ಉಡುಪಿ, 23 ಆಗಸ್ಟ್ (ಹಿ.ಸ.) :
ಆ್ಯಂಕರ್ : ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವಗಳನ್ನು ಹೂತಿಟ್ಟ ಪ್ರಕರಣದಲ್ಲಿ ಆರೋಪಿಯಾಗಿದ್ದ ಮುಸುಕುದಾರಿ ಚಿನ್ನಯ್ಯ
ಬಂಧನವಾಗಿರುವುದಾಗಿ ಗೃಹ ಸಚಿವ ಜಿ. ಪರಮೇಶ್ವರ್ ಖಚಿತಪಡಿಸಿದರು.
ಉಡುಪಿಯಲ್ಲಿ ಮಾತನಾಡಿದ ಅವರು ಆತ ಈಗ ಪೊಲೀಸ್ ವಶದಲ್ಲಿದ್ದು ತನಿಖೆ ಪೂರ್ಣಗೊಳ್ಳುವವರೆಗೆ ಹೆಚ್ಚಿನ ಮಾಹಿತಿಯನ್ನು ಬಹಿರಂಗಪಡಿಸಲಾಗುವುದಿಲ್ಲ. ಎಸ್‌ಐಟಿ ತನಿಖೆ ಮುಂದುವರಿಸುತ್ತಿದೆ, ಇದರ ಹಿಂದೆ ಯಾವ ಜಾಲವಿದೆ ಎಂಬುದನ್ನು ಪತ್ತೆ ಹಚ್ಚಲಾಗುವುದು ಎಂದು ಸಚಿವರು ಹೇಳಿದರು.
ಬಂಧಿತನಿಗೆ ಮಂಪರು ಪರೀಕ್ಷೆ ಅಗತ್ಯವಿದೆಯೇ ಎಂಬುದನ್ನು ಎಸ್‌ಐಟಿ ನಿರ್ಧರಿಸಲಿದೆ. ಸುಜಾತಾ ಭಟ್ ವಿಚಾರಣೆಯೂ ತನಿಖೆಯ ಭಾಗವಾಗಿದ್ದು, ವರದಿ ಬರುವವರೆಗೆ ಯಾವುದೇ ವಿವರ ನೀಡುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದರು.
ಬಿಜೆಪಿ ಅನೇಕ ಆರೋಪ ಮಾಡಬಹುದು, ಆದರೆ ಹೇಳಿಕೆಗಳ ಆಧಾರದ ಮೇಲೆ ತನಿಖೆ ನಡೆಯುವುದಿಲ್ಲ. ಎಸ್‌ಐಟಿ ತನ್ನ ಅಂತಿಮ ವರದಿ ಸಲ್ಲಿಸಿದ ಬಳಿಕವೇ ಸ್ಪಷ್ಟ ಚಿತ್ರಣ ಸಿಗುತ್ತದೆ ಎಂದರು.
ಇದಕ್ಕೂ ಮುನ್ನ ಮಂಗಳೂರು ವಿಮಾನ ನಿಲ್ದಾಣದಲ್ಲಿ ಗೃಹ ಸಚಿವರು ಎಸ್‌ಐಟಿ ಮುಖ್ಯಸ್ಥ ಪ್ರಣಬ್ ಮೋಹಂತಿ ಅವರಿಂದ ಚಿನ್ನಯ್ಯ ವಿಚಾರಣೆ ಹಾಗೂ ಇತ್ತೀಚಿನ ವಿದ್ಯಮಾನಗಳ ಸಂಪೂರ್ಣ ಮಾಹಿತಿ ಪಡೆದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa