ಶಿವಮೊಗ್ಗ, 24 ಆಗಸ್ಟ್ (ಹಿ.ಸ.) :
ಆ್ಯಂಕರ್ : ಶಿವಮೊಗ್ಗ ಜಿಲ್ಲೆಯ 2025-26ನೇ ಸಾಲಿನಲ್ಲಿ ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ಧಿ ನಿಗಮದ ವ್ಯಾಪ್ತಿಗೆ ಬರುವ ಅಲೆಮಾರಿ ಸಮುದಾಯದವರಿಗೆ ಆರ್ಥಿಕ ಅಭಿವೃದ್ಧಿಯನ್ನು ಹೊಂದಲು ನಾನಾ ಯೋಜನೆಗಳಾದ ಸ್ವಯಂ ಉದ್ಯೋಗ ನೇರಸಾಲ ಯೋಜನೆ, ಉದ್ಯಮಶೀಲತಾ ಯೋಜನೆ, ಸ್ವಾವಲಂಭಿ ಸಾರಥಿ ಯೋಜನೆ, ಭೂ ಒಡೆತನ ಯೋಜನೆ, ಮೈಕ್ರೋ ಕ್ರೆಡಿಟ್ ಯೋಜನೆ ಹಾಗೂ ಗಂಗಾ ಕಲ್ಯಾಣ ಯೋಜನೆಗೆ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತರು ಸೇವಾಸಿಂಧು ಪೋರ್ಟಲ್ ಮೂಲಕ ಕರ್ನಾಟಕ ಒನ್, ಗ್ರಾಮಾ ಒನ್‌ಗಳಲ್ಲಿ ಸೆ. 10 ರೊಳಗಾಗಿ ಅರ್ಜಿ ಸಲ್ಲಿಸುವಂತೆ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa