ಬಳ್ಳಾರಿ, 22 ಆಗಸ್ಟ್ (ಹಿ.ಸ.) :
ಆ್ಯಂಕರ್ : ಅಂಗನವಾಡಿಯಲ್ಲಿ ಮುಖ ಗುರುತಿಸುವ ತಂತ್ರಜ್ಞಾನದ ಎಫ್‍ಆರ್‍ಎಸ್ ವ್ಯವಸ್ಥೆಯನ್ನು ಅಳವಡಿಸುವುದು ಬೇಡವೇ ಬೇಡ ಎಂದು ಅಖಿಲ ಭಾರತ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಫೆಡರೇಶನ್, ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘ ರಾಜ್ಯಾದ್ಯಂತ ಕಪ್ಪುಪಟ್ಟಿ ಧರಿಸಿ ಪ್ರತಿಭಟನೆ ನಡೆಸಿ, ರಿಜಿಸ್ಟರ್ಡ್ ಪೋಸ್ಟ್ ಮೂಲಕ ರಾಜ್ಯ ಮತ್ತು ಕೇಂದ್ರ ಸರ್ಕಾರಕ್ಕೆ ರವಾನೆ ಮಾಡಿವೆ.
ಅಂಗನವಾಡಿ ನೌಕರರ ಸಂಘಟನೆಯ ತಾಲ್ಲೂಕು ಅಧ್ಯಕ್ಷೆ ಕಿರಣ್ ಕುಮಾರಿ, ಕಾರ್ಯದರ್ಶಿ ಟಿ. ಈರಮ್ಮ, ಜಿಲ್ಲಾ ಉಪಾಧ್ಯಕ್ಷೆ ಗೀತಾ, ಸಿಐಟಿಯು ಜಿಲ್ಲಾ ಅಧ್ಯಕ್ಷ ಸತ್ಯಬಾಬು ಮತ್ತು ಜನವಾದಿ ಮಹಿಳಾ ಸಂಘಟನೆಯವರು ಅಂಚೆಯನ್ನು ಪೋಸ್ಟ್ ಮಾಡುವ ಮೂಲಕ, ಪ್ರತಿಭಟನೆ ನಡೆಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್