ಬೆಂಗಳೂರು, 23 ಆಗಸ್ಟ್ (ಹಿ.ಸ.) :
ಆ್ಯಂಕರ್ : ಗೌರಿ–ಗಣೇಶ ಹಬ್ಬದ ಪ್ರಯುಕ್ತ ಪ್ರಯಾಣಿಕರ ಸುಗಮ ಸಂಚಾರಕ್ಕಾಗಿ ಕೆಎಸ್ಆರ್‌ಟಿಸಿ ಆಗಸ್ಟ್ 25 ರಿಂದ 31ರವರೆಗೆ 1500 ವಿಶೇಷ ಬಸ್‌ಗಳ ವ್ಯವಸ್ಥೆ ಕಲ್ಪಿಸಿದೆ.
ಬೆಂಗಳೂರಿನಿಂದ ಜಿಲ್ಲೆಗಳು ಹಾಗೂ ಅಂತರ ರಾಜ್ಯದ ಪ್ರಮುಖ ನಗರಗಳಿಗೆ ಈ ಬಸ್‌ಗಳು ಓಡಲಿವೆ.
ವಿಶೇಷ ಬಸ್ ಮಾರ್ಗಗಳು: ಕೆಂಪೇಗೌಡ ನಿಲ್ದಾಣ (ಮೆಜೆಸ್ಟಿಕ್): ಧರ್ಮಸ್ಥಳ, ಕುಕ್ಕೆ ಸುಬ್ರಮಣ್ಯ, ಶಿವಮೊಗ್ಗ, ಹಾಸನ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಗೋಕರ್ಣ, ಶಿರಸಿ, ಕಾರವಾರ, ರಾಯಚೂರು, ಕಲಬುರಗಿ, ಬಳ್ಳಾರಿ, ಕೊಪ್ಪಳ, ಯಾದಗಿರಿ, ಬೀದರ್, ತಿರುಪತಿ, ವಿಜಯವಾಡ, ಹೈದರಾಬಾದ್.
ಮೈಸೂರು ರಸ್ತೆ ನಿಲ್ದಾಣ: ಮೈಸೂರು, ಹುಣಸೂರು, ಪಿರಿಯಾಪಟ್ಟಣ, ವಿರಾಜಪೇಟೆ, ಕುಶಾಲನಗರ, ಮಡಿಕೇರಿ.
ಶಾಂತಿನಗರ ನಿಲ್ದಾಣ: ಮಧುರೈ, ಕುಂಭಕೋಣಂ, ಚೆನ್ನೈ, ಕೊಯಮತ್ತೂರು, ತಿರುಚ್ಚಿ, ಪಾಲಕ್ಕಾಡ್, ತ್ರಿಶೂರ್, ಏರ್ನಾಕುಲಂ, ಕೋಯಿಕ್ಕೋಡ್, ಕಲ್ಲಿಕೋಟೆ.
ರಿಯಾಯಿತಿ ಯೋಜನೆಗಳು: 4 ಅಥವಾ ಹೆಚ್ಚಿನವರು ಒಟ್ಟಿಗೆ ಮುಂಗಡ ಟಿಕೆಟ್ ಬುಕ್ ಮಾಡಿದರೆ 5% ರಿಯಾಯಿತಿ. ತೆರಳುವ ಹಾಗೂ ಮರಳುವ ಟಿಕೆಟ್ ಒಟ್ಟಿಗೆ ಕಾಯ್ದಿರಿಸಿದರೆ ಮರಳು ಪ್ರಯಾಣದ ದರದಲ್ಲಿ 10% ರಿಯಾಯಿತಿ ದೊರೆಯಲಿದೆ ಎಂದು ಕೆಎಸ್ಆರ್‌ಟಿಸಿ ತಿಳಿಸಿದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa