ರಸಗೊಬ್ಬರದ ಕೊರತೆ ನೀಗಿಸಲು ಕ್ರಮ ವಹಿಸಿ : ಡಾ. ಕೆ.ವಿ. ತ್ರಿಲೋಕಚಂದ್ರ
ಬಳ್ಳಾರಿ, 02 ಆಗಸ್ಟ್ (ಹಿ.ಸ.) : ಆ್ಯಂಕರ್ : ಬಳ್ಳಾರಿ ಜಿಲ್ಲೆಯಲ್ಲಿ ಅಗತ್ಯ ರಸಗೊಬ್ಬರಗಳ ಪೂರೈಕೆಗೆ ಮುಂಜಾಗ್ರತೆ ವಹಿಸಬೇಕು ಎಂದು ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರು, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ. ಕೆ.ವಿ. ತ್ರಿಲೋಕಚಂದ್ರ ಅವರು ತಿಳಿಸಿದ್ದಾರೆ. ಜಿಲ್ಲಾ ಪಂಚಾಯತ್ ನ ನಜೀರ್ ಸಭಾಂಗಣದಲ್ಲಿ ಶ
ರಸಗೊಬ್ಬರದ ಕೊರತೆ ನೀಗಿಸಲು ಕ್ರಮವಹಿಸಿ : ಡಾ. ಕೆ.ವಿ. ತ್ರಿಲೋಕಚಂದ್ರ


ರಸಗೊಬ್ಬರದ ಕೊರತೆ ನೀಗಿಸಲು ಕ್ರಮವಹಿಸಿ : ಡಾ. ಕೆ.ವಿ. ತ್ರಿಲೋಕಚಂದ್ರ


ರಸಗೊಬ್ಬರದ ಕೊರತೆ ನೀಗಿಸಲು ಕ್ರಮವಹಿಸಿ : ಡಾ. ಕೆ.ವಿ. ತ್ರಿಲೋಕಚಂದ್ರ


ಬಳ್ಳಾರಿ, 02 ಆಗಸ್ಟ್ (ಹಿ.ಸ.) :

ಆ್ಯಂಕರ್ : ಬಳ್ಳಾರಿ ಜಿಲ್ಲೆಯಲ್ಲಿ ಅಗತ್ಯ ರಸಗೊಬ್ಬರಗಳ ಪೂರೈಕೆಗೆ ಮುಂಜಾಗ್ರತೆ ವಹಿಸಬೇಕು ಎಂದು ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರು, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ. ಕೆ.ವಿ. ತ್ರಿಲೋಕಚಂದ್ರ ಅವರು ತಿಳಿಸಿದ್ದಾರೆ.

ಜಿಲ್ಲಾ ಪಂಚಾಯತ್ ನ ನಜೀರ್ ಸಭಾಂಗಣದಲ್ಲಿ ಶನಿವಾರ ನಡೆದ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ (20 ಅಂಶಗಳ) ತ್ರೈಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಬಳ್ಳಾರಿ ಜಿಲ್ಲೆಯಲ್ಲಿ ಮುಂಗಾರು ಹಂಗಾಮಿನ ಜುಲೈ ಮಾಹೆಯವರೆಗೆ ಒಟ್ಟು 27025 ಮೆ.ಟನ್‍ಗಳ ರಸಗೊಬ್ಬರ ಬೇಡಿಕೆ ಇದೆ. ಪ್ರಾರಂಭಿಕ ಶಿಲ್ಕು ಸೇರಿ 34,163 ಮೆ.ಟನ್‍ಗೆ ಬದಲು 25,887 ಮೆ.ಟನ್ ವಿತರಣೆಯಾಗಿ 8,286 ಮೆ.ಟನ್‍ಗಳಷ್ಟು ದಾಸ್ತಾನಿದೆ ಎಂದು ಜಂಟಿ ಕೃಷಿ ನಿರ್ದೇಶಕರು ಸಭೆಗೆ ತಿಳಿಸಿದರು.

ಕೇಂದ್ರ ಹಾಗೂ ರಾಜ್ಯ ಸರ್ಕಾರದ ನಿರ್ದೇಶನಗಳನ್ವಯ ಯೂರಿಯಾ ಗೊಬ್ಬರದ ಅವೈಜ್ಞಾನಿಕ ಬಳಕೆಯ ದುಷ್ಪರಿಣಾಮಗಳು ಮತ್ತು ವೈಜ್ಞಾನಿಕವಾಗಿ ಅಭಿವೃದ್ಧಿಪಡಿಸಲಾದ ನ್ಯಾನೋ ರಸಗೊಬ್ಬರಗಳನ್ನು ಪರ್ಯಾಯವಾಗಿ ಬಳಸುವ ಕುರಿತು ರೈತರಲ್ಲಿ ಅರಿವು ಮೂಡಿಸಲಾಗುತ್ತಿದೆ ಎಂದು ಸಭೆಯ ಗಮನಕ್ಕೆ ತಂದರು.

ಕೃಷಿ, ತೋಟಗಾರಿಕೆ ಯೋಜನೆಗಳನ್ನು ರೈತರಿಗೆ ಸಕಾಲಕ್ಕೆ ತಲುಪಿಸಬೇಕು. ಜಿಲ್ಲೆಯಲ್ಲಿ ಹೈನುಗಾರಿಕೆಗೆ ಹೆಚ್ಚು ಪೆÇ್ರೀತ್ಸಾಹ ನೀಡಬೇಕಿದೆ. ಜಿಲ್ಲೆಯ ಸಾರ್ವಜನಿಕರಿಗೆ ಆರೋಗ್ಯದ ಹಿತದೃಷ್ಟಿಯಿಂದ ಆಸ್ಪತ್ರೆಗಳಲ್ಲಿ ಉತ್ತಮ ಚಿಕಿತ್ಸೆ ಲಭ್ಯವಾಗಬೇಕು. ಆಸ್ಪತ್ರೆ ಸೇರಿದಂತೆ ಸರ್ಕಾರಿ ಸಂಸ್ಥೆಗಳಲ್ಲಿ ಮೂಲಭೂತ ಸೌಲಭ್ಯಗಳು ಇರುವಂತೆ ಅಧಿಕಾರಿ ವರ್ಗ ನಿಗಾ ವಹಿಸಬೇಕು ಎಂದು ಆರೋಗ್ಯಾಧಿಕಾರಿಗಳಿಗೆ ಸಲಹೆ ನೀಡಿದರು.

ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು, ಬಿಎಂಸಿಆರ್‍ಸಿ ಯಲ್ಲಿ ಆಂಬುಲೆನ್ಸ್ ವ್ಯವಸ್ಥೆ ಸಿಗುತ್ತಿಲ್ಲ. ಸಾರ್ವಜನಿಕರಿಗೆ ಸಕಾಲದಲ್ಲಿ ವೈದ್ಯರು ಲಭಿಸುತ್ತಿಲ್ಲ. ರಕ್ತ, ಔಷಧಿ ಹಾಗೂ ಸಾಮಾನ್ಯ ವ್ಹೀಲ್‍ಚೇರ್‍ಗೂ ಹಣ ಪಡೆಯುತ್ತಿದ್ದಾರೆ. ಗೃಹರಕ್ಷಕದಳ ಸಿಬ್ಬಂದಿ, ಹೊರಗುತ್ತಿಗೆ ನೌಕರರು, ವೈದ್ಯರು ಸಾರ್ವಜನಿಕರಿಗೆ ಸರಿಯಾಗಿ ಸ್ಪಂದಿಸುವುದಿಲ್ಲ ಎಂದು ಬಿಎಂಸಿಆರ್‍ಸಿ ನಿರ್ದೇಶಕರ ಮೇಲೆ ಅಸಮಾಧಾನ ಹೊರಹಾಕಿದರು.

ಕೇವಲ ಕಟ್ಟಡ ನಿರ್ಮಾಣಕ್ಕೆ ಟೆಂಡರ್ ಪ್ರಕ್ರಿಯೆ, ಚಿಕಿತ್ಸೆ ಉಪಕರಣ ಕುರಿತಂತೆ ಪ್ರಸ್ತಾಪಿಸುವುದಲ್ಲ, ಮುಖ್ಯವಾಗಿ ಯಾವುದೇ ಸಭೆಗಳಿಗೂ ಹಾಜರಾಗುವುದಿಲ್ಲ ಎಂದ ಅವರು, ಸಾರ್ವಜನಿಕರಿಗೆ ಉತ್ತಮ ಆರೋಗ್ಯ ಸೇವೆ ನೀಡಬೇಕು ಎಂದು ಬಿಎಂಸಿಆರ್‍ಸಿ ನಿರ್ದೇಶಕರಿಗೆ ಖಡಕ್ ಸೂಚನೆ ನೀಡಿದರು.

ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ತ್ರಿಲೋಕಚಂದ್ರ ಅವರು, ಜಿಲ್ಲಾ ಮಟ್ಟದ ವಿವಿಧ ಇಲಾಖೆ ಅಧಿಕಾರಿಗಳು ತಮ್ಮ ಇಲಾಖೆಗೆ ಸಂಬಂಧಿಸಿದ ಯೋಜನೆಗಳ ಸಮರ್ಪಕ ಅನುಷ್ಠಾನದೆಡೆಗೆ ಗಮನ ಹರಿಸಬೇಕು. ನಿಗದಿಪಡಿಸಿದ ಗುರಿ ಸಾಧನೆಯಡೆಗೆ ಕ್ರಿಯಾಶೀಲವಾಗಿ ಕೆಲಸ ನಿರ್ವಹಿಸಬೇಕು ಎಂದು ನಿರ್ದೇಶನ ನೀಡಿದರು.

ಜಿಲ್ಲೆಯಲ್ಲಿನ ಅಂಗನವಾಡಿ ಕೇಂದ್ರಗಳ ಮತ್ತು ಶಾಲೆಗಳ ಮೇಲೆ ಯಾವುದೇ ರೀತಿಯ ವಿದ್ಯುತ್ ಲೈನ್‍ಗಳು ಹಾದುಹೋಗುವಂತಿಲ್ಲ, ಈ ಕುರಿತು ನ್ಯಾಯಾಲಯದ ಆದೇಶವಿದ್ದು, ಕೂಡಲೇ ಡಿಡಿಪಿಐ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಅಧಿಕಾರಿ, ಜೆಸ್ಕಾಂ ಅಧಿಕಾರಿಗಳು ಸರ್ವೆ ನಡೆಸಿ ತೆರವುಗೊಳಿಸುವ ಕಾರ್ಯ ಮಾಡಬೇಕು ಎಂದು ನಿರ್ದೇಶನ ನೀಡಿದರು.

ಜಿಲ್ಲೆಯ ವಸತಿ ನಿಲಯಗಳಲ್ಲಿ ಆಶ್ರಯ ಪಡೆದು ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಉತ್ತಮ ಗುಣಮಟ್ಟದ ಸೌಕರ್ಯಗಳು ತಲುಪಬೇಕು. ಜೊತೆಗೆ ಶೈಕ್ಷಣಿಕ ಗುಣಮಟ್ಟ ಸುಧಾರಣೆಯಡೆಗೆ ಸಂಬಂಧಿತ ಇಲಾಖೆಯ ಮುಖ್ಯಸ್ಥರು ಅಗತ್ಯವಿರುವ ಕ್ರಮಗಳನ್ನು ಕೈಗೊಂಡು ಜಿಲ್ಲೆಯ ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಮುಂದಾಗಬೇಕು ಎಂದು ಸೂಚಿಸಿದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹ್ಯಾರೀಸ್ ಸುಮೈರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಶೋಭಾರಾಣಿ ವಿ.ಜೆ ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ತಾಪಂ ಇಒಗಳು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande