ಬಳ್ಳಾರಿ, 22 ಆಗಸ್ಟ್ (ಹಿ.ಸ.) :
ಆ್ಯಂಕರ್ : ಜಿಲ್ಲೆಯಲ್ಲಿ ಪ್ರಸ್ತಕ ಸಾಲಿಗೆ ಮುಂಗಾರು ಹಂಗಾಮು ಅವಧಿಗೆ ಮರು ವಿನ್ಯಾಸಗೊಳಿಸಲಾದ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆಗೆ ಈಗಾಗಲೇ ನೋಂದಣಿ ಪ್ರಕ್ರಿಯೆ ಪ್ರಾರಂಭವಾಗಿದ್ದು, ಬೆಳೆಗಳ ವಿಮೆ ನೋಂದಾಣಿಯನ್ನು ಆಗಸ್ಟ್ 30 ರವರೆಗೆ ವಿಸ್ತರಿಸಲಾಗಿದೆ ಎಂದು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ತಿಳಿಸಿದ್ದಾರೆ.
ರೈತರು ಪ್ರಸಕ್ತ ಸಾಲಿನ ಪಹಣಿ ಪತ್ರಿಕೆ, ಎಫ್‌ಐಡಿ ಸಂಖ್ಯೆ, ಆಧಾರ್ ಕಾರ್ಡ್ ಹಾಗೂ ಬ್ಯಾಂಕ್ ಪಾಸ್ ಪುಸಕ್ತದ ಪ್ರತಿಯೊಂದಿಗೆ ಹತ್ತಿರದ ಗ್ರಾಮ ಒನ್ ಕೇಂದ್ರ ಅಥವಾ ಬ್ಯಾಂಕ್ ಗಳಲ್ಲಿ ಅಥವಾ ಸಿ.ಎಸ್.ಸಿ ಕೇಂದ್ರಗಳಲ್ಲಿ ವಿಮಾ ಯೋಜನೆಗೆ ನೋಂದಾಯಿಸಿಕೊಳ್ಳಬಹುದು.
ಬೆಳೆ ಸಾಲ ಪಡೆಯುವ ಮತ್ತು ಬೆಳೆ ಸಾಲ ಪಡೆಯದ ರೈತರಿಗೆ ವಿಮಾ ಮೊತ್ತವು ಹಾಗೂ ಪಾವತಿಸಬೇಕಾದ ವಿಮಾ ಕಂತಿನ ಮೊತ್ತವು ಒಂದೇ ಆಗಿರುತ್ತದೆ. ನೋಂದಣಿ ಮಾಡಲು ಉದ್ದೇಶಿಸಿರುವ ಬೆಳೆಯು ಹಿಂದಿನ ವರ್ಷಗಳ/ಋತುಗಳ (ಮುಂಗಾರಿನ) ಬೆಳೆ ಸಮೀಕ್ಷೆಯಲ್ಲಿ ಕಂಡುಬರದಿದ್ದರೆ ನೋಂದಣಿಗೆ ಅನುಮತಿ ಇರುವುದಿಲ್ಲ.
ಮರು ವಿನ್ಯಾಸಗೊಳಿಸಿದ ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆಯನ್ನು ಅನುಷ್ಠಾನಗೊಳಿಸಲು ಬಳ್ಳಾರಿ ಜಿಲ್ಲೆಗೆ ಎಸ್.ಬಿ.ಐ ಇನ್ಸುರೆನ್ಸ್ ಕಂಪನಿಯು ವಿಮಾ ಸಂಸ್ಥೆಯಾಗಿದೆ.
ಹವಾಮಾನ ಅಂಶಗಳಾದ ಮಳೆ ಪ್ರಮಾಣ, ಗಾಳಿಯ ವೇಗ ಇತ್ಯಾದಿ ಮಾಹಿತಿಗಳನ್ನು ಸ್ಥಳೀಯವಾಗಿ ಲಭ್ಯವಿರುವ ಟೆಲಿ ಮೆಟ್ರಿಕ್ ಮಳೆಮಾಪನ ಕೇಂದ್ರಗಳಲ್ಲಿ ದಾಖಲಿಸುವ ಅಂಶಗಳ ಆಧಾರದ ಮೇಲೆ ಬೆಳೆ ವಿಮೆ ನಷ್ಟವನ್ನು ತೀರ್ಮಾನಿಸಲಾಗುತ್ತದೆ.
ವಿಮಾ ಯೋಜನೆಯಡಿ ಒಳಪಡುವ ಬೆಳೆಗಳು ಹಸಿ ಮೆಣಸಿನಕಾಯಿ ಮತ್ತು ದಾಳಿಂಬೆ ಬೆಳೆಗಳಾಗಿವೆ. ಬಳ್ಳಾರಿ ತಾಲ್ಲೂಕಿನ ಬಳ್ಳಾರಿ, ಮೋಕಾ, ರೂಪನಗುಡಿ, ಕುರುಗೋಡು ತಾಲ್ಲೂಕಿನ ಕುರುಗೋಡು, ಕೋಳೂರು ಮತ್ತು ಕಂಪ್ಲಿ ತಾಲ್ಲೂಕುಗಳ ಎಲ್ಲಾ ಗ್ರಾಮ ಪಂಚಾಯಿತಿಗಳು ವಿಮೆಗೆ ಒಳಪಡುವ ಪ್ರದೇಶಗಳಾಗಿದ್ದು, ಹಸಿಮೆಣಸಿನಕಾಯಿ ಬೆಳೆಗೆ ಪ್ರತಿ ಹೆಕ್ಟರ್‌ಗೆ ವಿಮಾ ಮೊತ್ತ ರೂ.71 ಸಾವಿರ ಹಾಗೂ ರೈತರು ಪಾವತಿಸಬೇಕಾದ ವಿಮಾ ಕಂತಿನ ದರ ರೂ.3550 ಆಗಿರುತ್ತದೆ.
ದಾಳಿಂಬೆ ಬೆಳೆಗೆ ಪ್ರತಿ ಹೆಕ್ಟರ್‌ಗೆ ವಿಮಾ ಮೊತ್ತ 1 ಲಕ್ಷ 27 ಸಾವಿರ ಹಾಗೂ ರೈತರು ಪಾವತಿಸಬೇಕಾದ ವಿಮಾ ಕಂತಿನ ದರ ರೂ.6,350 ಆಗಿರುತ್ತದೆ.
ಹೆಚ್ಚಿನ ಮಾಹಿತಿಗಾಗಿ ಬಳ್ಳಾರಿ ಮತ್ತು ಕುರುಗೋಡು, ಕಂಪ್ಲಿ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ(ಜಿಪಂ) ದೂ: 08392-278177 ಹಾಗೂ ಮೊ. 9448511649, ಬಳ್ಳಾರಿ ತಾಲ್ಲೂಕು ಸಹಾಯಕ ತೋಟಗಾರಿಕೆ ನಿರ್ದೇಶಕರ ಮೊ.8095367328, ಬಳ್ಳಾರಿ ರೈತ ಸಂಪರ್ಕ ಕೇಂದ್ರ ಸಹಾಯಕ ತೋಟಗಾರಿಕೆ ಅಧಿಕಾರಿ ಮೊ.9742966767, ಸಹಾಯಕ ತೋಟಗಾರಿಕೆ ಅಧಿಕಾರಿ ರೈತ ಸಂಪರ್ಕ ಕೇಂದ್ರ ರೂಪನಗುಡಿ ಮೊ.8095088837, ಸಹಾಯಕ ತೋಟಗಾರಿಕೆ ಅಧಿಕಾರಿ ರೈತ ಸಂಪರ್ಕ ಕೇಂದ್ರ ಮೋಕಾ ಮೊ.9901921073, ಸಹಾಯಕ ತೋಟಗಾರಿಕೆ ಅಧಿಕಾರಿ ರೈತ ಸಂಪರ್ಕ ಕೇಂದ್ರ ಕುರುಗೋಡು ಮೊ.9740775129, ಸಹಾಯಕ ತೋಟಗಾರಿಕೆ ಅಧಿಕಾರಿ ರೈತ ಸಂಪರ್ಕ ಕೇಂದ್ರ ಕೋಳೂರು ಮೊ.9108168056, ಸಹಾಯಕ ತೋಟಗಾರಿಕೆ ಅಧಿಕಾರಿ ರೈತ ಸಂಪರ್ಕ ಕೇಂದ್ರ ಕಂಪ್ಲಿ ಮೊ.9901921073 ಗೆ ಸಂಪರ್ಕಿಸಬಹುದು ಎಂದು ಅವರು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್