ರಾಯಚೂರು, 23 ಆಗಸ್ಟ್ (ಹಿ.ಸ.) :
ಆ್ಯಂಕರ್ : ಜಿಲ್ಲೆಯ ಲಿಂಗಸೂಗೂರು ತಾಲೂಕಿನ ಪಿ.ಎಂ.ಶ್ರಿ ನವೋದಯ ವಿದ್ಯಾಲಯದಿಂದ 6ನೇ ತರಗತಿ ಪ್ರವೇಶಕ್ಕಾಗಿ ಆನ್‍ಲೈನ್ ಅರ್ಜಿ ಸಲ್ಲಿಸುವ ದಿನಾಂಕವನ್ನು ಆಗಸ್ಟ್ 27ರವರೆಗೆ ವಿಸ್ತರಿಸಲಾಗಿದೆ.
ಅರ್ಹ ವಿದ್ಯಾರ್ಥಿಗಳು ಹಾಗೂ ಪೋಷಕರು ಈ ಅವಕಾಶವನ್ನು ಸದ್ಬಳಕೆ ಮಾಡಿಕೊಂಡು, ನಿಗದಿತ ದಿನಾಂಕದೊಳಗೆ ಆನ್‍ಲೈನ್ ವೆಬ್ ಸೈಟ್ https://cbseitms.rcil.gov.in/nvs. ಮೂಲಕ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಜವಾಹರ ನವೋದಯ ವಿದ್ಯಾಲಯ, ರಾಯಚೂರು ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಜವಾಹರ ನವೋದಯ ವಿದ್ಯಾಲಯದ ಪ್ರಾಂಶುಪಾಲರು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್