ಧರ್ಮಸ್ಥಳದಲ್ಲಿ ಶವ ಹೂತಿರುವ ಪ್ರಕರಣ : ಅನಾಮಿಕ ದೂರುದಾರನನ್ನು ಬಂಧಿಸಿದ ಎಸ್ಐಟಿ
ಮಂಗಳೂರು, 23 ಆಗಸ್ಟ್ (ಹಿ.ಸ.) : ಆ್ಯಂಕರ್ : ಕರ್ನಾಟಕದ ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವಗಳನ್ನು ಹೂತಿಟ್ಟಿರುವುದಾಗಿ ಸುಳ್ಳು ವದಂತಿ ಹರಡಿಸಿ ಜನರಲ್ಲಿ ಆತಂಕ ಸೃಷ್ಟಿಸಿದ್ದ ಮುಸುಕುಧಾರಿ ಚಿನ್ನಯ್ಯನನ್ನು ವಿಶೇಷ ತನಿಖಾ ತಂಡ ಬಂಧಿಸಿದೆ. ಆರಂಭದಲ್ಲಿ ಅನಾಮಿಕ ದೂರುದಾರನ ಸೂಚ
Mask man


ಮಂಗಳೂರು, 23 ಆಗಸ್ಟ್ (ಹಿ.ಸ.) :

ಆ್ಯಂಕರ್ : ಕರ್ನಾಟಕದ ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವಗಳನ್ನು ಹೂತಿಟ್ಟಿರುವುದಾಗಿ ಸುಳ್ಳು ವದಂತಿ ಹರಡಿಸಿ ಜನರಲ್ಲಿ ಆತಂಕ ಸೃಷ್ಟಿಸಿದ್ದ ಮುಸುಕುಧಾರಿ ಚಿನ್ನಯ್ಯನನ್ನು ವಿಶೇಷ ತನಿಖಾ ತಂಡ ಬಂಧಿಸಿದೆ.

ಆರಂಭದಲ್ಲಿ ಅನಾಮಿಕ ದೂರುದಾರನ ಸೂಚನೆಯ ಮೇರೆಗೆ ಅಧಿಕಾರಿಗಳು ಸಮಾಧಿ ಪ್ರದೇಶಗಳಲ್ಲಿ ಶೋಧಕಾರ್ಯ ಕೈಗೊಂಡಿದ್ದರು. ಆದರೆ ಅವನು ತೋರಿಸಿದ 17 ಸ್ಥಳಗಳಲ್ಲಿ ಯಾವುದೇ ಸುಳಿವು ದೊರಕದೆ ಹೋದ ಹಿನ್ನೆಲೆಯಲ್ಲಿ, ಎಸ್‌ಐಟಿ ಶೋಧವನ್ನು ನಿಲ್ಲಿಸಿ ದೂರುದಾರನನ್ನು ವಿಚಾರಣೆ ನಡೆಸಿತ್ತು.

ಎಸ್ಐಟಿ ತನಿಖಾ ಅಧಿಕಾರಿ ಜಿತೇಂದ್ರ ದಯಾಮ ನೇತೃತ್ವದಲ್ಲಿ ಸುಮಾರು 25 ಮಂದಿ ಪೊಲೀಸ್ ಸಿಬ್ಬಂದಿ ಚಿನ್ನಯ್ಯನನ್ನು ತೀವ್ರವಾಗಿ ವಿಚಾರಣೆಗೊಳಪಡಿಸಿದರು. ಅನೇಕ ಪ್ರಶ್ನೆಗಳನ್ನು ಕೇಳಿ , ವೀಡಿಯೋ ಸಾಕ್ಷ್ಯಾಧಾರಗಳನ್ನು ಪ್ರದರ್ಶಿಸಿ ಕೇಳಿದ ಹಲವು ನಿಖರ ಪ್ರಶ್ನೆಗಳಿಗೆ ಆತನಿಂದ ಸಮರ್ಪಕ ಉತ್ತರ ಬಂದಿರಲಿಲ್ಲ.

ಕಳೆದ ರಾತ್ರಿಯಿಂದ ಇಂದು ಬೆಳಗಿನ ಜಾವದವರೆಗೆ ಖುದ್ದು ಎಸ್ಐಟಿ ಮುಖ್ಯಸ್ಥ ಪ್ರಣಬ್ ಮೊಹಾಂತಿ ಚಿನ್ನಯ್ಯನನ್ನು ವಿಚಾರಣೆ ನಡೆಸಿ ಆತನಿಂದ ಸಮರ್ಪಕವಾಗಿ ಉತ್ತರ ಭಾರದ ಹಿನ್ನೆಲೆಯಲ್ಲಿ ಬಂಧಿಸಿದ್ದಾರೆ.

ವಿಚಾರಣೆ ವೇಳೆ ಅನಾಮಿಕನ ವದಂತಿ ಕೇವಲ ಸುಳ್ಳಿನ ಸರಮಾಲೆಯಾಗಿದ್ದು, ಸಮಾಜದಲ್ಲಿ ಭೀತಿಯ ವಾತಾವರಣ ಸೃಷ್ಟಿಸುವ ಉದ್ದೇಶ ಹೊಂದಿತ್ತು ಎಂಬುದು ಬಹಿರಂಗವಾಗಿದೆ.

ಎಸ್‌ಐಟಿ ಚಿನ್ನಯ್ಯನನ್ನು ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ತಮ್ಮ ವಶಕ್ಕೆ ಪಡೆದು ಮುಂದಿನ ದಿನಗಳಲ್ಲಿ ಹೆಚ್ಚಿನ ವಿಚಾರಣೆ ನಡೆಸುವ ಸಾಧ್ಯತೆ ಇದೆ.

---------------

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande