ನಾನಾ ಯೋಜನೆಗಳಿಗೆ ಅರ್ಜಿ ಆಹ್ವಾನ
ಹಾಸನ, 23 ಆಗಸ್ಟ್ (ಹಿ.ಸ.) : ಆ್ಯಂಕರ್ : ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಡಿ ಜಾರಿಯಲ್ಲಿರುವ ನಾನಾ ಫಲಾನುಭವಿ ಆಧಾರಿತ ಯೋಜನೆಗಳಿಗೆ 2025–26ನೇ ಸಾಲಿನ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿಗಳನ್ನು ಸೇವಾಸಿಂಧು ಪೋರ್ಟಲ್ ಮೂಲಕ ಸೆಪ್ಟೆಂಬರ್ 30ರೊಳಗೆ ಸಲ್ಲಿಸಬೇಕು ಎಂದು ಹಾಸನ ಜಿಲ
ನಾನಾ ಯೋಜನೆಗಳಿಗೆ ಅರ್ಜಿ ಆಹ್ವಾನ


ಹಾಸನ, 23 ಆಗಸ್ಟ್ (ಹಿ.ಸ.) :

ಆ್ಯಂಕರ್ : ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಡಿ ಜಾರಿಯಲ್ಲಿರುವ ನಾನಾ ಫಲಾನುಭವಿ ಆಧಾರಿತ ಯೋಜನೆಗಳಿಗೆ 2025–26ನೇ ಸಾಲಿನ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿಗಳನ್ನು ಸೇವಾಸಿಂಧು ಪೋರ್ಟಲ್ ಮೂಲಕ ಸೆಪ್ಟೆಂಬರ್ 30ರೊಳಗೆ ಸಲ್ಲಿಸಬೇಕು ಎಂದು ಹಾಸನ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ತಿಳಿಸಿದ್ದಾರೆ.

ಪ್ರೋತ್ಸಾಹಧನ, ಶಿಶುಪಾಲನಾ ಭತ್ಯೆ, ಸ್ವಯಂ ಉದ್ಯೋಗ ಸಾಲ, ನಿರುದ್ಯೋಗ ಭತ್ಯೆ, ವೈದ್ಯಕೀಯ ಪರಿಹಾರ, ಮರಣ ಪರಿಹಾರ, ಪ್ರತಿಭೆ ಸಹಾಯಧನ, ಬ್ಯಾಟರಿ ಚಾಲಿತ ವೀಲ್‌ಚೇರ್, ಯಂತ್ರಚಾಲಿತ ದ್ವಿಚಕ್ರ ವಾಹನ, ಹೊಲಿಗೆ ಯಂತ್ರ, ಅಂಧ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ಹಾಗೂ ಬ್ರೈಲ್ ಕಿಟ್ ಸೇರಿದಂತೆ ಅನೇಕ ಸೌಲಭ್ಯಗಳನ್ನು ನೀಡಲಾಗುತ್ತದೆ.

ಹೆಚ್ಚಿನ ಮಾಹಿತಿಗೆ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಕಚೇರಿ (08172-264546/295546) ಅಥವಾ ಸಂಬಂಧಿತ ತಾಲ್ಲೂಕು ಪುನರ್ವಸತಿ ಕಾರ್ಯಕರ್ತರನ್ನು ಸಂಪರ್ಕಿಸಲು ಸೂಚಿಸಲಾಗಿದೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande