ಧಾರವಾಡ, 23 ಆಗಸ್ಟ್ (ಹಿ.ಸ.) :
ಆ್ಯಂಕರ್ : 2025-26 ನೇ ಸಾಲಿಗೆ ಸಮಾಜ ಕಲ್ಯಾಣ ಇಲಾಖಾಯಿಂದ ಡಾ.ಬಿ.ಆರ್.ಅಂಬೇಡ್ಕರ ಅವರ ಅನುಯಾಯಿಗಳನ್ನು ಮಹಾರಾಷ್ಟ್ರದ ನಾಗಪೂರದಲ್ಲಿನ ದೀಕ್ಷಾ ಭೂಮಿಗೆ ಭೇಟಿ ನೀಡಲು ಬಸ್ ಹಾಗೂ ರೈಲು ವ್ಯವಸ್ಥೆಯನ್ನು ಕಲ್ಪಿಸಲಾಗುತ್ತಿದ್ದು, ದೀಕ್ಷಾ ಭೂಮಿಗೆ ಭೇಟಿ ನೀಡುವ ಯಾತ್ರಾರ್ಥಿಗಳಿಗೆ ಸಮಾಜ ಕಲ್ಯಾಣ ಇಲಾಖೆಯ ವೈಬ್‍ಸೈಟ್ ಲಿಂಕ್ https://swd.karnataka.gov.inಮೂಲಕ ಅರ್ಜಿ ಅಹ್ವಾನಿಸಲಾಗಿದೆ.
ಆಸಕ್ತರು ಸಪ್ಟೆಂಬರ್ 09, 2025 ರೊಳಗಾಗಿ ಅರ್ಜಿ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಜಂಟಿ ನಿರ್ದೇಶಕರು ಮತ್ತು ಸಹಾಯಕ ನಿರ್ದೇಶಕರು ಗ್ರೇಡ್-1/2, ಸಮಾಜ ಕಲ್ಯಾಣ ಇಲಾಖೆ ಕಚೇರಿ ದೂರವಾಣಿ ಸಂಖ್ಯೆ ಜಿಲ್ಲಾ ಕಚೇರಿ 0836-2447201, ಧಾರವಾಡ (0836-2440194), ಹುಬ್ಬಳ್ಳಿ(0836-2278066), ಕಲಘಟಗಿ(08370-284159) ನವಲಗುಂದ(08380-229937), ಕುಂದಗೋಳ(08304-290464) ಗೆ ಸಂಪರ್ಕಿಸಬಹುದು ಎಂದು ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa