ಬೆಂಗಳೂರು, 24 ಆಗಸ್ಟ್ (ಹಿ.ಸ.) :
ಆ್ಯಂಕರ್ : ಗಣೇಶ ಮೂರ್ತಿ ವಿಸರ್ಜನೆಗೆ ಬೆಂಗಳೂರಿನಲ್ಲಿ ಬಿಬಿಎಂಪಿ ಸಕಲ ತಯಾರಿ ಮಾಡಿಕೊಂಡಿದೆ. 41 ಕೆರೆ ಅಂಗಳದಲ್ಲಿ ತಾತ್ಕಾಲಿಕ ಕಲ್ಯಾಣಿಗಳು ಹಾಗೂ 489 ಸಂಚಾರಿ ಟ್ಯಾಂಕ್‌ಗಳು ಸಜ್ಜುಗೊಂಡಿದೆ.
ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಅನುಮತಿ ಪಡೆಯಲು 75 ಏಕಗವಾಕ್ಷಿ ಕೇಂದ್ರಗಳನ್ನು ತೆರೆಯಲಾಗಿದೆ. ಮೇಲ್ವಿಚಾರಣೆಗೆ ಹಾಗೂ ಹೆಚ್ಚಿನ ಮಾಹಿತಿಗಾಗಿ ನೋಡಲ್ ಅಧಿಕಾರಿಗಳ ನಿಯೋಜನೆ ಮಾಡಲಾಗಿದೆ. ಈ ಬಗ್ಗೆ ಸಂಪೂರ್ಣ ಮಾಹಿತಿಗಾಗಿ https://apps.bbmpgov.in/ganesh2025/ ವೆಬ್‌ಸೈಟ್ ವೀಕ್ಷಿಸಬಹುದು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa