ಸೂಡಾ ನಿವೇಶನ ಹಂಚಿಕೆಗೆ ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ
ಶಿವಮೊಗ್ಗ, 24 ಆಗಸ್ಟ್ (ಹಿ.ಸ.) : ಆ್ಯಂಕರ್ : ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ದಿ ಪ್ರಾಧಿಕಾರವು ತನ್ನ ವ್ಯಾಪ್ತಿಯಲ್ಲಿರುವ ಖಾಸಗಿ ಬಡಾವಣೆಗಳಲ್ಲಿ ಲಭ್ಯವಿರುವ ನಾಗರೀಕ ಸೌಲಭ್ಯ ನಿವೇಶನಗಳನ್ನು ಹಂಚಿಕೆ ಮಾಡುವ ಕುರಿತಾದ ಅರ್ಜಿ ಸಲ್ಲಿಸುವ ಅವಧಿಯನ್ನು ಸೆ.06 ರವರೆಗೆ ವಿಸ್ತರಿಸಲಾಗಿದೆ. ದಿ: 29-07
ಸೂಡಾ ನಿವೇಶನ ಹಂಚಿಕೆಗೆ ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ


ಶಿವಮೊಗ್ಗ, 24 ಆಗಸ್ಟ್ (ಹಿ.ಸ.) :

ಆ್ಯಂಕರ್ : ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ದಿ ಪ್ರಾಧಿಕಾರವು ತನ್ನ ವ್ಯಾಪ್ತಿಯಲ್ಲಿರುವ ಖಾಸಗಿ ಬಡಾವಣೆಗಳಲ್ಲಿ ಲಭ್ಯವಿರುವ ನಾಗರೀಕ ಸೌಲಭ್ಯ ನಿವೇಶನಗಳನ್ನು ಹಂಚಿಕೆ ಮಾಡುವ ಕುರಿತಾದ ಅರ್ಜಿ ಸಲ್ಲಿಸುವ ಅವಧಿಯನ್ನು ಸೆ.06 ರವರೆಗೆ ವಿಸ್ತರಿಸಲಾಗಿದೆ.

ದಿ: 29-07-2025 ರಂದು ಪ್ರಕಟಣೆ ಹೊರಡಿಸಿ, ನಿವೇಶನಕ್ಕಾಗಿ ಅರ್ಜಿಗಳನ್ನು ಸಲ್ಲಿಸಲು 29-08-2025 ಕಡೆಯ ದಿನವೆಂದು ನಿಗದಿಪಡಿಸಲಾಗಿತ್ತು. ಆದರೆ ಕಾರಣಾಂತರದಿಂದ ಇದೀಗ ಅರ್ಜಿ ಸಲ್ಲಿಸುವ ಕಡೆಯ ದಿನವನ್ನು ದಿ: 06-09-2025 ರವರೆಗೆ ವಿಸ್ತರಿಸಲಾಗಿದೆ.

ಹೆಚ್ಚಿನ ಮಾಹಿತಿಗೆ ಪ್ರಾಧಿಕಾರದ ವೆಬ್‌ಸೈಟ್ ಹಾಗೂ ಮೊಬೈಲ್ ಸಂಖ್ಯೆ : 9980005678 ನ್ನು ಸಂಪರ್ಕಿಸಬಹುದೆಂದು ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ದಿ ಪ್ರಾಧಿಕಾರದ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande