ಮಾನವಿ, 22 ಆಗಸ್ಟ್ (ಹಿ.ಸ.) :
ಆ್ಯಂಕರ್ : ಮಾನವಿ ನಗರ ಯೋಜನಾ ಪ್ರಾಧಿಕಾರದ ವತಿಯಿಂದ ಮಾನವಿ ಪಟ್ಟಣದ ಸರ್ವೆ ನಂಬರ್ 264/1/11ರಲ್ಲಿ 01ಎಕರೆ ಮತ್ತು 264/1/12ರಲ್ಲಿ 01ಎಕರೆ ಸೇರಿದಂತೆ ಒಟ್ಟು 02 ಎಕರೆ ವಿಸ್ತೀರ್ಣ ಅನುಮೋದಿತ ವಿನ್ಯಾಸದಲ್ಲಿ ಕಾಯ್ದಿರಿಸಿದ ನಾಗರಿಕ ಸೌಲಭ್ಯವನ್ನು ಹಂಚಿಕೆ ನೀಡಲು ಮಾನವಿ ತಾಲೂಕು ಆರೋಗ್ಯ ಅಧಿಕಾರಿಗಳು ಕೋರಲಾಗಿದ್ದು, ಸಾರ್ವಜನಿಕರಿಂದ ಆಕ್ಷೇಪಣೆ ಅರ್ಜಿ ಆಹ್ವಾನಿಸಲಾಗಿದೆ.
ಸಾರ್ವಜನಿಕರು ಈ ಸಂಬಂಧ ಯಾವುದೇ ತರಹದ ತಕರಾರು ಆಕ್ಷೇಪಣೆ ಹಾಗೂ ಸಲಹೆಗಳು ಇದ್ದಲ್ಲಿ ಈ ಪ್ರಕಟಣೆ ಹೊರಡಿಸಿದ 16 ದಿವಸದೊಳಗೆ ನಗರ ಯೋಜನಾ ಪ್ರಾಧಿಕಾರದ ಕಾರ್ಯಾಲಯಕ್ಕೆ ಲಿಖಿತ ಮೂಲಕ ಅಥವಾ ಖುದ್ದಾಗಿ ಅಥವಾ ನೊಂದಾಯಿತ ಅಂಚೆ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಅವಧಿ ಮೀರಿ ಬರುವ ಆಕ್ಷೇಪಣೆಗಳನ್ನು ಪರಿಗಣಿಸಲಾಗುವುದಿಲ್ಲವೆಂದು ನಗರ ಯೋಜನಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್