ಮೈಸೂರು ದಸರಾ ಉದ್ಘಾಟಿಸಲಿರುವ ಬೂಕರ್ ಪ್ರಶಸ್ತಿ ಪುರಸ್ಕೃತ ಬಾನು ಮುಷ್ತಾಕ್
ಬೆಂಗಳೂರು, 22 ಆಗಸ್ಟ್ (ಹಿ.ಸ.) : ಆ್ಯಂಕರ್ : ಈ ಬಾರಿ ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವವನ್ನು ಬುಕರ್ ಪ್ರಶಸ್ತಿ ಪುರಸ್ಕೃತರಾದ ಶ್ರೀಮತಿ ಬಾನು ಮುಷ್ತಾಕ್ ಅವರು ಉದ್ಘಾಟಿಸಲಿದ್ದು, ಜಿಲ್ಲಾಡಳಿತದ ವತಿಯಿಂದ ಬಾನು ಮುಷ್ತಾಕ್ ಅವರನ್ನು ಆಹ್ವಾನಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ
BHANU mustak


ಬೆಂಗಳೂರು, 22 ಆಗಸ್ಟ್ (ಹಿ.ಸ.) :

ಆ್ಯಂಕರ್ : ಈ ಬಾರಿ ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವವನ್ನು ಬುಕರ್ ಪ್ರಶಸ್ತಿ ಪುರಸ್ಕೃತರಾದ ಶ್ರೀಮತಿ ಬಾನು ಮುಷ್ತಾಕ್ ಅವರು ಉದ್ಘಾಟಿಸಲಿದ್ದು, ಜಿಲ್ಲಾಡಳಿತದ ವತಿಯಿಂದ ಬಾನು ಮುಷ್ತಾಕ್ ಅವರನ್ನು ಆಹ್ವಾನಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ವಿಧಾನ ಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಾನು ಮುಷ್ತಾಕ್ ಅವರ ಕೃತಿ ಎದೆಯ ಹಣತೆಗೆ ಬುಕರ್ ಪ್ರಶಸ್ತಿ ದೊರೆತಿದ್ದು, ಕರ್ನಾಟಕದ ಲೇಖಕಿಗೆ ಈ ಪ್ರಶಸ್ತಿ ದೊರೆತಿರುವುದು ಸಂತಸ ತಂದಿದೆ. ರೈತ ಸಂಘ, ಕನ್ನಡ ಚಳವಳಿಯ ಜೊತೆಗೆ ಹೋರಾಟದ ಹಿನ್ನೆಲೆಯುಳ್ಳ ಬಾನು ಮುಷ್ತಾಕ್, ಪ್ರಗತಿಪರ ಚಿಂತಕರೂ ಆಗಿದ್ದಾರೆ ಎಂದರು.

ಈ ಬಾರಿ ಶಾಸ್ತ್ರದ ಪ್ರಕಾರ ಹನ್ನೊಂದು ದಿನ ದಸರಾ ನಡೆಯಲಿದೆ. ಅಕ್ಟೋಬರ್ 2 ರಂದು ವಿಜಯದಶಮಿ ಎಂದರು.

ಮೈಸೂರು ದಸರಾ ಸಂದರ್ಭದಲ್ಲಿ ವೈಮಾನಿಕ ಪ್ರದರ್ಶನಕ್ಕೆ ಅನುಮತಿ ದೊರೆತಿದ್ದು, ಕೇಂದ್ರ ರಕ್ಷಣಾ ಸಚಿವ ರಾಜ್ ನಾಥ್ ಸಿಂಗ್ ಅವರು ದಸರಾ ವೀಕ್ಷಣಗೆ ಆಗಮಿಸಬೇಕೆಂದು ಪತ್ರ ಬರೆದಿರುವುದಾಗಿ ಮುಖ್ಯಮಂತ್ರಿ ಹೇಳಿದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande