ವಿದ್ಯಾರ್ಥಿಗಳು ಸಾಂಸ್ಕೃತಿಕ ತರಬೇತಿಗಳಲ್ಲಿ ಸಕ್ರಿಯವಾಗಿ ಭಾಗವಹಿಸಿ : ಗಾದಿಲಿಂಗಪ್ಪ
ಬಳ್ಳಾರಿ, 02 ಆಗಸ್ಟ್ (ಹಿ.ಸ.) : ಆ್ಯಂಕರ್ : ಶಾಸ್ತ್ರೀಯ ನೃತ್ಯ ಕಲೆಯು ಕ್ರಿಯಾತ್ಮಕದಿಂದಲೇ ಹುಟ್ಟುತ್ತದೆ. ಈ ಕ್ರಿಯೆ ಸಕ್ರಿಯವಾಗಿ ನಡೆದುಕೊಂಡು ಹೋದರೆ ಈ ಕಲೆಯು ನಿರಂತರವಾಗಿರುತ್ತದೆ. ವಿದ್ಯಾರ್ಥಿಗಳು ಓದಿನ ಜೊತೆಗೆ ಸಾಂಸ್ಕೃತಿಕ ತರಬೇತಿಗಳಲ್ಲಿ ಸಕ್ರಿಯವಾಗಿ ಭಾಗವಹಿಸಿ ಎಂದು ತಾಲ್ಲೂಕು ಪರಿಶಿಷ್ಟ
ವಿದ್ಯಾಭ್ಯಾಸದ ಜೊತೆಗೆ ಕಲೆಗಳಲ್ಲಿ ಭಾಗವಹಿಸಿ: ರಾಜೇಶ್ವರಿ.ಬಿ


ವಿದ್ಯಾಭ್ಯಾಸದ ಜೊತೆಗೆ ಕಲೆಗಳಲ್ಲಿ ಭಾಗವಹಿಸಿ: ರಾಜೇಶ್ವರಿ.ಬಿ


ಬಳ್ಳಾರಿ, 02 ಆಗಸ್ಟ್ (ಹಿ.ಸ.) :

ಆ್ಯಂಕರ್ : ಶಾಸ್ತ್ರೀಯ ನೃತ್ಯ ಕಲೆಯು ಕ್ರಿಯಾತ್ಮಕದಿಂದಲೇ ಹುಟ್ಟುತ್ತದೆ. ಈ ಕ್ರಿಯೆ ಸಕ್ರಿಯವಾಗಿ ನಡೆದುಕೊಂಡು ಹೋದರೆ ಈ ಕಲೆಯು ನಿರಂತರವಾಗಿರುತ್ತದೆ. ವಿದ್ಯಾರ್ಥಿಗಳು ಓದಿನ ಜೊತೆಗೆ ಸಾಂಸ್ಕೃತಿಕ ತರಬೇತಿಗಳಲ್ಲಿ ಸಕ್ರಿಯವಾಗಿ ಭಾಗವಹಿಸಿ ಎಂದು ತಾಲ್ಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಗಾದಿಲಿಂಗಪ್ಪ ಅವರು ಹೇಳಿದರು.

ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಬಳ್ಳಾರಿ ಇವರ ಸಂಯುಕ್ತಾಶ್ರಯದಲ್ಲಿ ನಗರದ ಕೌಲ್ ಬಜಾರ್ ನ ಪರಿಶಿಷ್ಟ ವರ್ಗಗಳ ಸರ್ಕಾರಿ ಮೆಟ್ರಿಕ್ ನಂತರ ಬಾಲಕಿಯರ ವಸತಿ ನಿಲಯದಲ್ಲಿ ಶುಕ್ರವಾರ ಆಯೋಜಿಸಲಾಗಿದ್ದ ಪರಿಶಿಷ್ಟ ಪಂಗಡದ ವಿದ್ಯಾರ್ಥಿನಿಯರಿಗೆ “ಶಾಸ್ತ್ರೀಯ ನೃತ್ಯ” ಕಲಿಕಾ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಪ್ರೋತ್ಸಾಹದಾಯಕ ಕಲೆಗಳಲ್ಲಿ ಒಂದಾದ ಶಾಸ್ತ್ರೀಯ ನೃತ್ಯವು ಜೀವನಕ್ಕೆ ಉತ್ಸಾಹ ತುಂಬುತ್ತದೆ. ವಿದ್ಯಾರ್ಥಿಗಳು ಇಂತಹ ಅವಕಾಶಗಳನ್ನು ಸದುಪಯೋಗಪಡಿಸಿಕೊಂಡು ವಿವಿಧ ಕಲೆಗಳಲ್ಲಿ ಯಾವುದೇ ಭಯವಿಲ್ಲದೆ ಭಾಗವಹಿಸಿ ತಮ್ಮದೇ ಆದ ಛಾಪು ಮೂಡಿಸಬೇಕು ಎಂದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ.ನಾಗರಾಜ ಪ್ರಾಸ್ತಾವಿಕವಾಗಿ ಮಾತನಾಡಿ, ವಿದ್ಯಾರ್ಥಿಗಳ ಪ್ರತಿಭೆಗಳನ್ನು ಹೊರಹಾಕಲು ಇಂತಹ ಕಲಿಕಾ ತರಬೇತಿಯನ್ನು ಆಯೋಜಿಸಲಾಗಿದೆ. ಇಂತಹ ಅವಕಾಶಗಳನ್ನು ಉಪಯೋಗಿಸಿಕೊಂಡು ವಿದ್ಯಾರ್ಥಿಗಳು ಮುಖ್ಯ ವಾಹಿನಿಗೆ ಬರಬೇಕು. ಈ ತರಬೇತಿಯು 6 ತಿಂಗಳು ಕಾಲ ನಡೆಯಲಿದ್ದು, ವಾರಕ್ಕೆ ಮೂರು ದಿನದಂತೆ 2 ಗಂಟೆಗಳ ಅವಧಿ ತರಬೇತಿ ನೀಡಲಾಗುತ್ತದೆ. ಆಸಕ್ತಿ ಹೊಂದಿದ ಎಲ್ಲ ವಿದ್ಯಾರ್ಥಿಗಳು ತರಬೇತಿಯಲ್ಲಿ ಪಾಲ್ಗೊಂಡು ತಮ್ಮಲ್ಲಿರುವ ಕಲೆಯನ್ನು ಪ್ರದರ್ಶಿಸಬಹುದು ಎಂದು ವಿದ್ಯಾರ್ಥಿಗಳಿಗೆ ಹೇಳಿದರು.

ಬಳಿಕ ವಿದ್ಯಾರ್ಥಿನಿಯರಿಗೆ “ಶಾಸ್ತ್ರೀಯ ನೃತ್ಯ” ಕಲಿಕಾ ತರಬೇತಿ ನಡೆಸಲಾಯಿತು.

ಈ ಸಂದರ್ಭದಲ್ಲಿ ವಿದ್ಯಾರ್ಥಿ ನಿಲಯದ ಮೇಲ್ವಿಚಾರಕರಾದ ಲಕ್ಷ್ಮಿ ಪ್ರಸನ್ನ, ನೃತ್ಯ ತರಬೇತಿ ಕಲಾವಿದರಾದ ಡಿ.ಇಂದ್ರಾಣಿ ಸೇರಿದಂತೆ ಇಲಾಖೆಯ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande