ಶಿವಮೊಗ್ಗ, 22 ಆಗಸ್ಟ್ (ಹಿ.ಸ.) :
ಆ್ಯಂಕರ್ : ಜೀವನದಲ್ಲಿ ತಪ್ಪು ಮಾಡದವರು ಯಾರೂ ಇಲ್ಲ. ಆದರೆ ಮಾಡಿದ ತಪ್ಪನ್ನು ತಿದ್ದಿಕೊಂಡು ಒಳ್ಳೆಯ ಮನುಷ್ಯನಾಗುವುದು ಮುಖ್ಯ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾ. ಸಂತೋಷ್ ಎಂ.ಎಸ್. ಹೇಳಿದರು.
ಶಿವಮೊಗ್ಗ ಕೇಂದ್ರ ಕಾರಾಗೃಹದಲ್ಲಿ ಹೊಸ ಹೊಲಿಗೆ ತರಬೇತಿ ಕೇಂದ್ರವನ್ನು ಉದ್ಘಾಟಿಸಿ ಮಾತನಾಡಿದರು.
ಬಂಧಿಗಳು ತಪ್ಪಿತಸ್ಥ ಭಾವನೆಯಿಂದ ಕುಗ್ಗದೆ ಶಿಕ್ಷಣ, ತರಬೇತಿ ಹಾಗೂ ಕೌಶಲ್ಯಾಭಿವೃದ್ಧಿಯ ಅವಕಾಶಗಳನ್ನು ಬಳಸಿಕೊಂಡರೆ ಸಮಾಜಕ್ಕೆ ಪ್ರೇರಣೆಯಾಗುವ ಉತ್ತಮ ವ್ಯಕ್ತಿಗಳಾಗಬಹುದು ಎಂದು ತಿಳಿಸಿದರು.
ಶಾಹಿ ಎಕ್ಸ್ಪೋರ್ಟ್ಸ್ ಸಂಸ್ಥೆಯ ಎಜಿಎಂ ಲಕ್ಷ್ಮಣ ಧರ್ಮಟ್ಟಿ, ತರಬೇತಿ ಪೂರ್ಣಗೊಳಿಸಿದ ಬಂಧಿಗಳಿಗೆ ಬಿಡುಗಡೆ ಬಳಿಕ ಸಂಸ್ಥೆಯಲ್ಲೇ ಉದ್ಯೋಗಾವಕಾಶ ಕಲ್ಪಿಸಲಾಗುತ್ತದೆ ಎಂದು ಹೇಳಿದರು.
ರೋಟರಿ ಕ್ಲಬ್‌ನ ವಸಂತಕುಮಾರ್ ಹೋಬಳಿದಾರ್, ವಿದ್ಯೆಯ ಜೊತೆಗೆ ಕೌಶಲ್ಯವೂ ಅಗತ್ಯವೆಂದು ಅಭಿಪ್ರಾಯಪಟ್ಟರು.
ಕಾರಾಗೃಹದ ಅಧೀಕ್ಷಕ ಡಾ. ಪಿ. ರಂಗನಾಥ, ಒಟ್ಟು 300 ಬಂಧಿಗಳಿಗೆ ತರಬೇತಿ ನೀಡುವ ಯೋಜನೆ ಇದ್ದು, ಪ್ರಾರಂಭಿಕವಾಗಿ 60 ಮಂದಿಗೆ ತರಬೇತಿ ನೀಡಲಾಗುತ್ತಿದೆ ಎಂದು ವಿವರಿಸಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಅಧಿಕಾರಿಗಳು, ಕಾರಾಗೃಹ ಸಿಬ್ಬಂದಿ ಹಾಗೂ ಶಾಹಿ ಎಕ್ಸ್ಪೋರ್ಟ್ಸ್ ಪ್ರತಿನಿಧಿಗಳು ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa