ಶಿಸ್ತುಬದ್ಧವಾಗಿ ಉಪ ಲೋಕಾಯುಕ್ತರ ಕಾರ್ಯಕ್ರಮ ಸಿದ್ಧತೆಗೆ ಸೂಚನೆ
ರಾಯಚೂರು, 23 ಆಗಸ್ಟ್ (ಹಿ.ಸ.) : ಆ್ಯಂಕರ್ : ರಾಯಚೂರು ಜಿಲ್ಲೆಯಲ್ಲಿ ಆಗಸ್ಟ್ 28 ರಿಂದ ಆಗಸ್ಟ್ 30ರವರೆಗೆ ಪ್ರವಾಸದಲ್ಲಿರುವ ಉಪ ಲೋಕಾಯುಕ್ತರ ಕಾರ್ಯಕ್ರಮವು ಶಿಸ್ತುಬದ್ಧವಾಗಿ ಮತ್ತು ಶಿಷ್ಟಾಚಾರದಂತೆ ನಡೆಯಲು ಎಲ್ಲಾ ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿಗಳಾದ ಶಿವಾನಂದ ಅವರು
ಉಪ ಲೋಕಾಯುಕ್ತರ ಕಾರ್ಯಕ್ರಮವು ಶಿಸ್ತುಬದ್ಧವಾಗಿ ನಡೆಯಲು ಸಿದ್ಧತೆಗೆ ಸೂಚನೆ


ರಾಯಚೂರು, 23 ಆಗಸ್ಟ್ (ಹಿ.ಸ.) :

ಆ್ಯಂಕರ್ : ರಾಯಚೂರು ಜಿಲ್ಲೆಯಲ್ಲಿ ಆಗಸ್ಟ್ 28 ರಿಂದ ಆಗಸ್ಟ್ 30ರವರೆಗೆ ಪ್ರವಾಸದಲ್ಲಿರುವ ಉಪ ಲೋಕಾಯುಕ್ತರ ಕಾರ್ಯಕ್ರಮವು ಶಿಸ್ತುಬದ್ಧವಾಗಿ ಮತ್ತು ಶಿಷ್ಟಾಚಾರದಂತೆ ನಡೆಯಲು ಎಲ್ಲಾ ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿಗಳಾದ ಶಿವಾನಂದ ಅವರು ಹೇಳಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಮತ್ತೊಂದು ಸುತ್ತಿನ ಪೂರ್ವಭಾವಿ ಸಿದ್ಧತಾ ಸಭೆ ನಡೆಸಿ ಅವರು ಮಾತನಾಡಿದರು.

ಉಪ ಲೋಕಾಯುಕ್ತರಾದ ನ್ಯಾ.ಬಿ.ವೀರಪ್ಪ ಅವರು ರಾಯಚೂರು ಜಿಲ್ಲೆಯಲ್ಲಿ ಆಗಸ್ಟ್ 28, 29 ಮತ್ತು 30ರಂದು ಮೂರು ದಿನಗಳ ಕಾಲ ಕೈಗೊಂಡ ನಾನಾ ಕಾರ್ಯಕ್ರಮಗಳ ಬಗ್ಗೆ ಈಗಾಗಲೇ ಅಧೀಕೃತ ಪ್ರವಾಸದ ವಿವರ ಬಂದಿರುತ್ತದೆ. ಅದರಂತೆ ಎಲ್ಲ ಕಾರ್ಯಕ್ರಮಗಳು ಸಮಯಕ್ಕೆ ಸರಿಯಾಗಿ ನಡೆಯಬೇಕು. ಶಿಷ್ಟಾಚಾರ ಉಲ್ಲಂಘನೆಯಾಗದಂತೆ ಎಲ್ಲಾ ಕಾರ್ಯಕ್ರಮಗಳು ಸಮಯಕ್ಕನುಸಾರ ಸುವ್ಯವಸ್ಥಿತವಾಗಿ ನಡೆಯಬೇಕು. ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ಜಗಜ್ಯೋತಿ ಬಸವೇಶ್ವರರ ಆಡಿಟೋರಿಯಂ ಹಾಲ್, ಜಿಲ್ಲಾ ನ್ಯಾಯಾಲಯದ ಸಂಕೀರ್ಣ ಸೇರಿದಂತೆ ವಿವಿಧೆಡೆ ಕಾರ್ಯಕ್ರಮ ನಡೆಯುವ ಬಗ್ಗೆ ಮತ್ತು ಕಾರ್ಯಕ್ರಮದ ವಿವರದ ಬಗ್ಗೆ ಅಧಿಕಾರಿಗಳಿಗೆ ತಿಳಿಸಲಾಗಿದೆ. ಕಾರ್ಯಕ್ರಮದ ಸ್ಥಳದಲ್ಲಿ ಊಟ, ಉಪಹಾರ, ಚಹಾ ವಿತರಣೆ, ಕುಡಿಯುವ ನೀರು ಪೂರೈಕೆ, ಕಾರ್ಯಕ್ರಮದ ಸ್ಥಳವು ಶುಚಿಯಾಗಿರುವುದು ಮತ್ತು ಸೂಕ್ತ ಪೊಲೀಸ್ ಭದ್ರತೆ ಏರ್ಪಾಡು ಹೀಗೆ ನಾನಾ ಕಾರ್ಯಗಳ ಬಗ್ಗೆ ಈಗಾಗಲೇ ಜಿಲ್ಲಾಡಳಿತದಿಂದ ಸಮಿತಿ ರಚನೆ ಮಾಡಿ ಹಂಚಿಕೆ ಮಾಡಿದಂತೆ ಎಲ್ಲ ಕಾರ್ಯಗಳ ನಿರ್ವಹಣೆಯು ಅಚ್ಚುಕಟ್ಟಾಗಿ ನಡೆಯಬೇಕು ಎಂದು ತಿಳಿಸಿದರು.

ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ಆವರಣವು ಶುಚಿತ್ವದಿಂದ ಕೂಡಿರಬೇಕು. ಕಾರ್ಯಕ್ರಮದ ಸ್ಥಳವಾದ ಜಗಜ್ಯೋತಿ ಬಸವೇಶ್ವರರ ಸಭಾಂಗಣವನ್ನು ಧ್ವನಿ, ಬೆಳಕು, ಗಾಳಿ ಬರುವ ಹಾಗೆ ಅಚ್ಚುಕಟ್ಟಾಗಿ ಸಿದ್ಧಪಡಿಸಬೇಕು ಎಂದು ಸೂಚನೆ ನೀಡಿದರು.

ಈ ಕಾರ್ಯಕ್ರಮದ ಬಗ್ಗೆ ಇನ್ನು ಹೆಚ್ಚಿನ ರೀತಿಯಲ್ಲಿ ಪ್ರಚಾರ ನಡಯಬೇಕು. ಫಲಕಗಳಲ್ಲಿ ಬ್ಯಾನರ್ ಅಳವಡಿಸಿ ಮಾನ್ಯ ಲೋಕಾಯುಕ್ತರು ಆಗಮಿಸುವ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ಒದಗಿಸಬೇಕು. ಆಯಾ ಕಚೇರಿಗಳ ಮುಂದೆ ಬ್ಯಾನರ್ ಅಳವಡಿಸಿ ಪ್ರಚಾರ ನಡೆಸಬೇಕು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಮಾನ್ಯ ಉಪ ಲೋಕಾಯುಕ್ತರ ಕಾರ್ಯಕ್ರಮಕ್ಕೆ ಕೆಲವೇ ದಿನಗಳು ಬಾಕಿ ಇದ್ದು ಬಾಕಿ ಕಾರ್ಯವನ್ನು ಬೇಗನೆ ಪೂರ್ಣಗೊಳಿಸಬೇಕು. ಕಾರ್ಯಕ್ರಮದ ದಿನಗಳಂದು ಅಧಿಕಾರಿಗಳು ಕಡ್ಡಾಯ ಹಾಜರಿರಬೇಕು ಎಂದು ಸೂಚನೆ ನೀಡಿದರು.

ಸಭೆಯಲ್ಲಿ ತಹಸೀಲ್ದಾರ ಸುರೇಶ ವರ್ಮಾ ಸೇರಿದಂತೆ ಇಲಾಖೆಗಳ ಅಧಿಕಾರಿಗಳು ಇದ್ದರು.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande