ಪ.ಜಾತಿ ಮತ್ತು ಪ.ಪಂಗಡದ ಫಲಾನುಭವಿಗಳಿಂದ ಅರ್ಜಿ ಆಹ್ವಾನ
ದಾವಣಗೆರೆ, 24 ಆಗಸ್ಟ್ (ಹಿ.ಸ.) : ಆ್ಯಂಕರ್ : ದಾವಣಗೆರೆ ಜಿಲ್ಲೆಯಲ್ಲಿ ಪ್ರಸಕ್ತ ಸಾಲಿನ ಮೀನುಗಾರಿಕೆ ಇಲಾಖೆ ವತಿಯಿಂದ ರಾಜ್ಯವಲಯ ವಿಶೇಷ ಘಟಕ ಯೋಜನೆ ಮತ್ತು ಗಿರಿಜನ ಉಪಯೋಜನೆಗಳ ಯೋಜನೆಗಳಿಗೆ ನೆರವು ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಮೀನುಗಾರರಿಗೆ ನಾಲ್ಕು ಚಕ್ರ ವಾಹನ ಖರೀದಿಸಲು ಶೇ.50ರಷ್ಟು ಅ
ಪ.ಜಾತಿ ಮತ್ತು ಪ.ಪಂಗಡದ ಫಲಾನುಭವಿಗಳಿಂದ ಅರ್ಜಿ ಆಹ್ವಾನ


ದಾವಣಗೆರೆ, 24 ಆಗಸ್ಟ್ (ಹಿ.ಸ.) :

ಆ್ಯಂಕರ್ : ದಾವಣಗೆರೆ ಜಿಲ್ಲೆಯಲ್ಲಿ ಪ್ರಸಕ್ತ ಸಾಲಿನ ಮೀನುಗಾರಿಕೆ ಇಲಾಖೆ ವತಿಯಿಂದ ರಾಜ್ಯವಲಯ ವಿಶೇಷ ಘಟಕ ಯೋಜನೆ ಮತ್ತು ಗಿರಿಜನ ಉಪಯೋಜನೆಗಳ ಯೋಜನೆಗಳಿಗೆ ನೆರವು ನೀಡಲು ಅರ್ಜಿ ಆಹ್ವಾನಿಸಲಾಗಿದೆ.

ಮೀನುಗಾರರಿಗೆ ನಾಲ್ಕು ಚಕ್ರ ವಾಹನ ಖರೀದಿಸಲು ಶೇ.50ರಷ್ಟು ಅಥವಾ ಗರಿಷ್ಠ ರೂ.3 ಲಕ್ಷ ಆರ್ಥಿಕ ನೆರವು ನೀಡಲಾಗುವುದು. ಜಿಲ್ಲೆಗೆ ಪ.ಜಾತಿ-2 ಮತ್ತು ಪ.ಪಂಗಡ-1 ಗುರಿ ನಿಗದಿಪಡಿಸಲಾಗಿದೆ. ಅರ್ಜಿಯನ್ನು ಸೆಪ್ಟೆಂಬರ್ 10 ರೊಳಗಾಗಿ ಆಯಾ ತಾಲ್ಲೂಕಿನ ಮೀನುಗಾರಿಕೆ ಸಹಾಯಕ ನಿರ್ದೇಶಕರ ಕಚೇರಿಗೆ ಸಲ್ಲಸಬೇಕೆಂದು ಮೀನುಗಾರಿಕೆ ಉಪನಿರ್ದೇಶಕರು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande