ಬೆಂಗಳೂರಿನಲ್ಲಿ ಬಿ.ಎಲ್.ಡಿ. ಸೌಹಾರ್ದ ಸಹಕಾರಿ ಸಂಘದ ಶಾಖೆ ಪ್ರಾರಂಭ
ಬೆಂಗಳೂರು, 24 ಆಗಸ್ಟ್ (ಹಿ.ಸ.) : ಆ್ಯಂಕರ್ : ಬೆಂಗಳೂರಿನಲ್ಲಿ ವಿಜಯಪುರ ಮೂಲದ ಬಿ.ಎಲ್.ಡಿ. ಸೌಹಾರ್ದ ಸಹಕಾರಿ ಸಂಘದ 11ನೇ ಶಾಖೆ ಭಾನುವಾರ ಉದ್ಘಾಟನೆಗೊಂಡಿತು. ಸಿದ್ದಗಂಗಾ ಮಠದ ಪೀಠಾಧ್ಯರಾದ ಸಿದ್ದಲಿಂಗ ಮಹಾಸ್ವಾಮಿಗಳ ಸಾನಿಧ್ಯದಲ್ಲಿ, ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ ಶಾಖೆಯನ್ನು ಉದ್
Inauguration


ಬೆಂಗಳೂರು, 24 ಆಗಸ್ಟ್ (ಹಿ.ಸ.) :

ಆ್ಯಂಕರ್ : ಬೆಂಗಳೂರಿನಲ್ಲಿ ವಿಜಯಪುರ ಮೂಲದ ಬಿ.ಎಲ್.ಡಿ. ಸೌಹಾರ್ದ ಸಹಕಾರಿ ಸಂಘದ 11ನೇ ಶಾಖೆ ಭಾನುವಾರ ಉದ್ಘಾಟನೆಗೊಂಡಿತು. ಸಿದ್ದಗಂಗಾ ಮಠದ ಪೀಠಾಧ್ಯರಾದ ಸಿದ್ದಲಿಂಗ ಮಹಾಸ್ವಾಮಿಗಳ ಸಾನಿಧ್ಯದಲ್ಲಿ, ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ ಶಾಖೆಯನ್ನು ಉದ್ಘಾಟಿಸಿದರು.

2022ರಲ್ಲಿ ವಿಜಯಪುರದಲ್ಲಿ ಸಿದ್ದೇಶ್ವರ ಮಹಾಸ್ವಾಮಿಗಳ ಆಶೀರ್ವಾದದಿಂದ ಆರಂಭಗೊಂಡ ಬಿ.ಎಲ್.ಡಿ. ಸೌಹಾರ್ದ ಸಂಘವು ಈಗಾಗಲೇ ಉತ್ತರ ಕರ್ನಾಟಕದಲ್ಲಿ 10 ಶಾಖೆಗಳನ್ನು ಯಶಸ್ವಿಯಾಗಿ ನಡೆಸಿ ಜನಪ್ರಿಯತೆ ಗಳಿಸಿದೆ. ಇದೀಗ ಬೆಂಗಳೂರಿನಲ್ಲಿ ಆರಂಭವಾದ ಶಾಖೆ ಸಂಘದ ಗುರುತರ ಹೆಜ್ಜೆಯಾಗಿದೆ ಎಂದು ಸಚಿವ ಎಂ.ಬಿ.ಹೇಳಿದರು.

ಈ ವೇಳೆ ಮಾತನಾಡಿದ ಸಚಿವ ರಾಮಲಿಂಗಾ ರೆಡ್ಡಿ, ಸಂಸ್ಥೆಯ ಯಶಸ್ಸನ್ನು ಹಾರೈಸಿ ಬಿ.ಎಲ್.ಡಿ. ಸೌಹಾರ್ದ ಸಂಘವು ಮುಂದಿನ ದಿನಗಳಲ್ಲಿ ರಾಜ್ಯಾದ್ಯಂತ ಇನ್ನಷ್ಟು ಶಾಖೆಗಳನ್ನು ಆರಂಭಿಸಿ ಸಹಕಾರಿ ಕ್ಷೇತ್ರದಲ್ಲಿ ನೂತನ ಮಾದರಿಯಾಗಲಿ ಎಂದು ಆಶಿಸಿದರು.

ಈ ಸಂದರ್ಭದಲ್ಲಿ ಬೆಂಗಳೂರಿನಲ್ಲಿ ನೆಲೆಸಿರುವ ವಿಜಯಪುರ ಮೂಲದ ಐದು ಸಾಧಕರನ್ನು ನಾನಾ ಕ್ಷೇತ್ರಗಳಲ್ಲಿ ಅವರ ಕೊಡುಗೆಗಾಗಿ ಸನ್ಮಾನಿಸಲಾಯಿತು

ಸಂಸ್ಥೆಯ ಅಧ್ಯಕ್ಷರು ಹಾಗೂ ವಿಧಾನ ಪರಿಷತ್ ಸದಸ್ಯರಾದ ಸುನೀಲಗೌಡ ಪಾಟೀಲ, ಉಪಾಧ್ಯಕ್ಷ ಶರಣು ಗೊಡ್ಡೊಡಗಿ, ಮತ್ತು ಅನೇಕ ಗಣ್ಯರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande