ರಾಯಚೂರು, 22 ಆಗಸ್ಟ್ (ಹಿ.ಸ.) :
ಆ್ಯಂಕರ್ : ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ 2025-26ನೇ ಸಾಲಿನ ಸಿರವಾರ ತಾಲೂಕ ಮಟ್ಟದ ದಸರಾ ಕ್ರೀಡಾಕೂಟವನ್ನು ಆಗಸ್ಟ್ 24ರಂದು ಹೋಲಿ ಕ್ರಾಸ್ ಪ್ರೌಢ ಶಾಲೆ ಆಯೋಜಿಸಲು ಈಗಾಗಲೇ ತೀರ್ಮಾನಿಸಲಾಗಿತ್ತು. ಆದರೆ ಅನಿವಾರ್ಯ ಕಾರಣಾಂತರಗಳಿ0ದ ಸ್ಥಳ ಬದಲಾವಣೆಯನ್ನು ಮಾಡಲಾಗಿದೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.
ನೂತನ ಸ್ಥಳವನ್ನು ದೇವದುರ್ಗ ರೋಡ್ ಸಿರವಾರದ ಸಂದೀಪನ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಯೋಜಿಸಲಾಗಿದ್ದು, ಸಿರವಾರ ತಾಲ್ಲೂಕು ಕ್ರೀಡಾಪಟುಗಳು ಹೆಚ್ಚಿನ ಸಂಖ್ಯೆಯಲ್ಲಿ ದಸರಾ ಕ್ರೀಡಾಕೂಟಕ್ಕೆ ಭಾಗವಹಿಸಿ ಕ್ರೀಡಾಕೂಟವನ್ನು ಯಶಸ್ವಿಗೊಳಿಸಬೇಕು. ಸ್ಥಳ ಬದಲಾವಣೆಗೆ ಸಹಕರಿಸುವಂತೆ ಕೋರಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ಯುವ ಸಬಲೀಕರಣ ಮತ್ತುಕ್ರೀಡಾ ಇಲಾಖೆಯ ಜಿಲ್ಲಾ ಕಚೇರಿ ಮಹಾತ್ಮಗಾಂಧಿ ಜಿಲ್ಲಾ ಅಥವಾ ಮೆಹಬೂಬ್ ಪಾಷಾ ಮೊಬೈಲ್ ಸಂಖ್ಯೆ: 9980472040ಗೆ ಸಂಪರ್ಕ ಮಾಡಬಹುದಾಗಿದೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್