ಶ್ರೀ ಕ್ಷೇತ್ರ ಧರ್ಮಸ್ಥಳದ ಮಹತ್ವ ಉಳಿಸಿರಿ : ಬಿಜೆಪಿ ಆಗ್ರಹ
ಬಳ್ಳಾರಿ, 22 ಆಗಸ್ಟ್ (ಹಿ.ಸ.) : ಆ್ಯಂಕರ್ : ಶ್ರೀಕ್ಷೇತ್ರ ಧರ್ಮಸ್ಥಳದ ಕುರಿತು ಅಪಪ್ರಚಾರ ನಡೆಸುತ್ತಿರುವವರ ವಿರುದ್ಧ ಕಠಿಣ ಕ್ರಮಕೈಗೊಳ್ಳಲು ಆಗ್ರಹಿಸಿ ಬಿಜೆಪಿ ಜಿಲ್ಲಾ ಘಟಕವು ಬಳ್ಳಾರಿ ನಗರದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿ, ಆಕ್ರೋಶ ವ್ಯಕ್ತಪಡಿಸಿತು. ಮಾಜಿ ಶಾಸಕ ಜಿ. ಸೋಮಶೇಖರರೆಡ್ಡ
ಶ್ರೀ ಕ್ಷೇತ್ರ ಧರ್ಮಸ್ಥಳದ ಮಹತ್ವ ಉಳಿಸಿರಿ : ಬಿಜೆಪಿ ಆಗ್ರಹ


ಶ್ರೀ ಕ್ಷೇತ್ರ ಧರ್ಮಸ್ಥಳದ ಮಹತ್ವ ಉಳಿಸಿರಿ : ಬಿಜೆಪಿ ಆಗ್ರಹ


ಶ್ರೀ ಕ್ಷೇತ್ರ ಧರ್ಮಸ್ಥಳದ ಮಹತ್ವ ಉಳಿಸಿರಿ : ಬಿಜೆಪಿ ಆಗ್ರಹ


ಬಳ್ಳಾರಿ, 22 ಆಗಸ್ಟ್ (ಹಿ.ಸ.) :

ಆ್ಯಂಕರ್ : ಶ್ರೀಕ್ಷೇತ್ರ ಧರ್ಮಸ್ಥಳದ ಕುರಿತು ಅಪಪ್ರಚಾರ ನಡೆಸುತ್ತಿರುವವರ ವಿರುದ್ಧ ಕಠಿಣ ಕ್ರಮಕೈಗೊಳ್ಳಲು ಆಗ್ರಹಿಸಿ ಬಿಜೆಪಿ ಜಿಲ್ಲಾ ಘಟಕವು ಬಳ್ಳಾರಿ ನಗರದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿ, ಆಕ್ರೋಶ ವ್ಯಕ್ತಪಡಿಸಿತು.

ಮಾಜಿ ಶಾಸಕ ಜಿ. ಸೋಮಶೇಖರರೆಡ್ಡಿ ಅವರ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು. ಪ್ರತಿಭಟನೆಯ ನೇತೃತ್ವವಹಿಸಿ ಮಾತನಾಡಿದ ಮಾಜಿ ಶಾಸಕ ಜಿ. ಸೋಮಶೇಖರರೆಡ್ಡಿ ಅವರು, ಧಾರ್ಮಿಕ, ಆಧ್ಯಾತ್ಮಿಕ ಮತ್ತು ಶ್ರದ್ಧಾ ಭಕ್ತಿ ಕೇಂದ್ರವಾಗಿರುವ ಶ್ರೀ ಕ್ಷೇತ್ರ ಧರ್ಮಸ್ಥಳದ ಕುರಿತು ದುರುದ್ದೇಶದ ಅಪಪ್ರಚಾರ ನಡೆದಿದೆ. ಸಾಮಾಜಿಕ ಜಾಲತಾಣದಲ್ಲಿ ಶ್ರೀಕ್ಷೇತ್ರದ ವಿರುದ್ಧ ಇಲ್ಲಸಲ್ಲದ ಆರೋಪಗಳನ್ನು ಮಾಡುವ ಮೂಲಕ ಕ್ಷೇತ್ರದ ಮಹತ್ವವನ್ನು ಹಾಳುಮಾಡಲು ಯತ್ನಿಸುವವರ ವಿರುದ್ಧ ಸರ್ಕಾರ ತಕ್ಷಣವೇ ಕಾನೂನಾತ್ಮಕ ಶಿಸ್ತುಕ್ರಮಗಳನ್ನು ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಪ್ರತಿಭಟನೆಯ ಉಸ್ತುವಾರಿ ಮೋತ್ಕರ್ ಶ್ರೀನಿವಾಸ, ಸಹ ಉಸ್ತುವಾರಿ ಡಾ. ಅರುಣ, ರಾಜ್ಯ ಮುಖಂಡರಾದ ಕುಮಾರಿ ಸುಗುಣ, ಎಚ್.ಎಂ. ಅಡಿವಿಸ್ವಾಮಿ, ಶ್ರೀಮತಿ ವಿಜಯಲಕ್ಷ್ಮಿ, ಜಿಲ್ಲಾ ಪದಾಧಿಕಾರಿಗಳು, ಮಹಾನಗರ ಪಾಲಿಕೆ ಸದಸ್ಯರು, ಹನುಮಂತಪ್ಪ, ಶ್ರೀಮತಿ ಕಲ್ಪನಾ, ಈರಮ್ಮ ಸುರೇಂದ್ರ, ಮಲ್ಲನಗೌಡ, ಜನತಾ ಬಜಾರ್ ಅಧ್ಯಕ್ಷ ಕೆ.ಎ. ವೇಮಣ್ಣ, ಬಿಜೆಪಿಯ ಅಮರನಾಥ್ ಸಿ. ಹೊಸೂರ್ ಮಠ, ಮಾಜಿ ನಗರ ಪ್ರಧಾನ ಕಾರ್ಯದರ್ಶಿ ರಾಮಾಂಜನಿ, ಪಕ್ಷದ ಹಿರಿಯ ಮುಖಂಡರಾದ ಡಾ. ವೆಂಕಟ್ ಮಹಿಪಾಲ್, ಸಾಧನ ಹಿರೇಮಠ ಇನ್ನಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಪ್ರತಿಭಟನಾಕಾರರು ಗಡಿಗೆ ಚೆನ್ನಪ್ಪ ವೃತ್ತದಿಂದ ಮೆರವಣಿಗೆಯಲ್ಲಿ ಹೊರಟು ಜಿಲ್ಲಾಧಿಕಾರಿಗಳ ಕಚೇರಿ ತಲುಪಿ, ಜಿಲ್ಲಾಡಳಿತದ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande