ಅಕ್ರಮ ಬೆಟ್ಟಿಂಗ್ ಪ್ರಕರಣದಲ್ಲಿ ಕಾಂಗ್ರೆಸ್ ಶಾಸಕ ಕೆ.ಸಿ.ವೀರೇಂದ್ರ ಬಂಧನ
ಬೆಂಗಳೂರು, 23 ಆಗಸ್ಟ್ (ಹಿ.ಸ.) : ಆ್ಯಂಕರ್ : ಅಕ್ರಮ ಆನ್‌ಲೈನ್ ಹಾಗೂ ಆಫ್‌ಲೈನ್ ಬೆಟ್ಟಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿತ್ರದುರ್ಗದ ಕಾಂಗ್ರೆಸ್ ಶಾಸಕ ಕೆ.ಸಿ. ವೀರೇಂದ್ರ ಅವರನ್ನು ಜಾರಿ ನಿರ್ದೇಶನಾಲಯ ಶನಿವಾರ ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ ಅಡಿಯಲ್ಲಿ ಬಂಧಿಸಿದೆ. ಶುಕ್ರವಾರ ನಡೆದ ದಾಳಿಗಳ ವ
Arrest


Arrest


ಬೆಂಗಳೂರು, 23 ಆಗಸ್ಟ್ (ಹಿ.ಸ.) :

ಆ್ಯಂಕರ್ : ಅಕ್ರಮ ಆನ್‌ಲೈನ್ ಹಾಗೂ ಆಫ್‌ಲೈನ್ ಬೆಟ್ಟಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿತ್ರದುರ್ಗದ ಕಾಂಗ್ರೆಸ್ ಶಾಸಕ ಕೆ.ಸಿ. ವೀರೇಂದ್ರ ಅವರನ್ನು ಜಾರಿ ನಿರ್ದೇಶನಾಲಯ ಶನಿವಾರ ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ ಅಡಿಯಲ್ಲಿ ಬಂಧಿಸಿದೆ.

ಶುಕ್ರವಾರ ನಡೆದ ದಾಳಿಗಳ ವೇಳೆ ₹12 ಕೋಟಿ ನಗದು ( ವಿದೇಶಿ ಕರೆನ್ಸಿ ಸೇರಿ), ₹6 ಕೋಟಿ ಮೌಲ್ಯದ ಚಿನ್ನಾಭರಣ, 10 ಕೆಜಿ ಬೆಳ್ಳಿ ಹಾಗೂ ನಾಲ್ಕು ವಾಹನಗಳನ್ನು ವಶಪಡಿಸಿಕೊಂಡಿರುವುದಾಗಿ ಇಡಿ ತಿಳಿಸಿದೆ.

ಶಾಸಕರನ್ನು ಸಿಕ್ಕಿಂನ ಗ್ಯಾಂಗ್ಟಾಕ್‌ನಲ್ಲಿ ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಲಾಗಿದ್ದು, ನಂತರ ಅವರನ್ನು ಬೆಂಗಳೂರಿನ ನ್ಯಾಯಾಲಯಕ್ಕೆ ತರಲು ಟ್ರಾನ್ಸಿಟ್ ರಿಮಾಂಡ್ ಪಡೆದುಕೊಂಡಿದ್ದಾರೆ.

ವೀರೇಂದ್ರ ತಮ್ಮ ಸಹಚರರೊಂದಿಗೆ ಕ್ಯಾಸಿನೊ ಗುತ್ತಿಗೆ ಪಡೆಯಲು ಗ್ಯಾಂಗ್ಟಾಕ್‌ಗೆ ಭೇಟಿ ನೀಡಿದ್ದ ವೇಳೆ ಬಂಧನ ನಡೆದಿದೆ. ಅವರ ಸಹೋದರ ಕೆ.ಸಿ. ನಾಗರಾಜ್ ಹಾಗೂ ಪುತ್ರ ಪೃಥ್ವಿ ಎನ್.ರಾಜ್ ಅವರ ಮನೆಗಳಿಂದ ಆಸ್ತಿಗೆ ಸಂಬಂಧಿಸಿದ ದಾಖಲೆಗಳನ್ನು ವಶಪಡಿಸಿಕೊಂಡಿರುವುದಾಗಿ ತನಿಖಾ ಸಂಸ್ಥೆ ತಿಳಿಸಿದೆ. ಮತ್ತೊಬ್ಬ ಸಹೋದರ ಕೆ.ಸಿ. ತಿಪ್ಪೇಸ್ವಾಮಿ ದುಬೈನಿಂದ ಆನ್‌ಲೈನ್ ಗೇಮಿಂಗ್ ಕಾರ್ಯಾಚರಣೆ ನಡೆಸುತ್ತಿರುವ ಮಾಹಿತಿ ಕೂಡ ಲಭ್ಯವಾಗಿದೆ ಎಂದು ಇಡಿ ತಿಳಿಸಿದೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande