ಕಾಂಗ್ರೆಸ್ ಜನರ ಕ್ಷಮೆ ಕೇಳಬೇಕು : ಆರ್. ಅಶೋಕ್
ಬೆಂಗಳೂರು, 23 ಆಗಸ್ಟ್ (ಹಿ.ಸ.) : ಆ್ಯಂಕರ್ : ಧರ್ಮಸ್ಥಳ ಪ್ರಕರಣದಲ್ಲಿ ಎಸ್‌ಐಟಿ ಮಾಡಿದ ತನಿಖೆ ಬೆಟ್ಟ ಅಗೆದು ಇಲಿಯೂ ಸಿಗಲಿಲ್ಲ ಎಂದು ಎಂದು ಪ್ರತಿಪಕ್ಷ ನಾಯಕ ಆರ್. ಅಶೋಕ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸರಕಾರ ಜನತೆಯ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದ್ದಾರೆ. ಮಾಧ್ಯಮಗಳ ಜೊತೆ ಮ
Ashok


ಬೆಂಗಳೂರು, 23 ಆಗಸ್ಟ್ (ಹಿ.ಸ.) :

ಆ್ಯಂಕರ್ : ಧರ್ಮಸ್ಥಳ ಪ್ರಕರಣದಲ್ಲಿ ಎಸ್‌ಐಟಿ ಮಾಡಿದ ತನಿಖೆ ಬೆಟ್ಟ ಅಗೆದು ಇಲಿಯೂ ಸಿಗಲಿಲ್ಲ ಎಂದು ಎಂದು ಪ್ರತಿಪಕ್ಷ ನಾಯಕ ಆರ್. ಅಶೋಕ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸರಕಾರ ಜನತೆಯ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದ್ದಾರೆ.

ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಮುಸುಕುದಾರಿ ಚಿನ್ನಯ್ಯ ಮುಖ್ಯ ಅಲ್ಲ, ಇದರ ಹಿಂದೆ ಯಾರು ಇದ್ದಾರೆ ಎಂಬುದು ಬಹಿರಂಗವಾಗಬೇಕು. ಸಮೀರ್ ಎನ್ನುವವನೇ ಇದರ ಸೂತ್ರಧಾರ. ಧರ್ಮಸ್ಥಳ ಭಕ್ತರ ಭಾವನೆಗೆ ನೋವು ನೀಡಿದ್ದಾರೆ, ಇದಕ್ಕೆ ಮುಖ್ಯಮಂತ್ರಿ ಹಾಗೂ ಸಂಪುಟವೇ ಕಾರಣ ಎಂದು ಆರೋಪಿಸಿದರು.

ಈ ಘಟನೆ ಮತಾಂತರ ಷಡ್ಯಂತ್ರ. ಲವ್ ಜಿಹಾದ್ ತರಹದ ಮತಾಂತರ ಜಿಹಾದ್ ನಡೆಯುತ್ತಿದೆ. ಸರ್ಕಾರವೇ ಪೊಲೀಸರ ಕೈ ಕಟ್ಟಿ ಹಾಕಿತು. ಕೋಟ್ಯಂತರ ರೂಪಾಯಿ ವ್ಯಯಿಸಿದರೂ ಸತ್ಯ ಹೊರ ಬಂದಿಲ್ಲ. ಕಾಂಗ್ರೆಸ್ ಪಕ್ಷ ಜನರ ಕ್ಷಮೆ ಕೇಳಬೇಕು ಎಂದರು.

ತನಿಖೆಯನ್ನು ಎನ್‌ಐಎಗೆ ಹಸ್ತಾಂತರಿಸುವಂತೆ ಆಗ್ರಹಿಸಿದ ಅವರು, ಸತ್ಯ ಹೊರ ಬರಬೇಕೆಂಬ ಧೈರ್ಯ ಇದ್ದರೆ ಸರಕಾರ ಪ್ರಕರಣವನ್ನು ಎನ್‌ಐಎಗೆ ತನಿಖೆ ನೀಡಲಿ ಎಂದು ಸವಾಲು ಹಾಕಿದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande