ದಾವಣಗೆರೆ, 24 ಆಗಸ್ಟ್ (ಹಿ.ಸ.) :
ಆ್ಯಂಕರ್ : ದಾವಣಗೆರೆ ಜಿಲ್ಲೆಯ ಹೊನ್ನಾಳಿ ಉಪವಿಭಾಗ ಮಟ್ಟದ ಮ್ಯಾನ್ಯುಯಲ್ ಸ್ಕ್ಯಾವೆಂಜಿಂಗ್ ಜಾಗೃತಿ ಮತ್ತು ಉಸ್ತುವಾರಿ ಸಮಿತಿಗೆ ಸಾಮಾಜಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು ಸಾಮಾಜಿಕ ಸೇವೆಯನ್ನು ಸಲ್ಲಿಸುತ್ತಿರುವ ಇಬ್ಬರು ಪರಿಶಿಷ್ಟ ಜಾತಿಯ ಸದಸ್ಯರನ್ನು ನಾಮನಿರ್ದೇಶನ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತರು ಸೆಪ್ಟೆಂಬರ್ 8 ಒಳಗಾಗಿ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಹಿತಿಗಾಗಿ ಸಹಾಯಕ ನಿರ್ದೇಶಕರು ಸಮಾಜ ಕಲ್ಯಾಣ ಇಲಾಖೆ ಹೊನ್ನಾಳಿ ಇವರನ್ನು ಸಂಪರ್ಕಿಸಲು ಇಲಾಖೆಯ ಅಧಿಕಾರಿ ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa