ರಾಯಚೂರು, 24 ಆಗಸ್ಟ್ (ಹಿ.ಸ.) :
ಆ್ಯಂಕರ್ : ಜಾಲಹಳ್ಳಿ ಜಯಶಾಂತಲಿಂಗೇಶ್ವರ ಮಹಾ ಸಂಸ್ಥಾನ ಮಠಕ್ಕೆ ಸಣ್ಣ ನೀರಾವರಿ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಸಚಿವರಾದ ಎನ್ಎಸ್ ಬೋಸರಾಜು ಅವರು ಶ್ರಾವಣ ಮಾಸದ ನಿಮಿತ್ಯ ಭೇಟಿ ನೀಡಿ ನಾಡಿನ ಸಮಸ್ತ ಜನತೆಗೆ ಒಳಿತಾಗಲಿ ಎಂದು ಪ್ರಾರ್ಥಿಸಿದರು.
ನಂತರ ಶ್ರೀ ಮಠದ ಶ್ರೀಗಳಾದ ಶ್ರೀ ಜಯಶಾಂತಲಿಂಗೇಶ್ವರ ಶಿವಾಚಾರ್ಯ ಸ್ವಾಮೀಜಿ ಗಳಿಗೆ ಸಚಿವರು ಸನ್ಮಾನಿಸಿ ಆಶೀರ್ವಾದ ಪಡೆದರು. ನಂತರ ಶ್ರೀಗಳು ಸಚಿವರಿಗೆ ಸನ್ಮಾನಿಸಿ ಆಶೀರ್ವಾದ ಪಡೆದರು.
ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರಾದ ರಾಜಶೇಖರ ನಾಯಕ, ರಾಮಣ್ಣ ಇರಬಗೇರಾ, ದೊಡ್ಡ ಬಸ್ಸಪ್ಪ ಗೌಡ, ಜಿ ಶಿವಮೂರ್ತಿ, ರುದ್ರಪ್ಪ ಅಂಗಡಿ, ಅಮರೇಗೌಡ ಹಂಚಿನಾಳ, ಆದನಗೌಡ ಪಾಟೀಲ್, ಯುವ ಕಾಂಗ್ರೆಸ್ ಮುಖಂಡರಾದ ಸಂದೀಪ್ ಪಾಟೀಲ್, ಸುರೇಶ, ತಿಮ್ಮಣ್ಣ ಸೇರಿದಂತೆ ಅನೇಕರಿದ್ದರು.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್