ಬಳ್ಳಾರಿ : ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರ ನೇಮಕಕ್ಕೆ ಆಗ್ರಹ
ಬಳ್ಳಾರಿ, 22 ಆಗಸ್ಟ್ (ಹಿ.ಸ.) : ಆ್ಯಂಕರ್ : ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರ ನೇಮಕಕ್ಕೆ ಆಗ್ರಹಿಸಿ ರಾಜ್ಯಾದ್ಯಂತ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ತಿನ ನೇತೃತ್ವದಲ್ಲಿ ಶುಕ್ರವಾರ ಪ್ರತಿಭಟನೆ ನಡೆಯಿತು. ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ತಿನ ಜಿಲ್ಲಾ ಘಟಕದ ಸಂಚಾಲ
ಬಳ್ಳಾರಿ : ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರ ನೇಮಕಕ್ಕೆ ಆಗ್ರಹ


ಬಳ್ಳಾರಿ : ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರ ನೇಮಕಕ್ಕೆ ಆಗ್ರಹ


ಬಳ್ಳಾರಿ, 22 ಆಗಸ್ಟ್ (ಹಿ.ಸ.) :

ಆ್ಯಂಕರ್ : ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರ ನೇಮಕಕ್ಕೆ ಆಗ್ರಹಿಸಿ ರಾಜ್ಯಾದ್ಯಂತ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ತಿನ ನೇತೃತ್ವದಲ್ಲಿ ಶುಕ್ರವಾರ ಪ್ರತಿಭಟನೆ ನಡೆಯಿತು.

ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ತಿನ ಜಿಲ್ಲಾ ಘಟಕದ ಸಂಚಾಲಕರಾದ ಕೆ. ದಿಲೀಪ್ ಕುಮಾರ್ ಅವರು, ರಾಜ್ಯದಲ್ಲಿ ಪದವಿ ತರಗತಿಗಳು ಪ್ರಾರಂಭವಾಗಿ ತಿಂಗಳುಗಳಾಗಿವೆ. ಉಪನ್ಯಾಸಕರ ಹುದ್ದೆಗಳು ಖಾಲಿಯಿದ್ದು, ಸರ್ಕಾರ ತಕ್ಷಣವೇ ಅತಿಥಿ ಉಪನ್ಯಾಸಕರ ನೇಮಕಕ್ಕೆ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಪ್ರತಿ ವರ್ಷ ಅತಿಥಿ ಉಪನ್ಯಾಸಕರ ನೇಮಕಾತಿಯಲ್ಲಿ ಗೊಂದಲ ಮತ್ತು ವಿಳಂಬವಾಗುತ್ತಿದೆ. ಅತಿಥಿ ಉಪನ್ಯಾಸಕರ ನೇಮಕಾತಿಗೆ ಸರ್ಕಾರ ಶಾಶ್ವತ ಪರಿಹಾರ ಹುಡುಕಬೇಕು. ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಖಾಲಿ ಇರುವ ಎಲ್ಲಾ ಉಪನ್ಯಾಸಕರ ನೇಮಕಾತಿ ಪ್ರಕ್ರಿಯೆಯನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು ಎಂದರು.

ಸರ್ಕಾರಿ ಕಾಲೇಜುಗಳ ಮೂಲಭೂತ ಸೌಲಭ್ಯಕ್ಕೆ ಹೆಚ್ಚಿನ ಅನುದಾನ ನೀಡಬೇಕು. ಪ್ರಯೋಗಾಲಯ ಸಲಕರಣೆಗಳು, ಕಂಪ್ಯೂಟರ್, ಇನ್ನಿತರ ಸಲಕರಣೆಗಳನ್ನು ಒದಗಿಸಬೇಕು. ಇಲ್ಲವಾದಲ್ಲಿ ವಿದ್ಯಾರ್ಥಿಗಳು ರಾಜ್ಯಾದ್ಯಂತ ತೀವ್ರವಾದ ಪ್ರತಿಭಟನೆ ನಡೆಸುವುದು ಅನಿವಾರ್ಯ ಎಂದು ಮುಖ್ಯಮಂತ್ರಿಗಳಿಗೆ ಸಲ್ಲಿಸಿರುವ ಮನವಿಯಲ್ಲಿ ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ವಿಭಾಗ ಸಂಘಟನಾ ಕಾರ್ಯದರ್ಶಿಯಾದ ನಾಗರಾಜ ಬಟಗೇರಾ, ಶಿವಾನಿ, ಸಾಗರ್, ಭರತ್, ದರ್ಶನ್, ಕೃಷ್ಣ, ಶ್ರೀನಿವಾಸ್, ಪವನ್ ಕುಮಾರ್, ಶೃಷ್ಠಿ, ಐಶ್ವರ್ಯ, ವನಜಾಕ್ಷಿ, ಗೀತಾ, ಕಾವೇರಿ ಮುಂತಾದ ಅಭಾವಿಪ ಕಾರ್ಯಕರ್ತರು ಭಾಗವಹಿಸಿದ್ದರು. ಪ್ರತಿಭಟನಾಕಾರರು ಜಿಲ್ಲಾಡಳಿತದ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande