ಶಿವಮೊಗ್ಗ, 23 ಆಗಸ್ಟ್ (ಹಿ.ಸ.) :
ಆ್ಯಂಕರ್ : ಧರ್ಮಸ್ಥಳ ಪ್ರಕರಣದ ತನಿಖೆಯನ್ನು ಎನ್‌ಐಎಗೆ ವಹಿಸಬೇಕು ಎಂದು ಶಿವಮೊಗ್ಗ ಸಂಸದ ಬಿವೈ ರಾಘವೇಂದ್ರ ಆಗ್ರಹಿಸಿದ್ದಾರೆ.
ಶಿವಮೊಗ್ಗದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ನಕ್ಸಲರು, ಎಡಪಂಥೀಯರು ಹಾಗೂ ಕಾಣದ ಕೈಗಳು ಈ ಕೃತ್ಯವನ್ನು ನಡೆಸಿವೆ. ಸೌಜನ್ಯ ಪ್ರಕರಣವನ್ನು ಉಪಯೋಗಿಸಿ ಮಂಜುನಾಥ ಸ್ವಾಮಿಯ ಸನ್ನಿಧಾನ ಮತ್ತು ಹಿಂದೂ ಧರ್ಮಕ್ಕೆ ಅವಮಾನ ತರುವ ಷಡ್ಯಂತ್ರ ನಡೆದಿದೆ ಎಂದು ಆರೋಪಿಸಿದರು.
ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿ ಈ ಪ್ರಕರಣದಲ್ಲಿ ಮುಸುಕುಧಾರಿಯನ್ನು ರಕ್ಷಿಸಲು ಮುಂದಾಗಿದ್ದಾರೆ ಎಂದು ಆರೋಪಿಸಿದ ಅವರು, ಪ್ರಕರಣಕ್ಕೆ ಸಂಬಂಧವಿಲ್ಲದ ವ್ಯಕ್ತಿಗಳ ಹೇಳಿಕೆಗಳ ಹಿನ್ನೆಲೆಯಲ್ಲಿ ಸುಜಾತ ಭಟ್ ಹೆಣ್ಣು ಕುಲಕ್ಕೆ ಕಳಂಕ ತಂದಿದ್ದಾರೆ ಎಂದರು.
ಒಂದು ರೂಪಾಯಿಯೂ ಬ್ಯಾಂಕಿನಲ್ಲಿ ಇಲ್ಲದ ವ್ಯಕ್ತಿಗಳ ಹೆಸರಿನಲ್ಲಿ ಲಕ್ಷಾಂತರ ರೂ. ವಹಿವಾಟು ನಡೆದಿದೆ. ಸಮೀರ್ ಎಂಬ ಯೂಟ್ಯೂಬರ್ ಪ್ರಕರಣದ ಕೇಂದ್ರ ವ್ಯಕ್ತಿಯಾಗಿದ್ದು ಎನ್‌ಐಎ ಮೂಲಕ ತಕ್ಷಣ ತನಿಖೆ ನಡೆಸುವಂತೆ ಆಗ್ರಹಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa