ಬೆಂಗಳೂರು, 23 ಆಗಸ್ಟ್ (ಹಿ.ಸ.) :
ಆ್ಯಂಕರ್ : ಅಭಿವೃದ್ಧಿ ಯೋಜನೆಗಳ ಅನುಷ್ಠಾನದಲ್ಲಿ ನಿರ್ಲಕ್ಷ್ಯ ತೋರಿರುವ ಹಾಗೂ ವಿಳಂಬ ನೀತಿ ಅನುಸರಿಸುತ್ತಿರುವ ಎಪಿಎಂಸಿ ಅಧಿಕಾರಿಗಳನ್ನು ಅಮಾನತು ಮಾಡಲು ಸಚಿವ ಶಿವಾನಂದ ಪಾಟೀಲ್ ಹಿರಿಯ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜವಳಿ, ಕಬ್ಬು ಅಭಿವೃದ್ಧಿ, ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಇಲಾಖೆಯ ಸಭಾಂಗಣದಲ್ಲಿ ನಾಲ್ಕು ಕಂದಾಯ ವಿಭಾಗಗಳ ಎಪಿಎಂಸಿ ಅಧಿಕಾರಿಗಳ ಸಭೆ ನಡೆಸಿದ ಅವರು, ನಿಗದಿತ ಅವಧಿಯಲ್ಲಿ ಕಾಮಗಾರಿ ಪೂರ್ಣಗೊಳಿಸದ ಅಧಿಕಾರಿಗಳ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.
ಮೂಲಸೌಕರ್ಯ, ಕೋಲ್ಡ್‌ಸ್ಟೋರೇಜ್ ಯೋಜನೆಗಳ ಪ್ರಗತಿ ಪರಿಶೀಲಿಸಿದ ಸಚಿವರು, “ಗೋಡೌನ್‌ಗಳು ಬಹುತೇಕ ಖಾಲಿಯಾಗಿವೆ, ಅನಾವಶ್ಯಕ ಕಾಮಗಾರಿಗಳ ಬದಲು ಅಗತ್ಯ ಯೋಜನೆಗಳನ್ನು ಕೈಗೊಳ್ಳಬೇಕು. ಮಳೆಗಾಲ ನೆಪವಿಟ್ಟು ರಸ್ತೆ ನಿರ್ಮಾಣ ವಿಳಂಬ ಮಾಡಬಾರದು” ಎಂದು ಎಚ್ಚರಿಕೆ ನೀಡಿದರು.
ಅಧಿಕಾರಿಗಳು ಪ್ರತಿಯೊಂದು ಎಪಿಎಂಸಿಯ ಸ್ಥಿತಿ, ಅನುಮೋದಿತ ಯೋಜನೆಗಳು, ಟೆಂಡರ್‌ಗಳು ಹಾಗೂ ವಿಳಂಬದ ಕಾರಣಗಳ ಬಗ್ಗೆ ವಿವರವಾದ ವರದಿ ಸಲ್ಲಿಸಬೇಕು ಎಂದು ನಿರ್ದೇಶನ ನೀಡಿದ ಅವರು, “ಎಪಿಎಂಸಿ ಆಸ್ತಿಯ ರಕ್ಷಣೆ ಅಧಿಕಾರಿಗಳ ಜವಾಬ್ದಾರಿ” ಎಂದು ಸ್ಪಷ್ಟಪಡಿಸಿದರು.
ಸಭೆಯಲ್ಲಿ ಹೆಚ್ಚುವರಿ ನಿರ್ದೇಶಕಿ ಪುಷ್ಪಾ, ಜಂಟಿ ನಿರ್ದೇಶಕ ಶ್ರೀನಿವಾಸ ರೆಡ್ಡಿ, ಅಧೀಕ್ಷಕ ಅಭಿಯಂತರ ರಘುನಂದನ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa