ಕೊಡಗು ಅರಣ್ಯ ಇಲಾಖೆ ಸಮಸ್ಯೆ ಕುರಿತು ಸಚಿವರ ಸಭೆ
ಬೆಂಗಳೂರು, 22 ಆಗಸ್ಟ್ (ಹಿ.ಸ.) : ಆ್ಯಂಕರ್ : ಕೊಡಗು ಜಿಲ್ಲೆಯ ಅರಣ್ಯ ಇಲಾಖೆಯ ಸಮಸ್ಯೆಗಳ ಪರಿಹಾರ ಕುರಿತು ಅರಣ್ಯ ಸಚಿವ ಈಶ್ವರ ಖಂಡ್ರೆ ನೇತೃತ್ವದಲ್ಲಿ ವಿಕಾಸ ಸೌಧದಲ್ಲಿ ಸಭೆ ನಡೆಯಿತು. ಸಭೆಯಲ್ಲಿ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್. ಬೋಸರಾಜು, ವಿರಾಜಪೇಟೆ ಶಾಸಕ ಹಾಗೂ ಮುಖ್ಯಮಂತ್ರಿ ಕಾನೂನು
Meeting


ಬೆಂಗಳೂರು, 22 ಆಗಸ್ಟ್ (ಹಿ.ಸ.) :

ಆ್ಯಂಕರ್ : ಕೊಡಗು ಜಿಲ್ಲೆಯ ಅರಣ್ಯ ಇಲಾಖೆಯ ಸಮಸ್ಯೆಗಳ ಪರಿಹಾರ ಕುರಿತು ಅರಣ್ಯ ಸಚಿವ ಈಶ್ವರ ಖಂಡ್ರೆ ನೇತೃತ್ವದಲ್ಲಿ ವಿಕಾಸ ಸೌಧದಲ್ಲಿ ಸಭೆ ನಡೆಯಿತು.

ಸಭೆಯಲ್ಲಿ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್. ಬೋಸರಾಜು, ವಿರಾಜಪೇಟೆ ಶಾಸಕ ಹಾಗೂ ಮುಖ್ಯಮಂತ್ರಿ ಕಾನೂನು ಸಲಹೆಗಾರ ಪೊನ್ನಣ್ಣ, ಮಡಿಕೇರಿ ಶಾಸಕ ಡಾ. ಮಂತರಗೌಡ ಹಾಗೂ ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳು ಹಾಜರಿದ್ದರು.

ಅರಣ್ಯ ಸಂಬಂಧಿತ ಸಮಸ್ಯೆಗಳ ಕುರಿತು ಸಮಗ್ರ ಮಾಹಿತಿ ಪಡೆದು ವಿಸ್ತೃತ ಚರ್ಚೆ ನಡೆಸಲಾಯಿತು. ಈ ಸಮಸ್ಯೆಗಳನ್ನು ಶೀಘ್ರ ಪರಿಹರಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸಚಿವರು ನಿರ್ದೇಶನ ನೀಡಿದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande