ಕರಾಮುವಿ : ಪರೀಕ್ಷಾ ಶುಲ್ಕ ಪಾವತಿಗೆ ಸೂಚನೆ
ಬೆಂಗಳೂರು, 23 ಆಗಸ್ಟ್ (ಹಿ.ಸ.) : ಆ್ಯಂಕರ್ : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು ಬೆಂಗಳೂರು ಪ್ರಾದೇಶಿಕ ಕೇಂದ್ರ-01, ಬಾಪೂಜಿನಗರ ಇಲ್ಲಿ 2018-19 ರಿಂದ 2024-25ನೇ ಶೈಕ್ಷಣಿಕ ಸಾಲುಗಳ ಜುಲೈ/ಜನವರಿ ಆವೃತ್ತಿ ಹಾಗೂ 2024-25ನೇ ಶೈಕ್ಷಣಿಕ ಸಾಲಿನ ಜುಲೈ ಆವೃತ್ತಿಯಲ್ಲಿ ಯು.ಜಿ/ಪಿ.ಜಿ/ ಡಿಪ್ಲೋ
ಕರಾಮುವಿ : ಪರೀಕ್ಷಾ ಶುಲ್ಕ ಪಾವತಿಗೆ ಸೂಚನೆ


ಬೆಂಗಳೂರು, 23 ಆಗಸ್ಟ್ (ಹಿ.ಸ.) :

ಆ್ಯಂಕರ್ : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು ಬೆಂಗಳೂರು ಪ್ರಾದೇಶಿಕ ಕೇಂದ್ರ-01, ಬಾಪೂಜಿನಗರ ಇಲ್ಲಿ 2018-19 ರಿಂದ 2024-25ನೇ ಶೈಕ್ಷಣಿಕ ಸಾಲುಗಳ ಜುಲೈ/ಜನವರಿ ಆವೃತ್ತಿ ಹಾಗೂ 2024-25ನೇ ಶೈಕ್ಷಣಿಕ ಸಾಲಿನ ಜುಲೈ ಆವೃತ್ತಿಯಲ್ಲಿ ಯು.ಜಿ/ಪಿ.ಜಿ/ ಡಿಪ್ಲೋಮಾ/ ಸರ್ಟಿಫಿಕೇಟ್ ಕೋರ್ಸುಗಳಿಗೆ ಪ್ರವೇಶಾತಿ/ ಪ್ರವೇಶಾತಿ ನವೀಕರಣ ಪಡೆದಿರುವ ಸಿ.ಬಿ.ಸಿ.ಎಸ್ / ನಾನ್ ಸಿ.ಬಿ.ಸಿ.ಎಸ್ ವಿದ್ಯಾರ್ಥಿಗಳಿಗೆ ಪರೀಕ್ಷಾ ಶುಲ್ಕ ಪಾವತಿಸಲು ಅಧಿಸೂಚನೆ ಹೊರಡಿಸಲಾಗಿರುತ್ತದೆ.

ಪರೀಕ್ಷಾ ಶುಲ್ಕವನ್ನು ಪಾವತಿಸಲು ದಂಡ ಶುಲ್ಕವಿಲ್ಲದೆ ಆಗಸ್ಟ್ 28, 2025 ಹಾಗೂ ರೂ.200/- ದಂಡ ಶುಲ್ಕದೊಡನೆ ಸೆಪ್ಟೆಂಬರ್ 06,2025 ಕೊನೆಯ ದಿನಾವಾಗಿದ್ದು, ವಿದ್ಯಾರ್ಥಿಗಳು ವಿಶ್ವವಿದ್ಯಾನಿಲಯದ ಅಧಿಕೃತ ವೆಬ್ ಸೈಟ್ www.ksoumysuru.ac.in ಮೂಲಕವೇ ಪರೀಕ್ಷಾ ಶುಲ್ಕವನ್ನು ಪಾವತಿಸಬೇಕಾಗಿರುತ್ತದೆ.

ಹೆಚ್ಚಿನ ವಿವರಗಳಿಗಾಗಿ ಪ್ರಾದೇಶಿಕ ನಿರ್ದೇಶಕರು, ಬೆಂಗಳೂರು ಪ್ರಾದೇಶಿಕ ಕೇಂದ್ರ-01, ಮೊದಲನೇ ಮಹಡಿ, ಕೆ.ಎಸ್.ಆರ್.ಟಿ.ಸಿ. ಸ್ಯಾಟಲೈಟ್ ಬಸ್ ನಿಲ್ದಾಣ, ಮೈಸೂರು ರಸ್ತೆ, ಬಾಪೂಜಿನಗರ, ಬೆಂಗಳೂರು-26, ಕಛೇರಿ ದೂರವಾಣಿ ಸಂಖ್ಯೆ : 080-26603664 ಹಾಗೂ 9880626439, 9019526439 ಗೆ ಸಂಪರ್ಕಿಸಬಹುದು ಎಂದು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಪ್ರಾದೇಶಿಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande