ವಿಕಲಚೇತನರ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದವರಿಂದ ಪ್ರಶಸ್ತಿಗೆ ಅರ್ಜಿ‌ ಆಹ್ವಾನ
ಹಾಸನ, 23 ಆಗಸ್ಟ್ (ಹಿ.ಸ.) : ಆ್ಯಂಕರ್ : ಡಿಸೆಂಬರ್ 3ರಂದು ನಡೆಯುವ ವಿಶ್ವ ವಿಕಲಚೇತನರ ದಿನಾಚರಣೆಯ ಅಂಗವಾಗಿ, ವಿಕಲಚೇತನರ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದವರಿಗೆ ರಾಜ್ಯ ಪ್ರಶಸ್ತಿ ನೀಡಲಾಗುತ್ತಿದೆ. ಈ ಪ್ರಶಸ್ತಿಗೆ ಸಂಬಂಧಿಸಿದಂತೆ ಸ್ವಯಂಸೇವಾ ಸಂಸ್ಥೆಗಳು, ವಿಶೇಷ ಶಿಕ್ಷಕರು ಹಾಗೂ ವೈಯಕ್ತಿಕ ವಿಭಾಗದಡ
ವಿಕಲಚೇತನರ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದವರಿಂದ ಪ್ರಶಸ್ತಿಗೆ ಅರ್ಜಿ‌ ಆಹ್ವಾನ


ಹಾಸನ, 23 ಆಗಸ್ಟ್ (ಹಿ.ಸ.) :

ಆ್ಯಂಕರ್ : ಡಿಸೆಂಬರ್ 3ರಂದು ನಡೆಯುವ ವಿಶ್ವ ವಿಕಲಚೇತನರ ದಿನಾಚರಣೆಯ ಅಂಗವಾಗಿ, ವಿಕಲಚೇತನರ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದವರಿಗೆ ರಾಜ್ಯ ಪ್ರಶಸ್ತಿ ನೀಡಲಾಗುತ್ತಿದೆ.

ಈ ಪ್ರಶಸ್ತಿಗೆ ಸಂಬಂಧಿಸಿದಂತೆ ಸ್ವಯಂಸೇವಾ ಸಂಸ್ಥೆಗಳು, ವಿಶೇಷ ಶಿಕ್ಷಕರು ಹಾಗೂ ವೈಯಕ್ತಿಕ ವಿಭಾಗದಡಿ ಸಾಧನೆಗೈದ ವಿಕಲಚೇತನರು ಅಕ್ಟೋಬರ್ 10ರೊಳಗೆ ತಮ್ಮ ಸಾಧನೆಯ ದಾಖಲಾತಿಗಳೊಂದಿಗೆ ನಿಗದಿತ ಅರ್ಜಿ ನಮೂನೆ ಮೂಲಕ ಪ್ರಸ್ತಾವನೆ ಸಲ್ಲಿಸಬಹುದು ಎಂದು ಹಾಸನ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ತಿಳಿಸಿದ್ದಾರೆ.

ಅರ್ಜಿಗಳನ್ನು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು, ಹಾಸನ ಇವರಿಗೆ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗೆ ಹಾಗೂ ಅರ್ಜಿ ನಮೂನೆಗಾಗಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, 9ನೇ ಕ್ರಾಸ್, ಶಂಕರಮಠ ರಸ್ತೆ, ಕೆ.ಆರ್.ಪುರಂ, ಹಾಸನ, ದೂರವಾಣಿ ಸಂಖ್ಯೆ: 08172-295546 ಅನ್ನು ಸಂಪರ್ಕಿಸಲು ತಿಳಿಸಲಾಗಿದೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande