ಮುಂಬಯಿ, 23 ಆಗಸ್ಟ್ (ಹಿ.ಸ.) :
ಆ್ಯಂಕರ್ : ಖಾಸಗಿ ಟೆಲಿಕಾಂ ಕಂಪನಿ ರಿಲಯನ್ಸ್ ಕಮ್ಯುನಿಕೇಷನ್ಸ್ ಪ್ರವರ್ತಕ ನಿರ್ದೇಶಕ ಅನಿಲ್ ಅಂಬಾನಿ ವಿರುದ್ಧ ತೊಂದರೆಗಳು ಹೆಚ್ಚುತ್ತಿವೆ. ಬ್ಯಾಂಕ್ ವಂಚನೆ ಪ್ರಕರಣದಲ್ಲಿ ಕೇಂದ್ರೀಯ ತನಿಖಾ ದಳ ಶನಿವಾರ ಆರ್‌ಕಾಮ್ ಹಾಗೂ ಅನಿಲ್ ಅಂಬಾನಿಗೆ ಸಂಬಂಧಿಸಿದ ಮುಂಬೈನಲ್ಲಿರುವ ಕಚೇರಿಗಳ ಮೇಲೆ ದಾಳಿ ನಡೆಸಿದೆ.
ಅಧಿಕೃತ ಮೂಲಗಳ ಪ್ರಕಾರ, ಅನಿಲ್ ಅಂಬಾನಿ ಎಸ್‌ಬಿಐಗೆ 2000 ಕೋಟಿ ರೂ.ಗಳಿಗೂ ಹೆಚ್ಚು ನಷ್ಟ ಉಂಟು ಮಾಡಿದ್ದಾರೆ ಎಂಬ ಆರೋಪದ ಮೇಲೆ ಸಿಬಿಐಗೆ ಪ್ರಕರಣ ದಾಖಲಿಸಿ ತನಿಖೆ ಪ್ರಾರಂಭಿಸಿದೆ.
ಇತ್ತೀಚೆಗೆ ಇಡಿ ಕೂಡ ಅನಿಲ್ ಅಂಬಾನಿ ವಿರುದ್ಧ ಕ್ರಮ ಕೈಗೊಂಡಿತ್ತು. 17,000 ಕೋಟಿ ರೂ.ಗಳ ಬ್ಯಾಂಕ್ ಸಾಲ ವಂಚನೆ ಪ್ರಕರಣದಲ್ಲಿ ದೆಹಲಿಗೆ ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿತ್ತು. ಅಲ್ಲದೆ, ರಿಲಯನ್ಸ್ ಗ್ರೂಪ್‌ಗೆ ಸಂಬಂಧಿಸಿದ 50 ವ್ಯವಹಾರ ಸಂಸ್ಥೆಗಳು ಹಾಗೂ 25 ವ್ಯಕ್ತಿಗಳ ಮನೆಗಳ ಮೇಲೆ ಇಡಿ ದಾಳಿ ನಡೆಸಿತ್ತು.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್‌ಕಾಮ್‌ನಿಂದ ಇನ್ನೂ ಅಧಿಕೃತ ಪ್ರತಿಕ್ರಿಯೆ ಬಂದಿಲ್ಲ.
ಸಿಬಿಐ ತನಿಖೆ ಮುಂದುವರಿದಿದ್ದು, ಹೆಚ್ಚಿನ ವಿವರಗಳು ಬಹಿರಂಗವಾಗುವ ನಿರೀಕ್ಷೆಯಿದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa