ಧರ್ಮಸ್ಥಳ ಪ್ರಕರಣಕ್ಕೆ ಮುಖ್ಯಮಂತ್ರಿ ಹೊಣೆ : ವಿ.ಸೋಮಣ್ಣ
ತುಮಕೂರು, 23 ಆಗಸ್ಟ್ (ಹಿ.ಸ.) : ಆ್ಯಂಕರ್ : ಧರ್ಮಸ್ಥಳ ಪ್ರಕರಣದಲ್ಲಿ ಇತ್ತೀಚೆಗೆ ನಡೆದ ಘಟನೆಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಕಾರಣ ಎಂದು ಕೇಂದ್ರ ಸಚಿವ ವಿ. ಸೋಮಣ್ಣ ಆರೋಪಿಸಿದ್ದಾರೆ. ತುಮಕೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕೋಮುವಾದಿ, ಎಡಪಂಥೀಯರ ಒತ್ತಡಕ್ಕೆ ಒಳಗಾಗಿ ಸಿದ್ದರ
ಧರ್ಮಸ್ಥಳ ಪ್ರಕರಣಕ್ಕೆ ಮುಖ್ಯಮಂತ್ರಿ ಹೊಣೆ : ವಿ.ಸೋಮಣ್ಣ


ತುಮಕೂರು, 23 ಆಗಸ್ಟ್ (ಹಿ.ಸ.) :

ಆ್ಯಂಕರ್ : ಧರ್ಮಸ್ಥಳ ಪ್ರಕರಣದಲ್ಲಿ ಇತ್ತೀಚೆಗೆ ನಡೆದ ಘಟನೆಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಕಾರಣ ಎಂದು ಕೇಂದ್ರ ಸಚಿವ ವಿ. ಸೋಮಣ್ಣ ಆರೋಪಿಸಿದ್ದಾರೆ.

ತುಮಕೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕೋಮುವಾದಿ, ಎಡಪಂಥೀಯರ ಒತ್ತಡಕ್ಕೆ ಒಳಗಾಗಿ ಸಿದ್ದರಾಮಯ್ಯ ತನಿಖೆಗೆ ಸೂಚಿಸಿದರು. ಇದರ ಮೂಲಕ ಕೋಟ್ಯಂತರ ಭಕ್ತರ ಮನಸ್ಸಿಗೆ ಧಕ್ಕೆ ತಂದಿದ್ದಾರೆ ಎಂದು ಕಿಡಿಕಾರಿದರು.

ಧರ್ಮಸ್ಥಳವು ಭಕ್ತರಿಗೆ ನೆಮ್ಮದಿ ಹಾಗೂ ಶಾಂತಿಯನ್ನು ಕೊಟ್ಟ ಪವಿತ್ರ ಕ್ಷೇತ್ರವಾಗಿದ್ದು, ಆ ಸ್ಥಳದ ಪಾವಿತ್ರ್ಯಕ್ಕೆ ಧಕ್ಕೆ ತರುವ ಕೆಲಸವನ್ನು ಮುಖ್ಯಮಂತ್ರಿ ಮಾಡಿದ್ದಾರೆ, ಈ ತಪ್ಪಿಗೆ ಅವರು ತಕ್ಕಶಾಸ್ತಿ ಅನುಭವಿಸಬೇಕಾಗುತ್ತದೆ ಎಂದರು.

ಇದೇ ಸಂದರ್ಭದಲ್ಲಿ, ಸಿದ್ದರಾಮಯ್ಯ ಧರ್ಮಸ್ಥಳಕ್ಕೆ ತೆರಳಿ, ಮಂಜುನಾಥಸ್ವಾಮಿ ಹಾಗೂ ಅಣ್ಣಪ್ಪ ಸ್ವಾಮಿಯ ದರ್ಶನ ಮಾಡಿ ಪ್ರಾಯಶ್ಚಿತ್ತ ಪಟ್ಟು ಕ್ಷಮೆ ಕೇಳುವುದು ರಾಜ್ಯಕ್ಕೂ, ಅವರಿಗೂ ಒಳಿತಾಗುತ್ತದೆ ಎಂದು ಸಲಹೆ ನೀಡಿದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande