ವ್ಹೀಲಿಂಗ್ ನಿಯಂತ್ರಣಕ್ಕೆ ವಿಶೇಷ ತಂಡ ರಚನೆ : ಪರಮೇಶ್ವರ
ಬೆಂಗಳೂರು, 22 ಆಗಸ್ಟ್ (ಹಿ.ಸ.) : ಆ್ಯಂಕರ್ : ವ್ಹೀಲಿಂಗ್‌ ಪಿಡುಗು ನಿಯಂತ್ರಿಸಲು ಸರ್ಕಾರ ಗಂಭೀರ ಕ್ರಮಗಳನ್ನು ಕೈಗೊಂಡಿದೆ. ಅಪಾಯಕಾರಿ ವ್ಹೀಲಿಂಗ್ ತಡೆಯಲು ವಿಶೇಷ ಪೊಲೀಸ್ ತಂಡಗಳನ್ನು ರಚಿಸಲಾಗಿದೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ವಿಧಾನ ಸಭೆಯಲ್ಲಿ ತಿಳಿಸಿದ್ದಾರೆ. ಕಳೆದ ಮೂರು ವರ್ಷಗಳಲ್ಲಿ ಸ
Parmrshwar


ಬೆಂಗಳೂರು, 22 ಆಗಸ್ಟ್ (ಹಿ.ಸ.) :

ಆ್ಯಂಕರ್ : ವ್ಹೀಲಿಂಗ್‌ ಪಿಡುಗು ನಿಯಂತ್ರಿಸಲು ಸರ್ಕಾರ ಗಂಭೀರ ಕ್ರಮಗಳನ್ನು ಕೈಗೊಂಡಿದೆ. ಅಪಾಯಕಾರಿ ವ್ಹೀಲಿಂಗ್ ತಡೆಯಲು ವಿಶೇಷ ಪೊಲೀಸ್ ತಂಡಗಳನ್ನು ರಚಿಸಲಾಗಿದೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ವಿಧಾನ ಸಭೆಯಲ್ಲಿ ತಿಳಿಸಿದ್ದಾರೆ.

ಕಳೆದ ಮೂರು ವರ್ಷಗಳಲ್ಲಿ ಸಾವಿರಾರು ವ್ಹೀಲಿಂಗ್‌ ಪ್ರಕರಣಗಳು ದಾಖಲಾಗಿದ್ದು, ಚಾಲನಾ ಪರವಾನಗಿಗಳನ್ನು ರದ್ದು ಮಾಡಲಾಗಿದೆ. ಮುಂದೆ ವ್ಹೀಲಿಂಗ್‌ನಲ್ಲಿ ಸಿಕ್ಕಿಬಿದ್ದ ಯುವಕರ ಪೋಷಕರ ಮೇಲೂ ಪ್ರಕರಣ ದಾಖಲಿಸಲಾಗುವುದು ಎಂದರು.

ಬೆಂಗಳೂರಿನಲ್ಲಿ ಹೆಚ್ಚು ವ್ಹೀಲಿಂಗ್ ನಡೆಯುವ 35 ರಸ್ತೆಗಳನ್ನು ಪೊಲೀಸರು ಗುರುತಿಸಿದ್ದು ಇಲಾಖೆ ಕ್ರಮ ಕೈಗೊಳ್ಳಲಿದೆ ಎಂದು ತಿಳಿಸಿದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande