ವಿಜಯಪುರ, 23 ಆಗಸ್ಟ್ (ಹಿ.ಸ.) :
ಆ್ಯಂಕರ್ : ಎತ್ತು ತೊಳೆಯಲು ಹೋದ ವ್ಯಕ್ತಿಯನ್ನು ಮೊಸಳೆ ಎಳೆದು ಕೊಂಡು ಹೋಗಿರುವ ಘಟನೆ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಕುಂಚಗನೂರ ಗ್ರಾಮದ ಬಳಿ ನಡೆದಿದೆ. ಕಾಸಪ್ಪ ಹಣಮಂತ ಕಂಬಳಿ (38) ಮೊಸಳೆ ಬಾಯಲ್ಲಿ ಸಿಲುಕಿದ ವ್ಯಕ್ತಿ.
ಅಗ್ನಿ ಶಾಮಕ ದಳದ ಸಿಬ್ಬಂದಿ ಹಾಗೂ ಪೊಲೀಸರಿಂದ ಸ್ಥಳದಲ್ಲಿ ಶೋಧ ಕಾರ್ಯಾಚರಣೆ ನಡೆದಿದೆ. ಇಲ್ಲಿಯವರೆಗೂ ದೇಹ ಪತ್ತೆಯಾಗಿಲ್ಲ. ಮುದ್ದೇಬಿಹಾಳ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.
ಹಿಂದೂಸ್ತಾನ್ ಸಮಾಚಾರ್ / jyothi deshpande