡ ವಿಧಿಸಿ ಕಾನೂನು ಕ್ರಮ ಜರುಗಿಸಬೇಕು ಎಂದು ಹೇಳಿದರು.

ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಜಲಮಾಲಿನ್ಯ ತಡೆ ಕಾರ್ಯಪಡೆ ಸಭೆಯಲ್ಲಿ ಮಾತನಾಡಿದ ಅವರು, ಪಿಓಪಿ ವಿಗ್ರಹಗಳು ಪರಿಸರಕ್ಕೆ ಹಾನಿಕಾರಕವಾಗಿದ್ದು, ನೀರಿನಲ್ಲಿ ಕರಗದೆ ಜಲಮೂಲಗಳನ್ನು ಮಾಲಿನ್ಯಗೊಳಿಸುತ್ತವೆ ಎಂದು ವಿವರಿಸಿದರು. ಹೈಕೋರ್ಟ್ ನೀಡಿರುವ ಆದೇಶವನ್ನು, ಎಲ್ಲಾ ಇಲಾಖೆಗಳು ಕಡ್ಡಾಯವಾಗಿ ಅನುಸರಿಸಬೇಕೆಂದು ಸೂಚಿಸಿದರು.

ಗಡಿ ಪ್ರದೇಶಗಳಲ್ಲಿ ಚೆಕ್‌ಪೋಸ್ಟ್‌ಗಳನ್ನು ಸ್ಥಾಪಿಸಿ, ಪಿಓಪಿ ವಿಗ್ರಹಗಳ ಪ್ರವೇಶವನ್ನು ತಡೆಯಬೇಕು. ನಗರ ಪ್ರದೇಶದಲ್ಲಿ ಮಾರಾಟವಾದರೆ ಸ್ಥಳೀಯ ಸಂಸ್ಥೆ ಅಥವಾ ಸಹಾಯವಾಣಿ ಸಂಖ್ಯೆಗಳಿಗೆ ತಿಳಿಸಬೇಕು ಎಂದು ಅವರು ಸಾರ್ವಜನಿಕರಿಗೆ ಕರೆ ನೀಡಿದರು.

---------------

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande