ಬಳ್ಳಾರಿ, 22 ಆಗಸ್ಟ್ (ಹಿ.ಸ.) :
ಆ್ಯಂಕರ್ : ಬಳ್ಳಾರಿ ಗ್ರಾಮೀಣ ಜೆಸ್ಕಾಂ ಉಪ-ವಿಭಾಗ ವ್ಯಾಪ್ತಿಯ 110ಕೆ.ವಿ ಅಲ್ಲಿಪುರ-ಬಳ್ಳಾರಿ ಉತ್ತರ ಮಾರ್ಗದ ಎಲ್‌ಐಎಲ್‌ಓ ನಿರ್ಮಾಣ ಕಾರ್ಯವನ್ನು ತುರ್ತಾಗಿ ಕೈಗೊಳ್ಳುತ್ತಿರುವುದರಿಂದ 110/11ಕೆ.ವಿ ಯ ಸೋಮಸಮುದ್ರ ವಿದ್ಯುತ್ ಉಪ-ಕೇಂದ್ರ ಮತ್ತು 33/11ಕೆ.ವಿ ಗುಡದೂರು ವಿದ್ಯುತ್ ಉಪಕೇಂದ್ರದಿ0ದ ವಿದ್ಯುತ್ ಸರಬರಾಜು ಆಗುವ ಎಲ್ಲಾ 11ಕೆ.ವಿ ಮಾರ್ಗಗಳಲ್ಲಿ ಆ.24 ರಂದು ಬೆಳಿಗ್ಗೆ 09 ರಿಂದ ಮಧ್ಯಾಹ್ನ 01 ಗಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.
ವಿದ್ಯುತ್ ವ್ಯತ್ಯಯವಾಗುವ ಪ್ರದೇಶಗಳು :
110/11ಕೆ.ವಿ ಶ್ರೀಧರಗಡ್ಡೆ ಉಪ-ಕೇಂದ್ರದಿAದ ವಿದ್ಯುತ್ ಸರಬರಾಜು ಆಗುವ ಎಲ್ಲಾ 11ಕೆ.ವಿ ಫೀಡರ್‌ಗಳು ಮತ್ತು 33/11ಕೆ.ವಿ ಗುಡದೂರು ಉಪ-ಕೇಂದ್ರದಿAದ ವಿದ್ಯುತ್ ಸರಬರಾಜು ಎಲ್ಲಾ 11ಕೆ.ವಿ. ಫೀಡರ್‌ಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಮತ್ತು ವಿದ್ಯುತ್ ಗ್ರಾಹಕರು ಸಹಕರಿಸಬೇಕು ಎಂದು ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್