ಅಕ್ರಮ ಬೆಟ್ಟಿಂಗ್ : ನ್ಯಾಯಾಧೀಶರ ಮುಂದೆ ಬಂಧಿತ ಶಾಸಕ ವೀರೇಂದ್ರ ಹಾಜರು
ಬೆಂಗಳೂರು, 24 ಆಗಸ್ಟ್ (ಹಿ.ಸ.) : ಆ್ಯಂಕರ್ : ಚಿತ್ರದುರ್ಗದ ಕಾಂಗ್ರೆಸ್ ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ ಅವರನ್ನು ಸಿಕ್ಕಿಂನಲ್ಲಿ ಬಂಧಿಸಿದ್ದ ಇಡಿ ಅಧಿಕಾರಿಗಳು ಬೆಂಗಳೂರಿಗೆ ಕರೆ ತಂದಿದ್ದಾರೆ. ವಿಮಾನ ನಿಲ್ದಾಣದಿಂದ ಅವರನ್ನು ನೇರವಾಗಿ ಬೌರಿಂಗ್ ಆಸ್ಪತ್ರೆಗೆ ಕರೆದೊಯ್ದು ವೈದ್ಯಕೀಯ ಪರೀಕ್ಷೆ ನಡೆಸಿದ
Verendra


ಬೆಂಗಳೂರು, 24 ಆಗಸ್ಟ್ (ಹಿ.ಸ.) :

ಆ್ಯಂಕರ್ : ಚಿತ್ರದುರ್ಗದ ಕಾಂಗ್ರೆಸ್ ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ ಅವರನ್ನು ಸಿಕ್ಕಿಂನಲ್ಲಿ ಬಂಧಿಸಿದ್ದ ಇಡಿ ಅಧಿಕಾರಿಗಳು ಬೆಂಗಳೂರಿಗೆ ಕರೆ ತಂದಿದ್ದಾರೆ. ವಿಮಾನ ನಿಲ್ದಾಣದಿಂದ ಅವರನ್ನು ನೇರವಾಗಿ ಬೌರಿಂಗ್ ಆಸ್ಪತ್ರೆಗೆ ಕರೆದೊಯ್ದು ವೈದ್ಯಕೀಯ ಪರೀಕ್ಷೆ ನಡೆಸಿದ ಬಳಿಕ ಶಾಂತಿನಗರದಲ್ಲಿರುವ ಇಡಿ ಕಚೇರಿಗೆ ಕರೆದೊಯ್ದಿದ್ದಾರೆ.

ಇಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಗಜಾನನ ಹೆಗ್ಡೆ ನಿವಾಸದಲ್ಲಿ ವೀರೇಂದ್ರ ಪಪ್ಪಿ ಅವರನ್ನು ಹಾಜರುಪಡಿಸುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

ಅಕ್ರಮವಾಗಿ ಬೆಟ್ಟಿಂಗ್ ಕಂಪನಿ ನಡೆಸಿ ಹಣ ವರ್ಗಾವಣೆ ಮಾಡಿದ ಪ್ರಕರಣದಲ್ಲಿ ವೀರೇಂದ್ರ ಪಪ್ಪಿ ವಿರುದ್ಧ ಇಡಿ ತನಿಖೆ ಮುಂದುವರಿದಿದ್ದು, ಸಿಕ್ಕಿಂನಲ್ಲಿ ಅವರನ್ನು ಬಂಧಿಸಲಾಗಿತ್ತು.

ಆಗಸ್ಟ್ 22ರಂದು ಚಿತ್ರದುರ್ಗ ಸೇರಿದಂತೆ ಒಟ್ಟು 30 ಸ್ಥಳಗಳಲ್ಲಿ ಇಡಿ ದಾಳಿ ನಡೆಸಿ, ವಿರೇಂದ್ರ ಹಾಗೂ ಅವರ ಸಹೋದರರ ಮನೆ ಮತ್ತು ಕಚೇರಿಯಿಂದ ದಾಖಲೆಗಳ ಪರಿಶೀಲನೆ ನಡೆಸಿತ್ತು.

ಈ ವೇಳೆ 12 ಕೋಟಿ ನಗದು, 1 ಕೋಟಿ ಮೌಲ್ಯದ ವಿದೇಶಿ ಕರೆನ್ಸಿ, 6 ಕೋಟಿ ಮೌಲ್ಯದ ಚಿನ್ನಾಭರಣ, 10 ಕೆಜಿ ಬೆಳ್ಳಿ, 17 ಬ್ಯಾಂಕ್ ಖಾತೆಗಳು ಹಾಗೂ 2 ಬ್ಯಾಂಕ್ ಲಾಕರ್‌ಗಳನ್ನು ಜಪ್ತಿ ಮಾಡಲಾಗಿದೆ.

----

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande