ಪಾಟ್ನಾ, 23 ಆಗಸ್ಟ್ (ಹಿ.ಸ.) :
ಆ್ಯಂಕರ್ : ಬಿಹಾರದ ಪಾಟ್ನಾ ಜಿಲ್ಲೆಯ ಶಹಜಹಾನ್‌ಪುರ ಪೊಲೀಸ್ ಠಾಣೆ ವ್ಯಾಪ್ತಿಯ ಅಲ್ಟ್ರಾಟೆಕ್ ಸಿಮೆಂಟ್ ಕಾರ್ಖಾನೆ ಬಳಿ ಶನಿವಾರ ಬೆಳಿಗ್ಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 8 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದು, 5 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ಮೃತರಲ್ಲಿ ಹೆಚ್ಚಿನವರು ಮಹಿಳೆಯರಾಗಿದ್ದು, ನಳಂದ ಜಿಲ್ಲೆಯ ಹಿಲ್ಸಾ ತಾಲ್ಲೂಕಿನ ಮಾಲಾವಾ ಗ್ರಾಮದ ನಿವಾಸಿಗಳು.
ಗಂಗಾ ಸ್ನಾನ ಮುಗಿಸಿಕೊಂಡು ಮನೆಗೆ ಹಿಂತಿರುಗುತ್ತಿದ್ದ ವೇಳೆ ಟ್ರಕ್ ಮತ್ತು ಆಟೋ ನಡುವೆ ಡಿಕ್ಕಿ ಸಂಭವಿಸಿದೆ. ಅಪಘಾತದ ತೀವ್ರತೆಯಿಂದ ಆಟೋ ಛಿದ್ರಗೊಂಡು ದೇಹಗಳು ರಸ್ತೆಯಲ್ಲಿ ಚದುರಿಹೋಗಿದ್ದವು.
ಗಾಯಾಳುಗಳನ್ನು ತಕ್ಷಣ ಪಾಟ್ನಾ ಆಸ್ಪತ್ರೆಗೆ ಕಳುಹಿಸಲಾಗಿದೆ. ಸ್ಥಳೀಯರ ಪ್ರಕಾರ, ಅತಿವೇಗದ ಟ್ರಕ್ ಚಾಲಕನ ನಿಯಂತ್ರಣ ತಪ್ಪಿ ಆಟೋಗೆ ಡಿಕ್ಕಿ ಹೊಡೆದಿದೆ . ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa