ಮುಸುಕುದಾರಿ ಬಂಧನ-ಉಪ ಮುಖ್ಯಮಂತ್ರಿ ಪ್ರತಿಕ್ರಿಯೆ
ಬೆಂಗಳೂರು, 23 ಆಗಸ್ಟ್ (ಹಿ.ಸ.) : ಆ್ಯಂಕರ್ : ಧರ್ಮಸ್ಥಳ ಶವಗಳ ಸಾಮೂಹಿಕ ಅಂತ್ಯಕ್ರಿಯೆ ಪ್ರಕರಣದಲ್ಲಿ ಎಸ್‌ಐಟಿ ಪ್ರಮುಖ ಹೆಜ್ಜೆ ಇಟ್ಟಿದ್ದು, ಮುಸುಕುದಾರಿ ಚಿನ್ನಯ್ಯನ ಬಂಧನ ನಡೆದಿದೆ. ಈ ಬೆಳವಣಿಗೆಯ ಬಗ್ಗೆ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಬೆಂಗಳೂರಿನಲ್ಲಿ ಪ್ರತಿಕ್ರಿಯಿಸಿದ್ದಾರೆ. ಎಸ್‌ಐಟಿ ರ
ಮುಸುಕುದಾರಿ ಬಂಧನ-ಉಪ ಮುಖ್ಯಮಂತ್ರಿ ಪ್ರತಿಕ್ರಿಯೆ


ಬೆಂಗಳೂರು, 23 ಆಗಸ್ಟ್ (ಹಿ.ಸ.) :

ಆ್ಯಂಕರ್ : ಧರ್ಮಸ್ಥಳ ಶವಗಳ ಸಾಮೂಹಿಕ ಅಂತ್ಯಕ್ರಿಯೆ ಪ್ರಕರಣದಲ್ಲಿ ಎಸ್‌ಐಟಿ ಪ್ರಮುಖ ಹೆಜ್ಜೆ ಇಟ್ಟಿದ್ದು, ಮುಸುಕುದಾರಿ ಚಿನ್ನಯ್ಯನ ಬಂಧನ ನಡೆದಿದೆ. ಈ ಬೆಳವಣಿಗೆಯ ಬಗ್ಗೆ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಬೆಂಗಳೂರಿನಲ್ಲಿ ಪ್ರತಿಕ್ರಿಯಿಸಿದ್ದಾರೆ.

ಎಸ್‌ಐಟಿ ರಚನೆ ಮಾಡಿದಾಗ ಬಿಜೆಪಿ ಮೌನವಾಗಿತ್ತು. ನಾವು ಕ್ರಮ ತೆಗೆದುಕೊಂಡ ನಂತರವೇ ಅವರು ಟೀಕಿಸಲು ಶುರು ಮಾಡಿದ್ದಾರೆ ಎಂದು ಶಿವಕುಮಾರ್ ಕಿಡಿಕಾರಿದರು.

ನನಗೆ ಮೊದಲಿನಿಂದಲೇ ತನಿಖೆಯ ಮೇಲೆ ನಂಬಿಕೆ ಇತ್ತು. ಧರ್ಮಸ್ಥಳದವರು ತನಿಖೆಯನ್ನು ಸ್ವಾಗತಿಸಿದ್ದಾರೆ, ಅವರ ಕುಟುಂಬದವರು ಮುಖ್ಯಮಂತ್ರಿ ಅವರನ್ನು ಭೇಟಿ ಮಾಡಿ ಬೆಂಬಲ ವ್ಯಕ್ತಪಡಿಸಿದ್ದರು. ಯಾರೇ ತಪ್ಪು ಮಾಡಿದರು ಅವರ ಮೇಲೆ ಕ್ರಮ ಕೈಗೊಳ್ಳಲೇಬೇಕು. ನಾನು ಯಾರ ಪರವೂ ಅಲ್ಲ, ನ್ಯಾಯದ ಪರ ಎಂದು ಹೇಳಿದ್ದು, ಧರ್ಮದ ಹೆಸರಿನಲ್ಲಿ ರಾಜಕೀಯ ಮಾಡಬಾರದು, ತನಿಖೆ ಮುಗಿದು ಸತ್ಯ ಹೊರಬರಲಿ ಎಂಬುದೇ ಸರ್ಕಾರದ ನಿಲುವಾಗಿದೆ ಎಂದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande