ಏಷ್ಯಾ ಕಪ್ 2025 – ಬಾಂಗ್ಲಾದೇಶ ತಂಡ ಪ್ರಕಟ
ನವದೆಹಲಿ, 23 ಆಗಸ್ಟ್ (ಹಿ.ಸ.) : ಆ್ಯಂಕರ್ : ಬಾಂಗ್ಲಾದೇಶ ಕ್ರಿಕೆಟ್ ಮಂಡಳಿ 2025ರ ಏಷ್ಯಾ ಕಪ್‌ಗೆ 16 ಸದಸ್ಯರ ತಂಡವನ್ನು ಘೋಷಿಸಿದೆ. ಸೆಪ್ಟೆಂಬರ್ 9ರಿಂದ 28ರವರೆಗೆ ಯುಎಇಯಲ್ಲಿ ನಡೆಯಲಿರುವ ಟೂರ್ನಮೆಂಟ್‌ನಲ್ಲಿ ಲಿಟನ್ ದಾಸ್ ನಾಯಕತ್ವ ವಹಿಸಲಿದ್ದಾರೆ. ಇತ್ತೀಚೆಗೆ ಶ್ರೀಲಂಕಾ ಹಾಗೂ ಪಾಕಿಸ್ತಾನ ವಿರು
Cricket


ನವದೆಹಲಿ, 23 ಆಗಸ್ಟ್ (ಹಿ.ಸ.) :

ಆ್ಯಂಕರ್ : ಬಾಂಗ್ಲಾದೇಶ ಕ್ರಿಕೆಟ್ ಮಂಡಳಿ 2025ರ ಏಷ್ಯಾ ಕಪ್‌ಗೆ 16 ಸದಸ್ಯರ ತಂಡವನ್ನು ಘೋಷಿಸಿದೆ. ಸೆಪ್ಟೆಂಬರ್ 9ರಿಂದ 28ರವರೆಗೆ ಯುಎಇಯಲ್ಲಿ ನಡೆಯಲಿರುವ ಟೂರ್ನಮೆಂಟ್‌ನಲ್ಲಿ ಲಿಟನ್ ದಾಸ್ ನಾಯಕತ್ವ ವಹಿಸಲಿದ್ದಾರೆ.

ಇತ್ತೀಚೆಗೆ ಶ್ರೀಲಂಕಾ ಹಾಗೂ ಪಾಕಿಸ್ತಾನ ವಿರುದ್ಧದ ಟಿ20 ಸರಣಿಯಲ್ಲಿ ಗೆಲುವು ತಂದುಕೊಟ್ಟಿದ್ದ ಅವರು ಇದೀಗ ಏಷ್ಯಾ ಕಪ್‌ನಲ್ಲೂ ತಂಡವನ್ನು ಮುನ್ನಡೆಸಲಿದ್ದಾರೆ.

ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ನೂರುಲ್ ಹಸನ್ ಮತ್ತೆ ತಂಡಕ್ಕೆ ಮರಳಿದ್ದಾರೆ.

ಅನುಭವಿ ಆಲ್‌ರೌಂಡರ್ ಮೆಹದಿ ಹಸನ್ ಮಿರಾಜ್ ಹಾಗೂ ಹಿರಿಯ ಬ್ಯಾಟ್ಸ್‌ಮನ್ ನಜ್ಮುಲ್ ಹುಸೇನ್ ಶಾಂತೋ ಅವರನ್ನು ತಂಡದಿಂದ ಕೈಬಿಡಲಾಗಿದೆ.

ಬಾಂಗ್ಲಾದೇಶ ‘ಬಿ’ ಗುಂಪಿನಲ್ಲಿ ಅಫ್ಘಾನಿಸ್ತಾನ, ಹಾಂಗ್ ಕಾಂಗ್ ಮತ್ತು ಶ್ರೀಲಂಕಾ ವಿರುದ್ಧ ಆಡಲಿದೆ. ‘ಎ’ ಗುಂಪಿನಲ್ಲಿ ಭಾರತ, ಪಾಕಿಸ್ತಾನ, ಓಮನ್ ಮತ್ತು ಆತಿಥೇಯ ಯುಎಇ ತಂಡಗಳಿವೆ.

ಬಾಂಗ್ಲಾದೇಶ ತಂಡ (ಏಷ್ಯಾ ಕಪ್ 2025):

ಲಿಟನ್ ದಾಸ್ (ನಾಯಕ), ತಂಜಿದ್ ಹಸನ್, ಪರ್ವೇಜ್ ಹೊಸೈನ್ ಎಮನ್, ಸೈಫ್ ಹಸನ್, ತೌಹಿದ್ ಹೃದಯೋಯ್, ಜಾಕಿರ್ ಅಲಿ ಅನಿಕ್, ಶಮೀಮ್ ಹೊಸೈನ್, ನೂರುಲ್ ಹಸನ್ ಸೋಹನ್, ಶಾಕ್ ಮಹಿದಿ ಹಸನ್, ರಿಶಾದ್ ಹೊಸೈನ್, ನಸುಮ್ ಅಹ್ಮದ್, ಮುಸ್ತಾಫಿಜುರ್ ರಹಮಾನ್, ತೈಜುರ್ ರಹಮಾನ್, ಶರೀಫುಲ್ ಇಸ್ಲಾಂ, ಶೈಫ್ ಉದ್ದೀನ್.

ಸೌಮ್ಯ ಸರ್ಕಾರ್, ಮೆಹದಿ ಹಸನ್ ಮಿರಾಜ್, ತನ್ವಿರ್ ಇಸ್ಲಾಂ, ಹಸನ್ ಮಹಮೂದ್.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande