ಉಡುಪಿ, 23 ಆಗಸ್ಟ್ (ಹಿ.ಸ.) :
ಆ್ಯಂಕರ್ : ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ವಿರುದ್ಧ ಅವಹೇಳನಾತ್ಮಕ ಹೇಳಿಕೆ ನೀಡಿದ ಪ್ರಕರಣದಲ್ಲಿ ಬಂಧಿತನಾಗಿದ್ದ ಮಹೇಶ್ ಶೆಟ್ಟಿ ತಿಮರೋಡಿಗೆ ಉಡುಪಿ ಜೆಎಂಎಫ್‌ಸಿ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.
ಬ್ರಹ್ಮಾವರ ಗ್ರಾಮಾಂತರ ಬಿಜೆಪಿ ಮಂಡಲ ಅಧ್ಯಕ್ಷ ರಾಜೀವ್ ಕುಲಾಲ್ ಅವರ ದೂರು ಆಧರಿಸಿ ಬ್ರಹ್ಮಾವರ ಪೊಲೀಸರು ಪ್ರಕರಣ ದಾಖಲಿಸಿ ಆಗಸ್ಟ್ 21 ರಂದು ಉಜಿರೆ ಬಳಿಯ ತಿಮರೋಡಿಯ ನಿವಾಸದಲ್ಲಿ ಬಂಧಿಸಿದ್ದರು.
ತಿಮರೋಡಿ ಸಾಮಾಜಿಕ ಜಾಲತಾಣದಲ್ಲಿ ಬಿ.ಎಲ್. ಸಂತೋಷ್ ವಿರುದ್ಧ ತೇಜೋವಧೆ ಮಾಡಿ, ಹಿಂದೂ ಧರ್ಮದ ನಾಯಕನ ನಿಂದನೆ ಮಾಡಿ, ಧರ್ಮ ಮತ್ತು ಸಮುದಾಯಗಳ ನಡುವೆ ವೈಮನಸ್ಸು ಉಂಟುಮಾಡಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಸುಳ್ಳು ನಿಂದನೆ ಮತ್ತು ಸಾರ್ವಜನಿಕ ಶಾಂತಿ ಕದಡುವ ಸೆಕ್ಷನ್‌ಗಳಲ್ಲಿ ಪ್ರಕರಣ ದಾಖಲಾಗಿತ್ತು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa