ಚಶೋತಿ ಮೇಘಸ್ಫೋಟ : ಗಾಯಾಳುಗಳನ್ನು ಭೇಟಿಯಾದ ರಾಜನಾಥ್‌ ಸಿಂಗ್
ಜಮ್ಮು, 24 ಆಗಸ್ಟ್ (ಹಿ.ಸ.) : ಆ್ಯಂಕರ್ : ಆಗಸ್ಟ್‌ 14ರಂದು ಜಮ್ಮುವಿನ ಕಿಶ್ತ್ವಾರ್ ಜಿಲ್ಲೆಯ ಚಶೋತಿ ಗ್ರಾಮದಲ್ಲಿ ಸಂಭವಿಸಿದ ಮೇಘಸ್ಫೋಟದಿಂದಾಗಿ 64 ಮಂದಿ ಮೃತಪಟ್ಟಿದ್ದು, 34 ಕ್ಕೂ ಹೆಚ್ಚು ಮಂದಿ ಕಾಣೆಯಾಗಿದ್ದಾರೆ. ಈ ಹಿನ್ನೆಲೆ ಪರಿಸ್ಥಿತಿ ಪರಿಶೀಲನೆಗಾಗಿ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಭಾನುವಾ
Rajnath singh


ಜಮ್ಮು, 24 ಆಗಸ್ಟ್ (ಹಿ.ಸ.) :

ಆ್ಯಂಕರ್ : ಆಗಸ್ಟ್‌ 14ರಂದು ಜಮ್ಮುವಿನ ಕಿಶ್ತ್ವಾರ್ ಜಿಲ್ಲೆಯ ಚಶೋತಿ ಗ್ರಾಮದಲ್ಲಿ ಸಂಭವಿಸಿದ ಮೇಘಸ್ಫೋಟದಿಂದಾಗಿ 64 ಮಂದಿ ಮೃತಪಟ್ಟಿದ್ದು, 34 ಕ್ಕೂ ಹೆಚ್ಚು ಮಂದಿ ಕಾಣೆಯಾಗಿದ್ದಾರೆ. ಈ ಹಿನ್ನೆಲೆ ಪರಿಸ್ಥಿತಿ ಪರಿಶೀಲನೆಗಾಗಿ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಭಾನುವಾರ ಜಮ್ಮುವಿಗೆ ಆಗಮಿಸಿದರು. ಆದರೆ ಕೆಟ್ಟ ಹವಾಮಾನ ಕಾರಣದಿಂದ ಅವರು ನೇರವಾಗಿ ಪೀಡಿತ ಗ್ರಾಮಕ್ಕೆ ತೆರಳಲು ಸಾಧ್ಯವಾಗಲಿಲ್ಲ.

ರಾಜನಾಥ್‌ ಸಿಂಗ್‌ ಅವರು ಜಮ್ಮುವಿನ ಸರ್ಕಾರಿ ವೈದ್ಯಕೀಯ ಕಾಲೇಜು (ಜಿಎಂಸಿ)ಗೆ ಭೇಟಿ ನೀಡಿ, ಮೇಘಸ್ಫೋಟದಲ್ಲಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುವವರನ್ನು ಭೇಟಿಯಾಗಿ ಅವರ ಆರೋಗ್ಯ ಸ್ಥಿತಿ ವಿಚಾರಿಸಿದರು.

ವೈದ್ಯರು ನೀಡುತ್ತಿರುವ ಚಿಕಿತ್ಸೆಯನ್ನು ಮೆಚ್ಚಿ, ಆಸ್ಪತ್ರೆಯಲ್ಲಿರುವ ಎಲ್ಲ ರೋಗಿಗಳು ಅಪಾಯದಿಂದ ಪಾರಾಗಿದ್ದಾರೆ ಹಾಗೂ ಅವರ ಆರೋಗ್ಯದಲ್ಲಿ ಸುಧಾರಣೆ ಕಂಡು ಬರುತ್ತಿದೆ ಎಂದು ತಿಳಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಚಶೋತಿ ಘಟನೆಯ ಗಾಯಾಳುಗಳನ್ನು ಭೇಟಿ ಮಾಡಲು ಬಂದಿದ್ದೇನೆ. ಪ್ರಧಾನಿ ನರೇಂದ್ರ ಮೋದಿ ಸ್ವತಃ ಪರಿಸ್ಥಿತಿಯ ನಿಗಾ ಇಡುತ್ತಿದ್ದಾರೆ. ಹವಾಮಾನ ಅಡಚಣೆ ಕಾರಣದಿಂದ ಪೀಡಿತ ಸ್ಥಳಕ್ಕೆ ತಲುಪಲು ಸಾಧ್ಯವಾಗಲಿಲ್ಲ” ಎಂದು ಹೇಳಿದರು.

ಈ ಸಂದರ್ಭದಲ್ಲಿ ಕೇಂದ್ರ ಸಚಿವ ಡಾ. ಜಿತೇಂದ್ರ ಸಿಂಗ್‌ ಹಾಗೂ ಜಮ್ಮು-ಕಾಶ್ಮೀರ ಲೆಫ್ಟಿನೆಂಟ್‌ ಗವರ್ನರ್‌ ಮನೋಜ್‌ ಸಿನ್ಹಾ ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande