ಗೌರಸಮುದ್ರ ಮಾರಮ್ಮ ದೇವಿ ಜಾತ್ರೆ : ಪ್ರಾಣಿಬಲಿ ನಿಷೇಧ
ಚಿತ್ರದುರ್ಗ, 24 ಆಗಸ್ಟ್ (ಹಿ.ಸ.) : ಆ್ಯಂಕರ್ : ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲ್ಲೂಕು ಗೌರಸಮುದ್ರ ಗ್ರಾಮದ ಗೌರಸಮುದ್ರ ಮಾರಮ್ಮ ದೇವಿ ಜಾತ್ರೆಯು ಇದೇ ಆಗಸ್ಟ್ 25 ಮತ್ತು 26ರಂದು ನಡೆಯಲಿದ್ದು, ಈ ಜಾತ್ರೆಗೆ ಲಕ್ಷಾಂತರ ಜನ ಭಕ್ತಾದಿಗಳು ಆಗಮಿಸಲಿದ್ದಾರೆ. ಜಾತ್ರೆಗೆ ಬರುವ ಭಕ್ತಾದಿಗಳು ಜಾತ್ರೆಯ
ಗೌರಸಮುದ್ರ ಮಾರಮ್ಮ ದೇವಿ ಜಾತ್ರೆ : ಪ್ರಾಣಿಬಲಿ ನಿಷೇಧ


ಚಿತ್ರದುರ್ಗ, 24 ಆಗಸ್ಟ್ (ಹಿ.ಸ.) :

ಆ್ಯಂಕರ್ : ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲ್ಲೂಕು ಗೌರಸಮುದ್ರ ಗ್ರಾಮದ ಗೌರಸಮುದ್ರ ಮಾರಮ್ಮ ದೇವಿ ಜಾತ್ರೆಯು ಇದೇ ಆಗಸ್ಟ್ 25 ಮತ್ತು 26ರಂದು ನಡೆಯಲಿದ್ದು, ಈ ಜಾತ್ರೆಗೆ ಲಕ್ಷಾಂತರ ಜನ ಭಕ್ತಾದಿಗಳು ಆಗಮಿಸಲಿದ್ದಾರೆ.

ಜಾತ್ರೆಗೆ ಬರುವ ಭಕ್ತಾದಿಗಳು ಜಾತ್ರೆಯಲ್ಲಿ ಯಾವುದೇ ರೀತಿಯ ಪ್ರಾಣಿಬಲಿ ಮಾಡಬಾರದು ಹಾಗೂ ಅಕ್ರಮ ಮದ್ಯ ಮಾರಾಟ ಮತ್ತು ಜೂಜಾಟ ಆಡಬಾರದೆಂದು ಸಾರ್ವಜನಿಕರಿಗೆ ತಿಳಿಯಪಡಿಸಿದೆ.

ಪ್ರಾಣಿಬಲಿ, ಅಕ್ರಮ ಮದ್ಯ ಮಾರಾಟ ಮತ್ತು ಜೂಜಾಟವಾಡಿದ ಪಕ್ಷದಲ್ಲಿ ಶಿಕ್ಷೆಗೆ ಗುರಿಪಡಿಸಲಾಗುವುದು ಎಂದು ಜಿಲ್ಲಾ ಪೊಲೀಸ್ ಅಧೀಕ್ಷಕರು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande