ಶ್ರೀ ಧರ್ಮಸ್ಥಳ ವಿರುದ್ಧದ ಅಪಪ್ರಚಾರ ಖಂಡಿಸಿ, ಬೃಹತ್ ಪ್ರತಿಭಟನೆ
ಗದಗ, 23 ಆಗಸ್ಟ್ (ಹಿ.ಸ.) : ಆ್ಯಂಕರ್ : ಗದಗ ಜಿಲ್ಲೆ ಮುಂಡರಗಿ ಪಟ್ಟಣದಲ್ಲಿಂದು‌ ಭಾರಿ ಆಕ್ರೋಶದ ಸಿಡಿಲು ಒಡೆದಂತಾಯಿತು. ಧರ್ಮಸ್ಥಳ ಕ್ಷೇತ್ರ ಹಾಗೂ ಹಿಂದೂ ಧರ್ಮದ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ನಡೆದಿರುವ ಅಪಪ್ರಚಾರವನ್ನು ಖಂಡಿಸಿ ಬಿಜೆಪಿ ಹಾಗೂ ಹಿಂದೂಪರ ಸಂಘಟನೆಗಳ ನೇತೃತ್ವದಲ್ಲಿ ಬೃಹತ್ ಪ್ರತಿಭ
ಪೋಟೋ


ಗದಗ, 23 ಆಗಸ್ಟ್ (ಹಿ.ಸ.) :

ಆ್ಯಂಕರ್ : ಗದಗ ಜಿಲ್ಲೆ ಮುಂಡರಗಿ ಪಟ್ಟಣದಲ್ಲಿಂದು‌ ಭಾರಿ ಆಕ್ರೋಶದ ಸಿಡಿಲು ಒಡೆದಂತಾಯಿತು. ಧರ್ಮಸ್ಥಳ ಕ್ಷೇತ್ರ ಹಾಗೂ ಹಿಂದೂ ಧರ್ಮದ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ನಡೆದಿರುವ ಅಪಪ್ರಚಾರವನ್ನು ಖಂಡಿಸಿ ಬಿಜೆಪಿ ಹಾಗೂ ಹಿಂದೂಪರ ಸಂಘಟನೆಗಳ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಯಿತು.

ಮುಂಡರಗಿ ಪಟ್ಟಣದ ಗಣೇಶ ದೇವಸ್ಥಾನದಿಂದ ಪ್ರಾರಂಭವಾದ ಪ್ರತಿಭಟನಾ ಮೆರವಣಿಗೆ, ಸಾವಿರಾರು ಕಾರ್ಯಕರ್ತರು, ಮಹಿಳೆಯರು ಹಾಗೂ ಭಕ್ತರನ್ನು ಸೆಳೆದುಕೊಂಡು ತಹಶಿಲ್ದಾರರ ಕಚೇರಿ ತಲುಪಿತು. ಈ ವೇಳೆ ಪ್ರತಿಭಟನಾಕಾರರು “ಧರ್ಮಸ್ಥಳದ ವಿರುದ್ಧ ಧ್ವನಿ ಎತ್ತುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಿ”, “ಹಿಂದೂ ಧರ್ಮಕ್ಕೆ ಅವಹೇಳನ ಬೇಡ”, “ಅಪಪ್ರಚಾರ ನಿಲ್ಲಿಸಬೇಕು” ಎಂಬ ಘೋಷಣೆ ಹಾಕಿ ಆಕ್ರೋಶ ವ್ಯಕ್ತಪಡಿಸಿದರು.

ಈ ಪ್ರತಿಭಟನೆಯಲ್ಲಿ ಬಿಜೆಪಿ ಶಾಸಕ ಡಾ: ಚಂದ್ರು ಲಮಾಣಿ ಸೇರಿದಂತೆ ಅನೇಕ ಪ್ರಮುಖ ಮುಖಂಡರು ಪಾಲ್ಗೊಂಡಿದ್ದರು. ಶಾಸಕರು ಮಾತನಾಡುತ್ತಾ “ಧರ್ಮಸ್ಥಳ ಪೀಠವು ಶತಮಾನಗಳಿಂದ ಜನಸೇವೆಯ ಪ್ರತೀಕವಾಗಿದೆ. ಇಂತಹ ಪವಿತ್ರ ಕ್ಷೇತ್ರದ ವಿರುದ್ಧ ಸುಳ್ಳು, ದ್ವೇಷಪೂರಿತ ಅಭಿಪ್ರಾಯ ಹಂಚುವವರು ಸಮಾಜದ ಶತ್ರುಗಳು. ಇಂತಹವರ ವಿರುದ್ಧ ತಕ್ಷಣವೇ ಕಾನೂನು ಕ್ರಮ ಕೈಗೊಳ್ಳಬೇಕು ಎಂದರು.

ಪ್ರತಿಭಟನೆಯಲ್ಲಿ ಭಾಗಿಯಾದ ಹಿಂದೂಪರ ಸಂಘಟನೆಗಳ ನಾಯಕರು ಮಾತನಾಡುತ್ತಾ

“ಇದು ಕೇವಲ ಧರ್ಮಸ್ಥಳದ ವಿರುದ್ಧದ ಅಪಪ್ರಚಾರವಲ್ಲ, ಇಡೀ ಹಿಂದೂ ಸಮಾಜವನ್ನು ದುರ್ಬಲಗೊಳಿಸುವ ನಿಗದಿತ ಸಂಚು. ಪುಣ್ಯ ಕ್ಷೇತ್ರದ ಬಗ್ಗೆ ನಂಬಿಕೆ ಕುಂದಿಸಲು ಕೆಲವರು ಜಾಲ ತಂತ್ರವನ್ನು ಬಳಸುತ್ತಿದ್ದಾರೆ. ಇದನ್ನು ತಕ್ಷಣವೇ ತಡೆಗಟ್ಟದೇ ಎಂದರು.

ಪ್ರತಿಭಟನಾಕಾರರು ಗೃಹ ಸಚಿವರು ಹಾಗೂ ಮುಖ್ಯಮಂತ್ರಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. “ರಾಜ್ಯ ಸರ್ಕಾರ ಈ ವಿಷಯದಲ್ಲಿ ಸುಮ್ಮನಿರುವುದು ಅನುಮಾನಾಸ್ಪದ. ಸರ್ಕಾರ ತಕ್ಷಣವೇ ಸ್ಪಷ್ಟನೆ ನೀಡಬೇಕು. ಇಲ್ಲವಾದರೆ ಜನರ ಕೋಪವನ್ನು ಎದುರಿಸಬೇಕಾಗುತ್ತದೆ”, ಮೆರವಣಿಗೆಯ ಅಂತ್ಯದಲ್ಲಿ ಪ್ರತಿಭಟನಾಕಾರರು ತಹಶಿಲ್ದಾರರ ಕಚೇರಿಗೆ ತೆರಳಿ ಅಪಪ್ರಚಾರ ನಡೆಸುತ್ತಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು, ರಾಜ್ಯ ಸರ್ಕಾರ ಧರ್ಮಸ್ಥಳ ಕ್ಷೇತ್ರದ ಗೌರವವನ್ನು ಕಾಯ್ದುಕೊಳ್ಳುವ ಕ್ರಮ ಕೈಗೊಳ್ಳಬೇಕು ಎಂಬಂತೆ ಮನವಿ ಸಲ್ಲಿಸಿದರು.

ಹಿಂದೂಸ್ತಾನ್ ಸಮಾಚಾರ್ / lalita MP


 rajesh pande