ಬೆಂಗಳೂರು, 23 ಆಗಸ್ಟ್ (ಹಿ.ಸ.) :
ಆ್ಯಂಕರ್ : ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್, ಪವಿತ್ರಾಗೌಡ ಸೇರಿ ಏಳು ಮಂದಿ ಆರೋಪಿಗಳು ಇಂದು ವೀಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಲಯಕ್ಕೆ ಹಾಜರಾದರು.
ಆರೋಪಿಗಳನ್ನು ನಾನಾ ಜೈಲುಗಳಿಗೆ ಸ್ಥಳಾಂತರಿಸಬೇಕೆಂದು ಸರ್ಕಾರದ ಪರ ವಕೀಲರು ಮನವಿ ಸಲ್ಲಿಸಿದರೆ, ಆರೋಪಿ ಪ್ರದೂಷ್ ಪರ ವಕೀಲರು ಇದಕ್ಕೆ ಆಕ್ಷೇಪಣೆ ಸಲ್ಲಿಸಿದರು. ಇತರರು ತಕರಾರು ಅರ್ಜಿ ಸಲ್ಲಿಸಲು ಸಮಯ ಕೋರಿದರು.
ಪವಿತ್ರಾ ಗೌಡ ಪರ ವಕೀಲರು, ಪೊಲೀಸರು ಸಿಆರ್‌ಪಿಸಿ ಅಡಿಯಲ್ಲಿ ಚಾರ್ಜ್‌ಶೀಟ್ ಸಲ್ಲಿಸಿದ್ದು, ಬಿಎನ್‌ಎಸ್‌ಎಸ್ ಪ್ರಕಾರ ನಿಯಮ ಉಲ್ಲಂಘನೆಯಾಗಿದೆ ಎಂದು ಜಾಮೀನು ನೀಡುವಂತೆ ಮನವಿ ಮಾಡಿದರು.
ವಾದ ಆಲಿಸಿದ ನ್ಯಾಯಾಲಯವು ಆರೋಪಿಗಳಿಗೆ ಸೆಪ್ಟೆಂಬರ್ 9ರವರೆಗೆ ನ್ಯಾಯಾಂಗ ಬಂಧನ ವಿಸ್ತರಿಸಿ, ಜೈಲು ಸ್ಥಳಾಂತರ ಅರ್ಜಿಯ ವಿಚಾರಣೆಯನ್ನು ಆಗಸ್ಟ್ 30ಕ್ಕೆ ಮುಂದೂಡಿತು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa