ಭಾರತದ ಐಎಡಬ್ಲುಎಸ್ ಪರೀಕ್ಷೆ ಯಶಸ್ವಿ
ನವದೆಹಲಿ, 24 ಆಗಸ್ಟ್ (ಹಿ.ಸ.) : ಆ್ಯಂಕರ್ : ಭಾರತವು ಇಂಟಿಗ್ರೇಟೆಡ್ ಏರ್ ಡಿಫೆನ್ಸ್ ವೆಪನ್ ಸಿಸ್ಟಮ್‌ ಅನ್ನು ಯಶಸ್ವಿಯಾಗಿ ಪರೀಕ್ಷಿಸುವ ಮೂಲಕ ಮಹತ್ವದ ಮೈಲಿಗಲ್ಲು ಸಾಧಿಸಿದೆ. ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ ಆಗಸ್ಟ್ 23ರಂದು ಒಡಿಶಾ ಕರಾವಳಿಯಲ್ಲಿ ಮಧ್ಯಾಹ್ನ 12.30ಕ್ಕೆ ಈ ವ್ಯವಸ್ಥೆಯ
Success


ನವದೆಹಲಿ, 24 ಆಗಸ್ಟ್ (ಹಿ.ಸ.) :

ಆ್ಯಂಕರ್ : ಭಾರತವು ಇಂಟಿಗ್ರೇಟೆಡ್ ಏರ್ ಡಿಫೆನ್ಸ್ ವೆಪನ್ ಸಿಸ್ಟಮ್‌ ಅನ್ನು ಯಶಸ್ವಿಯಾಗಿ ಪರೀಕ್ಷಿಸುವ ಮೂಲಕ ಮಹತ್ವದ ಮೈಲಿಗಲ್ಲು ಸಾಧಿಸಿದೆ. ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ ಆಗಸ್ಟ್ 23ರಂದು ಒಡಿಶಾ ಕರಾವಳಿಯಲ್ಲಿ ಮಧ್ಯಾಹ್ನ 12.30ಕ್ಕೆ ಈ ವ್ಯವಸ್ಥೆಯ ಯಶಸ್ವಿ ಪರೀಕ್ಷೆ ನಡೆಸಿದೆ.

ರಕ್ಷಣಾ ಸಚಿವ ರಾಜನಾಥ್ ಸಿಂಗ್ ತಮ್ಮ ಎಕ್ಸ ಖಾತೆಯಲ್ಲಿ ಡಿಆರ್ ಡಿಒ ತಂಡವನ್ನು ಅಭಿನಂದಿಸಿದ್ದು, ಐಎಡಬ್ಲುಎಸ್ ಯಶಸ್ವಿ ಪರೀಕ್ಷೆ ದೇಶದ ಬಹು-ಹಂತದ ವಾಯು ರಕ್ಷಣಾ ಸಾಮರ್ಥ್ಯವನ್ನು ಬಲಪಡಿಸಿದೆ ಎಂದು ಹೇಳಿದ್ದಾರೆ. ಇದರಿಂದ ಶತ್ರುಗಳ ವಾಯು ಬೆದರಿಕೆಗಳ ವಿರುದ್ಧ ಭಾರತದ ಪ್ರಾದೇಶಿಕ ಭದ್ರತೆ ಮತ್ತಷ್ಟು ವೃದ್ಧಿಯಾಗಲಿದೆ.

ಐಎಡಬ್ಲುಎಸ್ ಒಂದು ಬಹು-ಪದರದ ವಾಯು ರಕ್ಷಣಾ ವ್ಯವಸ್ಥೆಯಾಗಿದ್ದು, ಸ್ಥಳೀಯವಾಗಿ ಅಭಿವೃದ್ಧಿಪಡಿಸಿದ ಕ್ಷಿಪಣಿಗಳು ಮತ್ತು ಶಕ್ತಿಶಾಲಿ ಲೇಸರ್ ಶಸ್ತ್ರಾಸ್ತ್ರಗಳನ್ನು ಒಳಗೊಂಡಿದೆ. ಶತ್ರು ಯುದ್ಧವಿಮಾನಗಳು, ಡ್ರೋನ್‌ಗಳು, ಹೆಲಿಕಾಪ್ಟರ್‌ಗಳು ಸೇರಿದಂತೆ ಎಲ್ಲಾ ರೀತಿಯ ವಾಯು ದಾಳಿಗಳನ್ನು ತಟಸ್ಥಗೊಳಿಸುವ ಸಾಮರ್ಥ್ಯ ಈ ವ್ಯವಸ್ಥೆಗೆ ಇದೆ. ಜೊತೆಗೆ, ಶತ್ರು ಶಸ್ತ್ರಾಸ್ತ್ರಗಳನ್ನು ಗಾಳಿಯಲ್ಲಿಯೇ ನಾಶಪಡಿಸುವ ತಂತ್ರಜ್ಞಾನವನ್ನು ಹೊಂದಿದೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande