ಕೋಲಾರ, ೨೪ ಆಗಸ್ಟ್ (ಹಿ.ಸ) :
ಆ್ಯಂಕರ್ : ವೇಮಗಲ್ ಕುರುಗಲ್ ಪಟ್ಟಣ ಪಂಚಾಯತಿ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ನಿರಾಸೆ ಪಡಬೇಕಾಗಿಲ್ಲ ಕಳೆದ ವಿಧಾನಸಭೆ ಮತ್ತು ಲೋಕಸಭಾ ಚುನಾವಣೆಗಿಂತಲೂ ಹೆಚ್ಚಿನ ಮತಗಳನ್ನು ಪಡೆದಿದ್ದೇವೆ ಯಾರನ್ನು ಹೊಣೆಗಾರಿಕೆ ಮಾಡುವುದು ಬೇಡ ಎದುರಾದ ಸೋಲು ಮುಂದಿನ ಗೆಲುವಿಗೆ ಮುನ್ನುಡಿಯಾಗಬೇಕು ಯಾವುದೇ ಕಾರಣಕ್ಕೂ ಪರಾಜಿತ ಅಭ್ಯರ್ಥಿಗಳನ್ನು ಬಿಟ್ಟುಕೊಡುವುದಿಲ್ಲ ವಾರ್ಡ್ ಗಳಲ್ಲಿ ನಿಮಗೆ ಜವಾಬ್ದಾರಿ ವಹಿಸುತ್ತೇವೆ ಒಟ್ಟಿಗೆ ಸೇರಿ ಅಭಿವೃದ್ಧಿ ಮಾಡೋಣ ಎಂದು ಶಾಸಕ ಕೊತ್ತೂರು ಮಂಜುನಾಥ್ ತಿಳಿಸಿದರು.
ಕೋಲಾರ ತಾಲೂಕಿನ ವೇಮಗಲ್ ಗ್ರಾಮದ ಮಾಜಿ ಸಭಾಪತಿ ವಿ.ಆರ್ ಸುದರ್ಶನ್ ಅವರ ಮನೆಯಲ್ಲಿ ಭಾನುವಾರ ಪಟ್ಟಣ ಪಂಚಾಯತಿ ಚುನಾವಣೆಗೆ ಸಂಬ0ಧಿಸಿದ0ತೆ ನಡೆದ ಆತ್ಮಾವಲೋಕನ ಸಭೆಯಲ್ಲಿ ಮಾತನಾಡಿದ ಅವರು ಚುನಾವಣೆಯ ಪೂರ್ವದಲ್ಲಿ ಹೇಳಿದ ಅಷ್ಟು ಅಭಿವೃದ್ಧಿ ಕೆಲಸಗಳನ್ನೂ ಮಾಡತ್ತೇವೆ ಕಾಂಗ್ರೆಸ್ ಸೋತಿದೆ ಅಭಿವೃದ್ಧಿ ಮಾಡಲ್ಲ ಎಂದು ಕಾಂಗ್ರೆಸ್ ವಿರೋಧಿಗಳು ಅಪಪ್ರಚಾರ ಮಾಡಿದ್ದಾರೆ ಅದಕ್ಕೆ ಯಾರು ಕಿವಿ ಕೊಡಬೇಡಿ ನಾವು ನಿಮ್ಮದೊಂದಿಗೆ ಇದ್ದೇವೆ ಸೋತವರಿಗೂ ಹಾಗೂ ಪಕ್ಷಕ್ಕಾಗಿ ಪ್ರಮಾಣಿಕವಾಗಿ ದುಡಿದವರಿಗೆ ಬೇರೆ ಬೇರೆ ಅವಕಾಶಗಳನ್ನು ನೀಡಲಾಗುತ್ತದೆ ಯಾರು ಧೃತಿಗೆಡುವ ಅವಶ್ಯಕತೆ ಇಲ್ಲ ಎಂದರು.
ಜೀವನದಲ್ಲಿ ಸೋಲು ಗೆಲುವು ಎಲ್ಲವೂ ಸಾಮಾನ್ಯ. ಸೋಲೇ ಗೆಲುವಿನ ಮೆಟ್ಟಿಲು ಎನ್ನುತ್ತಾ, ನನ್ನನ್ನು ಗೆಲುವಿನ ಅಂಚಿಗೆ ತಂದು ನಿಲ್ಲಿಸಿರುವ ಜನತೆಗೆ ಹೃದಯಪೂರ್ವಕ ಧನ್ಯವಾದಗಳು ಅವರು ನೀಡಿರುವ ಧೈರ್ಯ, ಬೆಂಬಲ ಮುಂದಿನ ಗೆಲುವಿಗೆ ಮುನ್ನುಡಿಯಾಗಲಿದೆ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಮುಖಂಡರು ಯಾವುದೇ ಕಾರಣಕ್ಕೂ ಕುಗ್ಗದೆ ಇಂದಿನ ಸೋಲನ್ನು ಸವಾಲಾಗಿ ಸ್ವೀಕರಿಸಿ ಮುಂಬರುವ ಚುನಾವಣೆಗೆ ಪಕ್ಷವನ್ನು ಸಂಘಟಿಸೋಣ ಜೊತೆಗೆ ಎರಡು ತಿಂಗಳಿಗೊಮ್ಮೆ ನಿಮ್ಮ ವಾರ್ಡ್ ಗಳಲ್ಲಿಯೇ ಮುಖಂಡರು ಕಾರ್ಯಕರ್ತರ ಸಭೆ ಮಾಡಿ ಪಕ್ಷವನ್ನು ಕಟ್ಟಿ ಅಭಿವೃದ್ಧಿಗಾಗಿ ಕೆಲಸ ಮಾಡೋಣ ಎಂದರು
ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಎಂ.ಎಲ್ ಅನಿಲ್ ಕುಮಾರ್ ಮಾತನಾಡಿ ಚುನಾವಣೆಯಲ್ಲಿ ಎಲ್ಲಾ ಸಮುದಾಯಗಳನ್ನು ವಿಶ್ವಾಸಕ್ಕೆ ಪಡೆಯಲಾಗಿತ್ತು ಜೊತೆಗೆ ಸರ್ಕಾರದ ಅಭಿವೃದ್ಧಿ ಕಾರ್ಯಕ್ಮಗಳು ಕೈ ಹಿಡಿಯಲಿವೆ ಎಂದು ಭಾವಿಸಲಾಗಿತ್ತು ಆದರೂ ಸೋಲು ಆಗಿದೆ ಇವತ್ತು ಬಿಜೆಪಿ ಮತ್ತು ಜೆಡಿಎಸ್ ಎರಡು ಪಕ್ಷಗಳು ಒಟ್ಟಾಗಿ ಕಾಂಗ್ರೆಸ್ ಏಕಾಂಗಿಯಾಗಿ ಎದುರಿಸಿದ್ದರಿಂದ ಸೋಲಾಗಿದೆ ಸೋಲಿಗೆ ನಾನಾಕಾರಣಗಳು ಇವೆ ಸೋತವರಿಗೆ ಹೆಚ್ಚಿನ ಜವಾಬ್ದಾರಿ ಇದೆ ಕಾಂಗ್ರೆಸ್ ಸರ್ಕಾರ ನಿಮ್ಮ ಜೊತೆಗೆ ಇದೆ ಈ ಚುನಾವಣೆಯಲ್ಲಿ ನಮ್ಮ ಜೊತೆ ಹಗಲಿರುಳೆನ್ನದೆ ಶ್ರಮಿಸಿದವರಿಗೆ ಧನ್ಯವಾದ ಅರ್ಪಿಸಿ ಜೊತೆಯಲ್ಲಿ ಕರೆದುಕೊಂಡು ಅಭಿವೃದ್ಧಿಗೆ ಕೈ ಜೋಡಿಸೋಣ ಎಂದರು
ಮಾಜಿ ಸಭಾಪತಿ ವಿ.ಆರ್ ಸುದರ್ಶನ್ ಮಾತನಾಡಿ ಜನರ ಸೇವೆ ಮಾಡಲು ಅಧಿಕಾರವೊಂದೇ ಮಾನದಂಡವಲ್ಲ ಕಾಂಗ್ರೆಸ್ ಚುನಾವಣೆಯ ಫಲಿತಾಂಶದಲ್ಲಿ ಸೋತಿರಬಹುದು ಆದರೆ ಈ ಸೋಲಿಗೆ ನಮ್ಮಲ್ಲಿನ ಆತ್ಮಸ್ಥೈರ್ಯವನ್ನು ಹೆಚ್ಚಿಸಿದೆ ಸೋಲಿಗೆ ಏನು ಕಾರಣವಾಯಿತು ಏನು ಮಾಡಬೇಕಾಗಿತ್ತು ಎಲ್ಲಿ ಎಡವಿದ್ದೇವೆ ಮುಂದೆ ಯಾವ ವಿಚಾರಗಳನ್ನು ಸರಿಪಡಿಸಿಕೊಳ್ಳಬೇಕು ಮುಂದೆ ಪ್ರತಿ ವಾರ್ಡ್ ನಲ್ಲಿ ಏಳೆಂಟು ಜನರ ಸಮಿತಿ ಮಾಡಿ ಅಭಿವೃದ್ಧಿ ಮತ್ತು ಪಕ್ಷ ಸಂಘಟನೆಗೆ ನಿರಂತರವಾಗಿ ಸಭೆ ಮಾಡೋಣ ಎಂದರು
ಸಭೆಯಲ್ಲಿ ಜಿಪಂ ಮಾಜಿ ಸದಸ್ಯ ನಾಗನಾಳ ಸೋಮಣ್ಣ, ಬ್ಲಾಕ್ ಅಧ್ಯಕ್ಷ ಉದಯಶಂಕರ್, ಕೋಮುಲ್ ನಿರ್ದೇಶಕ ಚಂಜಿಮಲೆ ರಮೇಶ್, ಗ್ಯಾರಂಟಿ ಸಮಿತಿ ಅಧ್ಯಕ್ಷ ವೈ ಶಿವಕುಮಾರ್ ಸಿಂಡಿಕೇಟ್ ಸದಸ್ಯ ಸೀಸಂದ್ರ ಗೋಪಾಲಗೌಡ, ಮುಖಂಡರಾದ ಖಾದ್ರಿಪುರ ಬಾಬು, ಕುರಬರಹಳ್ಳಿ ಕುಮಾರ್, ಮಡಿವಾಳ ಮುನಿರಾಜು, ಮೈಲಾಂಡಹಳ್ಳಿ ಮುರಳಿ, ಪೆರ್ಜೇನಹಳ್ಳಿ ನಾಗೇಶ್, ಪಟ್ಟಣ ಪಂಚಾಯತಿಗೆ ನೂತನವಾಗಿ ಆಯ್ಕೆಯಾದ ಕಾಂಗ್ರೆಸ್ ಸದಸ್ಯರಾದ ಅಂಜಲಿ ಪ್ರಕಾಶ್, ಗಂಗಪ್ಪ, ಮಡಿವಾಳ ಮಂಜುಳಾ ತಾಸುಫ್ ಖಾನ್, ದೀಪ, ಶಶಿಕಲಾ, ಸೇರಿದಂತೆ ಪರಾಜಿತ ಅಭ್ಯರ್ಥಿಗಳು ಭಾಗವಹಿಸಿದ್ದರು.
ಚಿತ್ರ : ಕೋಲಾರ ತಾಲ್ಲೂಕಿನ ವೇಮಗಲ್ ಕುರಗಲ್ ಪಟ್ಟಣ ಪಂಚಾಯಿತಿ ಚುನಾವಣೆಯ ಕಾಂಗ್ರೆಸ್ ಆತ್ಮಾವಲೋಕನ ಸಭೆ ಭಾನುವಾರ ವೇಮಗಲ್‌ನಲ್ಲಿ ನಡೆಯಿತು.
ಹಿಂದೂಸ್ತಾನ್ ಸಮಾಚಾರ್ / ಎಸ್.ಚಂದ್ರಶೇಖರ್