ಬೆಂಗಳೂರು, 23 ಆಗಸ್ಟ್ (ಹಿ.ಸ.) :
ಆ್ಯಂಕರ್ : ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ವಿದ್ಯಾರ್ಥಿಗಳಿಗೆ ಮೆಟ್ರಿಕ್ ಪೂರ್ವ ಹಾಗೂ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ, ಪ್ರೋತ್ಸಾಹಧನ ನೀಡುವ ನಿಟ್ಟಿನಲ್ಲಿ ಆಧಾರ್ ಜೋಡಣೆ ಬಾಕಿ ಇರುವ ಬ್ಯಾಂಕ್ ಖಾತೆಗಳಿಗೆ ಆಗಸ್ಟ್ 25ರಿಂದ ಸೆಪ್ಟೆಂಬರ್ 7ರವರೆಗೆ ವಿಶೇಷ ಆಧಾರ್ ಸೀಡಿಂಗ್ ಅಭಿಯಾನವನ್ನು ಬೆಂಗಳೂರು ಜಿಲ್ಲೆ ಹಾಗೂ ತಾಲ್ಲೂಕು ಮಟ್ಟದಲ್ಲಿ ಹಮ್ಮಿಕೊಳ್ಳಲಾಗಿದೆ.
ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಈ ಅವಕಾಶವನ್ನು ಬಳಸಿಕೊಳ್ಳಲು ಸಮಾಜ ಕಲ್ಯಾಣ ಇಲಾಖೆ ಕೋರಿದೆ. ಹೆಚ್ಚಿನ ಮಾಹಿತಿಗೆ ಬೆಂಗಳೂರು ನಗರ ಜಿಲ್ಲೆಯ ಸಮಾಜ ಕಲ್ಯಾಣ ಇಲಾಖೆಯ ಕಚೇರಿಗಳಲ್ಲಿ ಸಂಪರ್ಕಿಸಬಹುದು ಎಂದು ಜಂಟಿ ನಿರ್ದೇಶಕರು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa