ಅತಿಥಿ ಉಪನ್ಯಾಸಕರ ನೇಮಕಕ್ಕೆ ಆಗ್ರಹಿಸಿ ಎಬಿಬಿಪಿ ಪ್ರತಿಭಟನೆ
ವಿಜಯಪುರ, 22 ಆಗಸ್ಟ್ (ಹಿ.ಸ.) : ಆ್ಯಂಕರ್ : ಅತಿಥಿ ಉಪನ್ಯಾಸಕರ ನೇಮಕ ಹಾಗೂ ಇತರ ಬೇಡಿಕೆಗಳ ಈಡೇರಿಕೆಗಾಗಿ ಎಬಿವಿಪಿ ನೇತೃತ್ವದಲ್ಲಿ ವಿದ್ಯಾರ್ಥಿಗಳು ವಿಜಯಪುರ ನಗರದ ಜಿಲ್ಲಾಧಿಕಾರಿ ಕಚೇರಿಯ ಎದುರು ಪ್ರತಿಭಟನೆ ನಡೆಸಿದರು. ೨೦೨೫-೨೬ನೇ ಸಾಲಿಗೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸ
ಪ್ರತಿಭಟನೆ


ವಿಜಯಪುರ, 22 ಆಗಸ್ಟ್ (ಹಿ.ಸ.) :

ಆ್ಯಂಕರ್ : ಅತಿಥಿ ಉಪನ್ಯಾಸಕರ ನೇಮಕ ಹಾಗೂ ಇತರ ಬೇಡಿಕೆಗಳ ಈಡೇರಿಕೆಗಾಗಿ ಎಬಿವಿಪಿ ನೇತೃತ್ವದಲ್ಲಿ ವಿದ್ಯಾರ್ಥಿಗಳು ವಿಜಯಪುರ ನಗರದ ಜಿಲ್ಲಾಧಿಕಾರಿ ಕಚೇರಿಯ ಎದುರು ಪ್ರತಿಭಟನೆ ನಡೆಸಿದರು.

೨೦೨೫-೨೬ನೇ ಸಾಲಿಗೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರ ನೇಮಕ ಮಾಡಬೇಕು. ರಾಜ್ಯದಲ್ಲಿ ಪದವಿ ತರಗತಿಗಳು ಪ್ರಾರಂಭವಾಗಿ ತಿಂಗಳು ಕಳೆದರೂ ಸಹಿತ ಇಲ್ಲಿಯವರೆಗೆ ಅತಿಥಿ ಉಪನ್ಯಾಸಕರ ನೇಮಕಾತಿ ಆಗದೆ ಇರುವ ಕಾರಣ ವಿದ್ಯಾರ್ಥಿಗಳಿಗೆ ಸರಿಯಾದ ರೀತಿಯ ತರಗತಿಗಳು ನಡೆಯುತ್ತಿಲ್ಲ. ರಾಜ್ಯದ ಪದವಿ ಕಾಲೇಜುಗಳು ಅತಿಥಿ ಉಪನ್ಯಾಸಕರಿಂದ ಅವಲಂಬಿತವಾಗಿರುವ ಕಾರಣ ಹಲವಾರು ಸರ್ಕಾರಿ ಕಾಲೇಜುಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಇದರಿಂದ ಬಹಳಷ್ಟು ತೊಂದರೆಯಾಗುತ್ತಿದೆ. ಬಡ, ಕೂಲಿ ಕಾರ್ಮಿಕರ ಮಕ್ಕಳು ಸರಕಾರಿ ಕ್ಯಾಂಪಸ್‌ಗಳಲ್ಲಿ ಅಧ್ಯಯನ ಮಾಡುವ ಉದ್ದೇಶದಿಂದ ದಾಖಲಾತಿ ಮಾಡಿರುತ್ತಾರೆ. ಆದರೆ ಪ್ರತಿ ವರ್ಷ ಈ ರೀತಿಯ ವ್ಯವಸ್ಥೆಯಿಂದ ವಿದ್ಯಾರ್ಥಿಗಳ ಶಿಕ್ಷಣದಲ್ಲಿ ಹಿಂದುಳಿಯುತ್ತಿದ್ದಾರೆ. ಖಾಸಗಿ ಕಾಲೇಜುಗಳಲ್ಲಿ ಸರಿಯಾಗಿ ತರಗತಿಗಳು ನಡೆದು ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಉತ್ತಮ ಅಂಕಗಳನ್ನು ಪಡೆದುಕೊಳ್ಳಲು ಅನುಕೂಲವಾಗುತ್ತದೆ. ಆದರೆ ಶೇಕಡ ೫೦ರಷ್ಟು ಅತಿಥಿ ಉಪನ್ಯಾಸಕರ ಮೇಲೆ ಅವಲಂಬಿತವಾಗಿರುವ ಸರ್ಕಾರಿ ಕಾಲೇಜುಗಳಲ್ಲಿ ಓದುವ ವಿದ್ಯಾರ್ಥಿಗಳಿಗೆ ಸರ್ಕಾರ ಅನ್ಯಾಯ ಮಾಡಿದಂತಾಗಿದೆ. ಕೂಡಲೇ ರಾಜ್ಯ ಸರ್ಕಾರ ಈ ಕುರಿತು ಗಂಭೀರವಾಗಿ ಪರಿಗಣಸಿ ಸಮಸ್ಯೆಗೆ ಶಾಶ್ವತ ಪರಿಹಾರವನ್ನು ಹುಡುಕಿಕೊಡಬೇಕೆಂದು ಒತ್ತಾಯಿಸಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande